ಮುಖಪುಟ

ಕನಿಷ್ಠ ಮೂಲವೇತನ ₹16,350ಕ್ಕೆ ಹೆಚ್ಚಳ?

ನೌಕರರ ಆರಂಭಿಕ ವೇತನ ಶ್ರೇಣಿ ಅಂದರೆ ‘ಡಿ’ ಗ್ರೂಪ್‌ ನೌಕರರಿಗೆ ಮೂಲವೇತನ ₹9,600 ಇದ್ದು, ತುಟ್ಟಿಭತ್ಯೆ ಈಗ ಶೇ 45.25ರಷ್ಟಿದೆ. ಬೆಂಗಳೂರಿನಲ್ಲಿ ಮನೆಬಾಡಿಗೆ ಭತ್ಯೆ ಮೂಲವೇತನದ ಶೇ 30ರಷ್ಟಿದೆ.

ರಾಹುಲ್‌ ಯುಗಾರಂಭ; ಸೋನಿಯಾ ಭಾವುಕ ವಿದಾಯ

ಸತತ 19 ವರ್ಷಗಳ ಕಾಲ ಪಕ್ಷದ ಅಧ್ಯಕ್ಷೆಯಾಗಿ ಸೇವೆ ಸಲ್ಲಿಸಿದ ಸೋನಿಯಾ ಗಾಂಧಿ, ಸಾವಿರಾರು ಬೆಂಬಲಿಗರು ಮತ್ತು ಕಾರ್ಯಕರ್ತರೆದುರು ತಮ್ಮ ಪುತ್ರ ರಾಹುಲ್‌ಗೆ ಅಧಿಕಾರ ಹಸ್ತಾಂತರಿಸಿದರು.

 

ಮುಖ್ಯಮಂತ್ರಿಗೆ ‘ಚಿನ್ನದ ಕಿರೀಟ’ ಉಡುಗೊರೆ!

ಚಿನ್ನದ ಕಿರೀಟದ ತೂಕ 500 ಗ್ರಾಂ ಎಂದು ಕೆಲವರು, 250 ಗ್ರಾಂ ಎಂದೂ ಇನ್ನು ಕೆಲವರು ತಿಳಿಸಿದರು. ‘ಕಿರೀಟದ ಅಂದಾಜು ಮೌಲ್ಯ ₹5 ಲಕ್ಷ. ಖಡ್ಗದ ಮೌಲ್ಯ ₹30 ಸಾವಿರ ಹಾಗೂ ಹಾರದ ಮೌಲ್ಯ ₹25 ಸಾವಿರ ಇರಬಹುದು’ ಎಂದು ಶಾಸಕರ ಆಪ್ತ ಮೂಲಗಳು ಹೇಳುತ್ತವೆ.

ಎಚ್‌1ಬಿ ವೀಸಾ ನಿಯಮ ಬದಲು ಪತ್ನಿ–ಪತಿಯ ಉದ್ಯೋಗಕ್ಕೆ ಕತ್ತರಿ?

ಒಬಾಮ ಸರ್ಕಾರದ ರೂಪಿಸಿದ್ದ ನಿಯಮಾವಳಿಯಲ್ಲಿ ಬದಲಾವಣೆ ತರುವ ಆಲೋಚನೆ ಇದೆ ಎಂದು ಅಮೆರಿಕದ ಆಂತರಿಕ ಭದ್ರತಾ ಇಲಾಖೆ ಸುತ್ತೋಲೆಯಲ್ಲಿ ತಿಳಿಸಿದೆ.

ಪ್ರಜಾವಾಣಿ ರೆಸಿಪಿಗಾಗಿ ಇಲ್ಲಿ ಕ್ಲಿಕ್ಕಿಸಿ

ರಾಜಕೀಯ ಪ್ರವೇಶಿಸಲ್ಲ: ಪ್ರಿಯಾಂಕಾ

ಕಾಂಗ್ರೆಸ್‌ ಅಧ್ಯಕ್ಷ ಹುದ್ದೆಗೆ ಸೋನಿಯಾ ಗಾಂಧಿ ನಿವೃತ್ತಿ ಘೋಷಿಸಿದ ನಂತರ ಪ್ರಿಯಾಂಕಾ ರಾಜಕೀಯಕ್ಕೆ ಧುಮಕುತ್ತಾರೆ ಎಂಬ ವದಂತಿಗಳಿಗೆ ಅವರು ತೆರೆ ಎಳೆದಿದ್ದಾರೆ.

‘ಭರವಸೆ ಮೂಡಿಸಿದ ರಾಹುಲ್‌ ನಾಯಕತ್ವ’

‘ಭಯ ಹುಟ್ಟಿಸುವ ರಾಜಕಾರಣ’ ದೇಶವನ್ನು ನಿಯಂತ್ರಣಕ್ಕೆ ತೆಗೆದುಕೊಳ್ಳಲು ರಾಹುಲ್‌ ಅವಕಾಶ ನೀಡುವುದಿಲ್ಲ ಎಂದು ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ವಿಶ್ವಾಸ ವ್ಯಕ್ತಪಡಿಸಿದರು.

 

ನಾನೂ ರಾಜಕೀಯ ನಿವೃತ್ತಿ ಅಂಚಿನಲ್ಲಿದ್ದೇನೆ: ಸಿ.ಎಂ

‘ಮುಂಬರುವ ವಿಧಾನಸಭೆ ಚುನಾವಣೆ ಬಳಿಕ ಮತ್ತೆಸ್ಪರ್ಧಿಸುವುದಿಲ್ಲ. ಆದರೆ ರಾಜಕೀಯದಲ್ಲಿ ಸಕ್ರಿಯವಾಗಿರುತ್ತೇನೆ. ಈ ಹಿಂದೆಯೇ ನಿವೃತ್ತಿ ಪಡೆಯಬೇಕು ಎಂದು ನಿರ್ಧರಿಸಿದ್ದೆ. ಆದರೆ ಬಿಜೆಪಿಯವರ ಕೋಮು ಪ್ರಚೋದನೆಗೆ ಕಡಿವಾಣ ಹಾಕಬೇಕು ಎಂಬ ಕಾರಣಕ್ಕೆ ಕಳೆದ ಚುನಾವಣೆಯಲ್ಲಿ ಸ್ಪರ್ಧಿಸಿದೆ’–ಮುಖ್ಯಮಂತ್ರಿ ಸಿದ್ದರಾಮಯ್ಯ.

ಸಿದ್ದರಾಮಯ್ಯ ಒಬ್ಬ ಅಯೋಗ್ಯ: ಯಡಿಯೂರಪ್ಪ ವಾಗ್ದಾಳಿ

‘ಲಂಚ ಪ್ರಕರಣದಲ್ಲಿ ನಾನು ಜೈಲಿಗೆ ಹೋಗಿದ್ದಾಗಿ ನನ್ನ ವಿರುದ್ಧ ಪದೇಪದೇ ಸುಳ್ಳು ಆರೋಪ ಮಾಡುತ್ತಿದ್ದಾರೆ. ಅವರಿಗೆ ತಾಕತ್ತಿದ್ದರೆ ಒಂದೇ ಒಂದು ದಾಖಲೆ ನೀಡಲಿ’–ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್. ಯಡಿಯೂರಪ್ಪ.

ಅಧಿಕಾರಕ್ಕೆ ಬರುವವರೆಗೂ ವಿರಮಿಸುವುದಿಲ್ಲ– ಕುಮಾರಸ್ವಾಮಿ

‘ಬಿಜೆಪಿ ಹಾಗೂ  ಕಾಂಗ್ರೆಸ್ ಪಕ್ಷಕ್ಕೆ ಅವಕಾಶ ನೀಡಿದ್ದೀರಿ. ಅದೇ ರೀತಿ ನಮಗೂ ಒಂದು ಅವಕಾಶ ಕೊಡಿ. ರಾಜ್ಯದಾದ್ಯಂತ ಪ್ರವಾಸ ಮಾಡಿ ಪಕ್ಷವನ್ನು ಸಂಘಟಿಸುತ್ತೇನೆ’  

ಎಸ್‌ಎಸ್‌ಎಲ್‌ಸಿ: ಪ್ರವೇಶಪತ್ರ ಆನ್‌ಲೈನ್‌ನಲ್ಲಿ ಒದಗಿಸಲು ಚಿಂತನೆ

ಈ ಶೈಕ್ಷಣಿಕ ವರ್ಷದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳ ವಿವರಗಳನ್ನು ಈ ಹಿಂದಿನಂತೆ ಓ.ಎಂ.ಆರ್ ಬದಲು ಎಸ್‌.ಎ.ಟಿ.ಎಸ್ ಮೂಲಕ ಸಲ್ಲಿಸಲು ಸೂಚಿಸಲಾಗಿದೆ. ಸರ್ಕಾರಿ, ಖಾಸಗಿ ಮತ್ತು ಅನುದಾನಿತ ಶಾಲೆಗಳ ಮುಖ್ಯಸ್ಥರು ತಮ್ಮ ವಿದ್ಯಾರ್ಥಿಗಳ ವಿವರಗಳನ್ನು ಆನ್‌ಲೈನ್‌ನಲ್ಲಿ ಭರ್ತಿ ಮಾಡಬೇಕು.