ಕೇಬಲ್‌ ಟಿ.ವಿ: ₹130ಕ್ಕಿಂತ ಹೆಚ್ಚು ಶುಲ್ಕ ಪಡೆದರೆ ಕ್ರಮ

21 Mar, 2017
ಪ್ರಜಾವಾಣಿ ವಾರ್ತೆ

ಬೆಂಗಳೂರು: 100 ಚಾನೆಲ್‌ ವೀಕ್ಷಿಸುವ ಸೌಲಭ್ಯ ನೀಡಿದಲ್ಲಿ ₹130 ಶುಲ್ಕ ವಿಧಿಸಬೇಕು. ಅದಕ್ಕಿಂತ ಹೆಚ್ಚು ವಸೂಲಿ ಮಾಡಿದರೆ ಕ್ರಮ ಕೈಗೊಳ್ಳಲಾಗುವುದು ಗೃಹ ಸಚಿವ ಜಿ. ಪರಮೇಶ್ವರ್‌ ವಿಧಾನಪರಿಷತ್ತಿನಲ್ಲಿ ಸೋಮವಾರ ತಿಳಿಸಿದರು. 

ಜೆಡಿಎಸ್‌ನ ಪುಟ್ಟಣ್ಣ ಅವರ ಗಮನ ಸೆಳೆಯುವ ಸೂಚನೆ ಮೇಲೆ ನಡೆದ ಚರ್ಚೆಗೆ ಅವರು ಉತ್ತರ ನೀಡಿದರು. ಭಾರತೀಯ ದೂರಸಂಪರ್ಕ ನಿಯಂತ್ರಣ ಪ್ರಾಧಿಕಾರ (ಟಿಆರ್‌ಎಐ) ಕೇಬಲ್‌ ಸಂಪರ್ಕಕ್ಕೆ ದರ ನಿಗದಿ ಮಾಡಿ ಇದೇ ತಿಂಗಳು ನಿರ್ಣಯ ಕೈಗೊಂಡಿದೆ. ಹೆಚ್ಚುವರಿ 25 ಚಾನೆಲ್‌ಗಳಿಗೆ ಹೆಚ್ಚುವರಿಯಾಗಿ ₹20 ಮಾತ್ರ ಶುಲ್ಕ ಪಡೆಯಬೇಕು ಎಂದಿದೆ. ಇದಕ್ಕಿಂತ ಹೆಚ್ಚು ಹಣ ಪಡೆಯುವ ಕೇಬಲ್‌ ಸಂಸ್ಥೆಗಳ ಬಗ್ಗೆ ನಿಗಾ ವಹಿಸಲು ರಾಜ್ಯ ಮತ್ತು ಜಿಲ್ಲಾ ಮಟ್ಟದ ಸಮಿತಿಗಳಿಗೆ ಸೂಚಿಸಲಾಗುವುದು ಎಂದರು.

ಕೇಬಲ್‌ ನೆಟ್‌ವರ್ಕ್‌ ಉದ್ಯಮದಲ್ಲಿ ವರ್ಷಕ್ಕೆ ಅಂದಾಜು ₹5 ಸಾವಿರ ಕೋಟಿ ವ್ಯವಹಾರ ನಡೆಯುತ್ತಿದೆ. ಆದರೆ, ರಾಜ್ಯ ಸರ್ಕಾರಕ್ಕೆ ನಯಾ ಪೈಸೆ ತೆರಿಗೆ ಬರುತ್ತಿಲ್ಲ. ಕೇಬಲ್‌ ನೆಟ್‌ವರ್ಕ್‌ ಸಂಸ್ಥೆಗಳ ಮೇಲೆ ನಿಯಂತ್ರಣ ಹೇರಲು ಮತ್ತು ಈ ಉದ್ಯಮದಿಂದ ರಾಜ್ಯ ಸರ್ಕಾರದ ಬೊಕ್ಕಸಕ್ಕೆ ಆದಾಯ ಸಂಗ್ರಹಿಸಲು ಹೊಸ ಕಾಯ್ದೆ ತರುವುದಾಗಿ ಅವರು ಹೇಳಿದರು.

‘ಕೇಬಲ್‌ ಮಾಫಿಯಾ ಇದೆ’
ಇದಕ್ಕೂ ಮುನ್ನ ವಿಷಯ ಪ್ರಸ್ತಾಪಿಸಿದ ಪುಟ್ಟಣ್ಣ, ‘ಕೇಬಲ್‌ ನೆಟ್‌ವರ್ಕ್‌ ಹೆಸರಿನಲ್ಲಿ ಖಾಸಗಿ  ಏಜೆನ್ಸಿಗಳು ಗ್ರಾಹಕರಿಂದ ಸಾವಿರಾರು ರೂಪಾಯಿ ವಸೂಲಿ ಮಾಡುತ್ತಿವೆ. ರಾಜ್ಯದಲ್ಲಿ ಕೇಬಲ್‌ ಮಾಫಿಯಾ ಕಾರ್ಯರ್ನಿರ್ವಹಿಸುತ್ತಿದೆ’ ಎಂದು ದೂರಿದರು.

ಇದಕ್ಕೆ ದನಿಗೂಡಿಸಿದ ಕಾಂಗ್ರೆಸ್‌ನ ಎಚ್‌.ಎಂ. ರೇವಣ್ಣ, ‘ರೌಡಿಗಳು, ಗ್ಯಾಂಗ್‌ಸ್ಟರ್‌ಗಳು ಕೇಬಲ್‌ ಮಾಫಿಯಾ ನಡೆಸುತ್ತಿದ್ದಾರೆ. ಒಂದೇ ಮನೆಯಲ್ಲಿ ಎರಡು ಮೂರು ಟಿ.ವಿ ಇದ್ದರೆ ಎಲ್ಲದಕ್ಕೂ ಪ್ರತ್ಯೇಕ ಶುಲ್ಕ ವಿಧಿಸುತ್ತಾರೆ’ ಎಂದರು.

ಬಿಜೆಪಿಯ ರಾಮಚಂದ್ರಗೌಡ, ‘ಎಷ್ಟು ಟಿ.ವಿ ಇದೆ ಎಂದು ಕೇಬಲ್‌ನವರು ಮನೆಯೊಳಗೇ ಬಂದು ಹುಡುಕುತ್ತಾರೆ. ಸರ್ಕಾರ ಟಿ.ವಿ ಮೇಲೆ ತೆರಿಗೆ ವಿಧಿಸಿ, ಉಚಿತ ಕೇಬಲ್‌ ಸಂಪರ್ಕ ನೀಡುವ ಪ್ರಯತ್ನ ಮಾಡಬಹುದು’ ಎಂದು ಸಲಹೆ ನೀಡಿದರು.

₹ 3,600 ಕೋಟಿ ವ್ಯವಹಾರ
ಕಾಂಗ್ರೆಸ್‌ನ ವಿ.ಎಸ್. ಉಗ್ರಪ್ಪ, ‘ರಾಜ್ಯದಲ್ಲಿ 1.25 ಕೋಟಿ ಕುಟುಂಬಗಳಿವೆ. ಅದರಲ್ಲಿ ಸರಿಸುಮಾರು 1 ಕೋಟಿ ಕುಟುಂಬಗಳಲ್ಲಿ ಟಿ.ವಿ ಇದೆ. ಪ್ರತಿ ಟಿ.ವಿಗೆ ₹ 300 ಎಂದರೂ ತಿಂಗಳಿಗೆ ₹300 ಕೋಟಿ ಆಗುತ್ತದೆ. ಒಂದು ವರ್ಷಕ್ಕೆ ₹3,600 ಕೋಟಿ ವಹಿವಾಟು ಕೇಬಲ್‌ ನೆಟ್‌ವರ್ಕ್‌ಗಳ ಮೂಲಕ ನಡೆಯುತ್ತಿದೆ. ಇಷ್ಟಾದರೂ ಸರ್ಕಾರಕ್ಕೆ ಒಂದು ರೂಪಾಯಿ ತೆರಿಗೆ ಬರುವುದಿಲ್ಲ. ರಾಜ್ಯ ಸರ್ಕಾರ ನಿಯಂತ್ರಣ ಹೇರಬೇಕು. ಇದು ಕೇಂದ್ರ ಸರ್ಕಾರಕ್ಕೆ ಸೇರಿದ್ದು ಎಂದು ಸುಮ್ಮನಾಗಬಾರದು’ ಎಂದು ಸಲಹೆ ನೀಡಿದರು.

‘ರೇವಣ್ಣನ ಮನೆಯಲ್ಲಿ ಮೂರು ಸೆಟಪ್‌!’
‘ರೇವಣ್ಣನ ಮನೆಯಲ್ಲಿ 3 ಸೆಟಪ್‌ ಇವೆ’ ಎಂದು ಕಾಂಗ್ರೆಸ್‌ನ ಉಗ್ರಪ್ಪ ಹೇಳಿದ್ದು ಸದನವನ್ನು ನಗೆಗಡಲಲ್ಲಿ ತೇಲಿಸಿತು.
ತಕ್ಷಣ ಪ್ರತಿಕ್ರಿಯಿಸಿದ ಎಚ್‌.ಎಂ.ರೇವಣ್ಣ, ‘3 ಸೆಟಪ್‌ ಅಲ್ಲ, 3 ಟಿ.ವಿ, 3 ಸೆಟ್‌ಟಾಪ್‌ ಬಾಕ್ಸ್‌ ಇವೆ. ಒಂದೇ ಕುಟುಂಬ ಇದೆ’ ಎಂದರು.

‘ಸಿದ್ದರಾಮಯ್ಯ ಅವರಿಗೆ ರೇವಣ್ಣ ಆಪ್ತರು. ರೇವಣ್ಣನ ಮನೆಯಲ್ಲಿ ಎಷ್ಟಿವೆ ಎಂದು ಮುಖ್ಯಮಂತ್ರಿಯೇ ಸ್ಪಷ್ಟಪಡಿಸಬೇಕು’ ಎಂದು ಕೆ.ಎಸ್‌. ಈಶ್ವರಪ್ಪ ಕಾಲೆಳೆದರು. ‘ರೇವಣ್ಣ ನನಗಿಂತಲೂ ನಿನ್ನ ಜೊತೆಗೇ ಕ್ಲೋಸ್‌. ನಿನಗೆ ಗೊತ್ತಿಲ್ಲದ್ದು ನನಗೆ ಹೇಗೆ ಗೊತ್ತಿರುತ್ತೆ ಈಶ್ವರಪ್ಪ’ ಎಂದು ಸಿದ್ದರಾಮಯ್ಯ  ಪ್ರತಿಕ್ರಿಯಿಸಿದಾಗ  ಸದನ ನಗೆಯಲ್ಲಿ ತೇಲಿತು.

* * *
ಕೇಬಲ್‌ ನೆಟ್‌ವರ್ಕ್‌ ಸಂಸ್ಥೆಗಳು ವಿದ್ಯುತ್‌ ಕಂಬಗಳಿಗೆ ವೈರ್‌ ಸುತ್ತಿರುತ್ತವೆ. ಸರ್ಕಾರಿ ಕಂಬಗಳನ್ನು ಬಳಸಿದ್ದಕ್ಕಾಗಿ ಶುಲ್ಕ ಕಟ್ಟಿಸಿಕೊಳ್ಳಬೇಕು.
–ಗಣೇಶ್‌ ಕಾರ್ಣಿಕ್‌,
ಬಿಜೆಪಿ ಸದಸ್ಯ

ಚೀನಾದಿಂದ ಆಮದಾಗುವ ಗುಣಮಟ್ಟದ್ದಲ್ಲದ ಸೆಟ್‌ಟಾಪ್‌ ಬಾಕ್ಸ್‌ಗೆ ಸಾವಿರಾರು ರೂಪಾಯಿ ಪಡೆದು ಗ್ರಾಹಕರನ್ನು ವಂಚಿಸಲಾಗುತ್ತಿದೆ.
–ಜಯಮಾಲಾ,
ಕಾಂಗ್ರೆಸ್ ಸದಸ್ಯೆ

ಕ್ರಿಕೆಟ್‌ ಇದ್ದಾಗ ಸ್ಪೋರ್ಟ್ಸ್‌ ಚಾನೆಲ್‌ ಸ್ಥಗಿತಗೊಳಿಸಲಾಗುತ್ತದೆ. ಕೇಳಿದರೆ ಚಾನೆಲ್‌ ಶುಲ್ಕ ಹೆಚ್ಚಾಗಿದೆ. ಹೆಚ್ಚು ಹಣ ಕೊಡಿ ಎನ್ನುತ್ತಾರೆ.
–ಐವನ್‌ ಡಿಸೋಜಾ,
ಕಾಂಗ್ರೆಸ್ ಸದಸ್ಯ

Read More

Comments
ಮುಖಪುಟ

ಸಾರ್ವಜನಿಕವಾಗಿ ಸುಳ್ಳು ಹೇಳಿದ ಶಾ

‘ಕಾಂಗ್ರೆಸ್ ಶಾಸಕ ಎನ್‌.ಎ.ಹ್ಯಾರಿಸ್‌ ಮಗ ಮೊಹಮದ್‌ ನಲಪಾಡ್‌ನಿಂದ ಹಲ್ಲೆಗೊಳಗಾಗಿರುವ ವಿದ್ವತ್‌ ನಮ್ಮ ಕಾರ್ಯಕರ್ತ’ ಎಂದು ಮಂಗಳವಾರ ಮಧ್ಯಾಹ್ನ ಬಿ.ಸಿ.ರೋಡ್‌ನಲ್ಲಿ ಹೇಳಿಕೆ ನೀಡಿದ್ದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ, ಸಂಜೆಯ ವೇಳೆಗೆ ಸುರತ್ಕಲ್‌ನಲ್ಲಿ ಅದನ್ನು ಹಿಂಪಡೆದು ಉದ್ದೇಶಪೂರ್ವಕ ವಾಗಿ ಸುಳ್ಳು ಹೇಳಿರುವುದಾಗಿ ಸ್ಪಷ್ಟನೆ ನೀಡಿದರು.

ಅಧಿಕ ಶುಲ್ಕ ವಸೂಲಿ: ಖಾಸಗಿ ಆಸ್ಪತ್ರೆಗಳ ಹಗಲು ದರೋಡೆ

ಔಷಧ, ವೈದ್ಯಕೀಯ ಸಲಕರಣೆಗಳಿಗಾಗಿ ಅಸಹಾಯಕ ರೋಗಿಗಳಿಂದ ಶೇ 1,192 ರಷ್ಟು ಹೆಚ್ಚಿಗೆ ಹಣವನ್ನು ಖಾಸಗಿ ಆಸ್ಪತ್ರೆಗಳು ಲೂಟಿ ಮಾಡಿವೆ ರಾಷ್ಟ್ರೀಯ ಔಷಧ ಬೆಲೆ ನಿಯಂತ್ರಣ ಪ್ರಾಧಿಕಾರ (ಎನ್‌ಪಿಪಿಎ) ವರದಿ ಹೇಳಿದೆ.

ಮುಖ್ಯ ಕಾರ್ಯದರ್ಶಿ ಮೇಲೆ ಎಎಪಿ ಶಾಸಕರ ಹಲ್ಲೆ?

ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ನಿವಾಸದಲ್ಲಿ ಸೋಮವಾರ ರಾತ್ರಿ ಆಮ್‌ ಆದ್ಮಿ ಪಕ್ಷದ(ಎಎಪಿ) ಇಬ್ಬರು ಶಾಸಕರು ತಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ದೆಹಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಅಂಶು ಪ್ರಕಾಶ್‌ ಆರೋಪಿಸಿದ್ದಾರೆ.

ಪಾಲಿಕೆ ಕಚೇರಿಯಲ್ಲಿ ಕಾಂಗ್ರೆಸ್ ಮುಖಂಡನ ದರ್ಪ

ವಿವಾದಿತ ಜಮೀನಿಗೆ ಖಾತೆ ಮಾಡಿಕೊಡದ ಕಾರಣಕ್ಕೆ ಹೊರಮಾವು ಬಿಬಿಎಂಪಿ ಕಚೇರಿಗೆ ನುಗ್ಗಿ ದಾಂದಲೆ ನಡೆಸಿರುವ ಕಾಂಗ್ರೆಸ್‌ನ ಕೆ.ಆರ್‌.ಪುರ ಬ್ಲಾಕ್‌ ಮಾಜಿ ಅಧ್ಯಕ್ಷ ನಾರಾಯಣಸ್ವಾಮಿ, ದಾಖಲೆಗಳ ಮೇಲೆ ಪೆಟ್ರೋಲ್ ಎರಚಿ ಬೆಂಕಿ ಹಚ್ಚಲು ಯತ್ನಿಸಿದ್ದಾರೆ.

ಸಂಗತ

ಮಾರುತ್ತರ ನೀಡಲು ಸಾಧ್ಯವೇ?

ನುಡಿಯ ಬಗೆಗೆ ಸಚಿವ ಅನಂತಕುಮಾರ ಹೆಗಡೆ ಹೇಳಿಕೆ ನೀಡುವ ಮೊದಲು ತಾವು ಪ್ರತಿನಿಧಿಸುವ ಕ್ಷೇತ್ರವಾದ ಉತ್ತರ ಕನ್ನಡ ಜಿಲ್ಲೆಯಲ್ಲಿ ತಮಗೆ ಮತ ನೀಡಿದ ಜನರು ಬಳಸುತ್ತಿರುವ ವಿವಿಧ ಬಗೆಯ ಉಪಭಾಷೆಗಳ ಬಗೆಗೆ ಮಾಹಿತಿಯನ್ನಾದರೂ ಪಡೆದಿದ್ದರೆ ಚೆನ್ನಾಗಿರುತ್ತಿತ್ತು

ಅಸಾಮಾನ್ಯ ಅಸಭ್ಯರು

ಹಿಂದೊಮ್ಮೆ ರೈತರು ಹಾಗೂ ಶರಣರೂ ಎರಡೂ ಆಗಿದ್ದ ಯಡಿಯೂರಪ್ಪನವರು ನಿಮ್ಮ ಮಾತನ್ನು ಖಂಡಿತವಾಗಿ ಕೇಳಿಸಿಕೊಂಡಾರು. ಒಟ್ಟು ಕತೆಯ ನೀತಿಯೆಂದರೆ ಭಾರತೀಯ ರಾಜಕಾರಣವನ್ನು ಯುಬಿ ಸಿಟಿ ಬಾರುಗಳಿಂದ ಕೆಳಗಿಳಿಸಿ ತರಬೇಕಾದ ಜರೂರು ತುಂಬ ಇದೆ!

ಅರಣ್ಯ ಪರಿಸ್ಥಿತಿ ವರದಿ ಮತ್ತು ನೈಜ ಸ್ಥಿತಿ

ಅರಣ್ಯ ಪ್ರದೇಶ ಹೆಚ್ಚಳದ ಹಿಂದಿನ ಹಾಗೂ ಸಮಾಜೋ-–ಆರ್ಥಿಕ ಆಯಾಮಗಳು ಮತ್ತು ಇಲಾಖೆಯ ಆಡಳಿತಾತ್ಮಕ ಜವಾಬ್ದಾರಿಯನ್ನು ವರದಿ ಚರ್ಚಿಸುವುದಿಲ್ಲ

ಮಾಲ್ಡೀವ್ಸ್‌ನ ರಾಜಕೀಯ ಬಿಕ್ಕಟ್ಟು–ಪರಿಹಾರ

ಭಾರತಕ್ಕೆ ಉಳಿದಿರುವ ದಾರಿಯೆಂದರೆ, ವಿಶ್ವಸಂಸ್ಥೆ ಮತ್ತು ಅಮೆರಿಕದ ಜೊತೆಗೂಡಿ ರಾಜತಾಂತ್ರಿಕ ಮಾರ್ಗದ ಮೂಲಕ ಮಾಲ್ಡೀವ್ಸ್‌ ಬಿಕ್ಕಟ್ಟನ್ನು ಪರಿಹರಿಸಲು ಶ್ರಮಿಸುವುದು.

ವಾಣಿಜ್ಯ

‘ಟಿಟಿಕೆ ಪ್ರೆಸ್ಟೀಜ್’ ಯಶೋಗಾಥೆ

ಟಿಟಿಕೆ ಗ್ರೂ‍ಪ್‌ನ ಅಂಗಸಂಸ್ಥೆಯಾಗಿರುವ ‘ಟಿಟಿಕೆ ಪ್ರೆಸ್ಟೀಜ್‌’, ಬರೀ ಪ್ರೆಷರ್‌ ಕುಕ್ಕರ್‌ ತಯಾರಿಕೆ ಸಂಸ್ಥೆ ಎನ್ನುವ ಗ್ರಾಹಕರ ನಂಬಿಕೆ ಬದಲಿಸಲು ಸಾಕಷ್ಟು ಶ್ರಮಪಟ್ಟಿದೆ. ಪ್ರೆಷರ್‌ ಕುಕ್ಕರ್‌ನಿಂದ ಹಿಡಿದು ವೈವಿಧ್ಯಮಯ ಉತ್ಪನ್ನಗಳ ಮೂಲಕ ಗ್ರಾಹಕರ ಮನ ಗೆದ್ದಿದೆ.

ಗುಂಪು ವಿಮೆ: ಜತೆಗಿರಲಿ ಇನ್ನೊಂದು ವಿಮೆ

ಕಾರ್ಪೊರೇಟ್‌ ಗುಂಪು ಆರೋಗ್ಯ ವಿಮೆ ಖಂಡಿತವಾಗಿಯೂ ಒಳ್ಳೆಯ ಉಪಕ್ರಮ.  ಹೆಚ್ಚುತ್ತಿರುವ ಆರೋಗ್ಯ ವೆಚ್ಚಗಳನ್ನು ನಿಭಾಯಿಸಲು  ಗುಂಪು ವಿಮೆಯ ಫಲಾನುಭವಿಗಳು  ಪ್ರತ್ಯೇಕ ಸ್ವತಂತ್ರ ವಿಮೆ ಮಾಡಿಸುವುದರಿಂದ ದೊರೆಯುವ ಪ್ರಯೋಜನಗಳನ್ನು ಇಲ್ಲಿ ವಿವರಿಸಲಾಗಿದೆ.

‘ಎಸ್‍ಎಂಇ’ಗಳ ಡಿಜಿಟಲೀಕರಣಕ್ಕೆ ಸೂಕ್ತ ಸಮಯ

ತಂತ್ರಜ್ಞಾನ ಸ್ಟಾರ್ಟ್‌ಅಪ್‍ಗಳ ಚಿಗುರೊಡೆಯುವಿಕೆ ಹಾಗೂ ಡಿಜಿಟಲ್ ಪಾವತಿಯ ಅಳವಡಿಕೆ ವಿಷಯದಲ್ಲಿ ದಕ್ಷಿಣ ಭಾರತ  ಮುಂಚೂಣಿಯಲ್ಲಿದೆ. ತಂತ್ರಜ್ಞಾನದ ಬೆಂಬಲದಿಂದ  ಇಲ್ಲಿಯ ಹಲವು ಉದ್ಯಮಗಳು  ತಮ್ಮ ವ್ಯವಹಾರವನ್ನು ವಿಸ್ತರಿಸಿವೆ.

ಹಣಕಾಸು ಯೋಜನೆ ಮೇಲೆ ಬಜೆಟ್‌ ಪರಿಣಾಮ

ಕೇಂದ್ರ ಸರ್ಕಾರದ ಬಜೆಟ್‌ ನಿಮ್ಮ ಹಣಕಾಸಿನ ಯೋಜನೆಗಳನ್ನು ಬದಲಾಯಿಸುತ್ತದೆಯೇ ಎನ್ನುವ ಅನುಮಾನಗಳಿಗೆ ಸಂಬಂಧಿಸಿದಂತೆ ವೈಭವ್‌ ಅಗರ್‌ವಾಲ್‌ ವಿವರಗಳನ್ನು ನೀಡಿದ್ದಾರೆ.

ತಂತ್ರಜ್ಞಾನ

ವಾಟ್ಸ್ ಆ್ಯಪ್‌ನಲ್ಲಿ ಹೀಗೂ ಇವೆ ಸುಲಭ ಉಪಾಯಗಳು

ವಾಟ್ಸ್‌ಆ್ಯಪ್‌ನಲ್ಲಿ ಫೋಟೊ ಕಳಿಸಿದರೆ ರೆಸೊಲ್ಯೂಷನ್ ಹೊರಟು ಹೋಗುತ್ತದೆ ಎಂದು ಹೇಳುವುದನ್ನು ಕೇಳಿದ್ದೇವೆ. ಆದರೆ ರೆಸೊಲ್ಯೂಷನ್ ಕಡಿಮೆಯಾಗದಂತೆ ಫೋಟೊಗಳನ್ನು ವಾಟ್ಸ್ ಆ್ಯಪ್ ನಲ್ಲಿಯೂ ಕಳುಹಿಸಬಹುದು.

ಮಾತೇ ಮಂತ್ರವಾದಾಗ!

ನಿತ್ಯ ಬಳಸುವ ಸಾಧನಗಳು ಮತ್ತು ಉಪಕರಣಗಳ ಜತೆ ಮಾತನಾಡಿಸುವಷ್ಟು ತಂತ್ರಜ್ಞಾನ ಅಭಿವೃದ್ಧಿಯಾಗಿದೆ. ಇಷ್ಟು, ದಿನ ಬಳಸುತ್ತಿದ್ದ ಟೆಕ್ಸ್ಟ್... ಕಮಾಂಡ್‌... ಟಚ್‌ಸ್ಕ್ರೀನ್ ತಂತ್ರಜ್ಞಾನಗಳನ್ನೂ ಮೀರಿ ಈಗ ಮಾತುಗಳೇ ಇನ್‌ಪುಟ್ಸ್‌ ಆಗಿ ಬದಲಾಗಿವೆ.

ಫೇಕ್‍ ನ್ಯೂಸ್ ಬಗ್ಗೆ ಎಚ್ಚರವಿರಲಿ

ಸುಳ್ಳು ಸುದ್ದಿಗಳು ಹೆಚ್ಚಾಗಿ ಆಕರ್ಷಕ ಶೀರ್ಷಿಕೆಗಳನ್ನು ಹೊಂದಿರುತ್ತವೆ. ಈ ಸುದ್ದಿಗಳ ಶೀರ್ಷಿಕೆಗಳು ನೋಡಿದ ಕೂಡಲೇ ಓದುಗರಲ್ಲಿ ಕುತೂಹಲ ಹುಟ್ಟಿಸುವಂತಿದ್ದು, ಒಳಗಿರುವ ಸುದ್ದಿಯಲ್ಲಿ ಶೀರ್ಷಿಕೆಯಲ್ಲಿ ಹೇಳಿದಂತೆ ಇರುವ ವಿಷಯಗಳು ಇರುವುದಿಲ್ಲ.

ಕಣ್ಣೀರಿನಿಂದ ಮಧುಮೇಹ ನಿಯಂತ್ರಣ?

ದೇಹದಲ್ಲಿರುವ ಸಕ್ಕರೆ ಅಂಶವನ್ನು ನಿಯಂತ್ರಣದಲ್ಲಿಡುವುದಕ್ಕಾಗಿ, ಇನ್ಸುಲಿನ್ ಚುಚ್ಚು ಮದ್ದು ಬಳಸುವುದು ಅನಿವಾರ್ಯವಾಗಿರುತ್ತದೆ.