ಕನ್ನಡದ ಕಂಪು ಎಲ್ಲೆಡೆ ಪಸರಿಸಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ

13 Sep, 2017
ಪ್ರಜಾವಾಣಿ ವಾರ್ತೆ

ಹೊಸಪೇಟೆ: ಕನ್ನಡ ಭಾಷೆಯ ಬೆಳವಣಿಗೆಗಾಗಿಯೇ ಹುಟ್ಟಿಕೊಂಡಿರುವ ಇಲ್ಲಿನ ಹಂಪಿ ಕನ್ನಡ ವಿಶ್ವವಿದ್ಯಾಲಯದ ಬೆಳ್ಳಿಹಬ್ಬ ಮಹೋತ್ಸವವು ಮಂಗಳವಾರ ಸಂಜೆ ವಿ.ವಿ. ಆವರಣದಲ್ಲಿ ಸಂಭ್ರಮದಿಂದ ಜರುಗಿತು. ನಾಡಿನ ಸಾಹಿತಿಗಳು, ಚಿಂತಕರು ಹಾಗೂ ವಿಶ್ವವಿದ್ಯಾಲಯವನ್ನು ಕಟ್ಟಿ ಬೆಳೆಸಿದ ಹಿಂದಿನ ಕುಲಪತಿಗಳು, ಕುಲಸಚಿವರು ಕಾರ್ಯಕ್ರಮಕ್ಕೆ ಸಾಕ್ಷಿಯಾದರು.

ದಟ್ಟ ಕಾನನದ ಮಧ್ಯದಲ್ಲಿರುವ ವಿಶ್ವವಿದ್ಯಾಲಯದ ಕಟ್ಟಡಗಳು, ಪೀಠಗಳು ಹಾಗೂ ಒಳ ರಸ್ತೆಗಳು ವಿದ್ಯುದ್ದೀಪಗಳಿಂದ ಅಲಂಕಾರಗೊಂಡಿದ್ದವು. ತಳಿರು ತೋರಣಗಳಿಂದ ಸಿಂಗರಿಸಿದ್ದ ಇಡೀ ವಿ.ವಿ. ಮದುವಣಗಿತ್ತಿಯಂತೆ ಸಿಂಗಾರಗೊಂಡಿತ್ತು. ಅಂತಹ ಅಪರೂಪದ ಗಳಿಗೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ವಿ.ವಿ. 25 ವರ್ಷ ಪೂರೈಸಿರುವುದರಿಂದ ಸಾಂಕೇತಿಕವಾಗಿ 25 ಪುಸ್ತಕಗಳನ್ನು ಬಿಡುಗಡೆ ಮಾಡಲಾಯಿತು.

ಇದೇ ವೇಳೆ ವಿಶೇಷ ಅಂಚೆ ಲಕೋಟೆಯನ್ನೂ ಬಿಡುಗಡೆಗೊಳಿಸಲಾಯಿತು. ಬಳಿಕ ಮುಖ್ಯಮಂತ್ರಿ ಮಾತನಾಡಿ, ‘ಕನ್ನಡದ ಕಂಪನ್ನು ಎಲ್ಲೆಡೆ ಪಸರಿಸಲು ಹಂಪಿ ಕನ್ನಡ ವಿ.ವಿ. ಅವಿರತವಾಗಿ ಕೆಲಸ ಮಾಡುತ್ತಿದೆ. ಈಗ 25 ವರ್ಷ ಪೂರೈಸಿ ಒಂದು ಮೈಲಿಗಲ್ಲು ದಾಟಿದೆ. ಭಾಷೆಗೆ ಸಂಬಂಧಿಸಿದ ಏಕೈಕ ವಿ.ವಿ. ಇದಾಗಿದ್ದು, ಇನ್ನೂ ನೂರಾರು ವರ್ಷ ಹೀಗೆಯೇ ನಡೆಯಬೇಕು. ಕನ್ನಡ ಭಾಷೆಯ ಜತೆಗೆ ಕಲೆ, ಸಂಸ್ಕೃತಿ, ಸಂಗೀತ ಅವುಗಳನ್ನು ಬೆಳೆಸಿ ಎತ್ತರಕ್ಕೆ ಕೊಂಡೊಯ್ಯಬೇಕು. ಅದಕ್ಕಾಗಿ ನಮ್ಮ ಸರ್ಕಾರ ಎಲ್ಲ ರೀತಿಯ ನೆರವು ನೀಡಲು ಸಿದ್ಧ’ ಎಂದು ಹೇಳಿದರು.

‘ಕನ್ನಡ ವಿ.ವಿ. 1,400ಕ್ಕೂ ಹೆಚ್ಚು ಪುಸ್ತಕಗಳನ್ನು ಪ್ರಕಟಿಸಿರುವುದು ಹೆಮ್ಮೆಯ ಸಂಗತಿ. ಜಗತ್ತಿನ ಜ್ಞಾನವು ಕನ್ನಡದ ಮೂಲಕ ಕನ್ನಡಿಗರಿಗೆ ಸಿಗಬೇಕು. ಕನ್ನಡದ ಜ್ಞಾನ ವಿಶ್ವದ ಬೇರೆ ಭಾಷೆಗಳ ಮೂಲಕ ಜಗತ್ತಿನಲ್ಲಿ ಇರುವವರೆಲ್ಲರಿಗೂ ಕೊಡಬೇಕು. ಎಲ್ಲ ವಿಷಯಗಳಲ್ಲಿ ಕನ್ನಡದಲ್ಲಿ ಪುಸ್ತಕಗಳು ಸಿಗಬೇಕು. ಆ ನಿಟ್ಟಿನಲ್ಲಿ ವಿ.ವಿ. ಕೆಲಸ ಮಾಡಬೇಕು’ ಎಂದರು.

‘ಈ ಹಿಂದಿನ ಎಲ್ಲ ಕುಲಪತಿಗಳು, ಕುಲಸಚಿವರಿಂದ ವಿಶ್ವವಿದ್ಯಾಲಯ ಇಷ್ಟೊಂದು ಎತ್ತರಕ್ಕೆ ಬೆಳೆದಿದೆ. ಇಷ್ಟೇ ಸಾಲದು. ಇಡೀ ವಿಶ್ವದಲ್ಲಿ ಕನ್ನಡ ವಿ.ವಿಗೆ ಉನ್ನತ ಸ್ಥಾನ ಸಿಗಲು ದುಡಿಯಬೇಕು’ ಎಂದರು.

**

‘ಅಂಬೇಡ್ಕರ್‌, ಜಗಜೀವನರಾಂ ಪೀಠಕ್ಕೆ ₹2 ಕೋಟಿ’

‘ಹಂಪಿ ಕನ್ನಡ ವಿಶ್ವವಿದ್ಯಾಲಯದಲ್ಲಿ ಡಾ.ಬಿ.ಆರ್‌. ಅಂಬೇಡ್ಕರ್‌ ಹಾಗೂ ಡಾ.ಬಾಬು ಜಗಜೀವನರಾಂ ಅಧ್ಯಯನ ಪೀಠ ಸ್ಥಾಪನೆಗೆ ಸರ್ಕಾರದಿಂದ ತಲಾ ₹2 ಕೋಟಿ ನೀಡಲಾಗುವುದು’ ಎಂದು ಮುಖ್ಯಮಂತ್ರಿ ಘೋಷಿಸಿದರು.

‘ಕನ್ನಡ ವಿ.ವಿ.ಯಲ್ಲಿ 180 ಹುದ್ದೆಗಳು ಖಾಲಿ ಇವೆ ಎಂದು ಕುಲಪತಿ ತಿಳಿಸಿದ್ದಾರೆ. ಸದ್ಯ ಎಷ್ಟು ಹುದ್ದೆಗಳ ಅಗತ್ಯವಿದೆಯೋ ಅದರ ಬಗ್ಗೆ ಪ್ರಸ್ತಾವ ಕಳುಹಿಸಿದರೆ ಅವುಗಳನ್ನು ಮಂಜೂರು ಮಾಡಿಕೊಡಲಾಗುವುದು. ಬೆಂಗಳೂರಿನಲ್ಲಿ ವಿಸ್ತರಣಾ ಕೇಂದ್ರಕ್ಕೆ ಒಟ್ಟು 17 ಎಕರೆ ಜಮೀನು ಮಂಜೂರಾಗಿದ್ದು, ಈ ಪೈಕಿ ಏಳು ಎಕರೆ ಜಾಗವನ್ನು ಈಗಾಗಲೇ ವಿ.ವಿ.ಗೆ ಹಸ್ತಾಂತರಿಸಲಾಗಿದೆ. ಶೀಘ್ರದಲ್ಲೇ ಇನ್ನುಳಿದ ಜಾಗ ನೀಡಲಾಗುವುದು’ ಎಂದರು.

Read More

Comments
ಮುಖಪುಟ

ಉಕ್ರೇನ್ ರಾಯಭಾರಿ ಕೆಂಪುಕೋಟೆ ಬಳಿ ಫೋಟೊ ಕ್ಲಿಕ್ಕಿಸುತ್ತಿದ್ದಾಗ ಫೋನ್ ಕಿತ್ತು ಪರಾರಿ

ಪೊಲೀಖಾ ಅವರು ಬೆಳಗ್ಗೆ 9.15ರ ಹೊತ್ತಿಗೆ ದೆಹಲಿಯ ಕೆಂಪುಕೋಟೆ ಬಳಿ ಫೋಟೊ ತೆಗೆದುಕೊಳ್ಳುತ್ತಿದ್ದ ವೇಳೆ ಆಗಂತುಕನೊಬ್ಬ ಫೋನ್ ಕಿತ್ತು ಪರಾರಿಯಾಗಿದ್ದಾನೆ.

ಪ್ರಾಚೀನ ಭಾರತದಲ್ಲಿ ದುರ್ಗೆ ರಕ್ಷಣಾ ಸಚಿವೆ, ಲಕ್ಷ್ಮಿ ಹಣಕಾಸು ಮಂತ್ರಿ: ವೆಂಕಯ್ಯನಾಯ್ಡು

ವಿದ್ಯಾರ್ಥಿಗಳು ನಮ್ಮ ಪರಂಪರೆಯ ಬಗ್ಗೆ ಹೆಮ್ಮೆ ಪಡಬೇಕು. ರಾಮರಾಜ್ಯ ಎನ್ನುವುದು ಇಂದಿಗೂ ನಮ್ಮ ಇತಿಹಾಸದ ಶ್ರೇಷ್ಠ ಕಾಲಘಟ್ಟವಾಗಿದೆ. ಅದಕ್ಕೆ ಕಾರಣ ಆ ಆಡಳಿತ ವ್ಯವಸ್ಥೆಯಲ್ಲಿದ್ದ ಆದರ್ಶಗಳು. ಆದರೆ ಇತ್ತೀಚಿನ ದಿನಗಳು ಅದನ್ನು ಕೋಮು ಭಾವ ದೃಷ್ಟಿಯಲ್ಲಿ ನೋಡಲಾಗುತ್ತಿದೆ.

ಆರ್‍ಎಸ್ಎಸ್ ಭಾರತವನ್ನು ಹಿಂದೂ, ಹಿಂದಿ, ಹಿಂದೂಸ್ತಾನವನ್ನಾಗಿಸಲು ಯತ್ನಿಸುತ್ತಿದೆ

ಆರ್‍ಎಸ್ಎಸ್ ರಾಜ್ಯ ಸರ್ಕಾರಗಳನ್ನು ದುರ್ಬಲವಾಗಿಸಲು ಯತ್ನಿಸುತ್ತಿವೆ. ಇದಕ್ಕಾಗಿ ಅವರು ಒಕ್ಕೂಟವಾದವನ್ನು ಒಡೆದು ಹಿಂದಿ, ಹಿಂದೂ, ಹಿಂದೂಸ್ತಾನವನ್ನಾಗಿಸುವ ಉದ್ದೇಶವನ್ನು ಹೇರುತ್ತಿದ್ದಾರೆ. ಬಿಜೆಪಿಯೂ ಇದೇ ರೀತಿ ಮಾಡುತ್ತಿದ್ದು ಅವರ ಈ ಯತ್ನವನ್ನು ವಿಫಲಗೊಳಿಸಬೇಕಿದೆ

‘ಗುಮ್ನಾಮಿ ಬಾಬಾ ಅವರೇ ನೇತಾಜಿ ಎಂದು ಹೆಚ್ಚು ಜನ ನಂಬಿದ್ದರು’

‘ಆಯೋಗದ ಮುಂದೆ ಖುದ್ದಾಗಿ ಇಲ್ಲವೇ ಪತ್ರ ಮುಖೇನ ಮಾಹಿತಿ ನೀಡಿರುವ ಬಹುತೇಕರು ಗುಮ್ನಾಮಿ ಬಾಬಾ ಅವರೇ ನೇತಾಜಿ ಆಗಿದ್ದರು ಎಂದು ಹೇಳಿದ್ದಾರೆ...

ಸಂಗತ

ಆರೋಗ್ಯ ಬೇಕೇ? ಸ್ವಚ್ಛತೆ ಕಾಪಾಡಿ

ಮನುಷ್ಯ ಹಣ ಗಳಿಕೆಗಾಗಿ ಗುಣ ಹಾಗೂ ಆರೋಗ್ಯ ಎರಡನ್ನೂ ಪಣಕ್ಕಿಟ್ಟು ದುಡಿಯುತ್ತಿದ್ದಾನೆ. ಹಾಗೇ ಇವೆರಡನ್ನೂ ಕಳೆದುಕೊಳ್ಳುತ್ತಿದ್ದಾನೆ.

ವಸ್ತುನಿಷ್ಠತೆ ಮೆರೆಯೋಣ

ವ್ಯಕ್ತಿ ನಿಂದೆ ಮಾಡದೆಯೂ ಗಾಂಧಿ ಚಿಂತನೆಗಳ ಪುನರ್ ವ್ಯಾಖ್ಯಾನ ಮಾಡಲು ಸಾಧ್ಯವಿಲ್ಲವೇ? ನಕಾರಾತ್ಮಕ ದೃಷ್ಟಿಯ ಬರವಣಿಗೆಯಿಂದ ಯುವಕರನ್ನು ಹಾದಿ ತಪ್ಪಿಸಿದಂತಾಗುತ್ತದೆ.

ಕರ್ಮಸಿದ್ಧಾಂತ, ಕಾಯಕಸಿದ್ಧಾಂತ ಪೂರ್ಣ ಬೇರೆ

ವೇದವನೋದಿದ ವಿಪ್ರರು ಹೊನಲಲ್ಲಿ ಹೋದ ಕೇಡ ನೋಡಿರೇ!

ಭರ್ಗೋ ದೇವಸ್ಯ ಧೀಮಹಿ ಎಂಬರು

ಒಬ್ಬರಿಗಾಗಿ ವಿಚಾರವಿಲ್ಲ ನೋಡಿರೇ

ಕೂಡಲಸಂಗಮದೇವಾ.

ಇಳೆಯ ನರಳಿಕೆಗೆ ಚಿಕಿತ್ಸೆ

ನಮಗಿರುವುದು ಒಂದೇ ಭೂಮಿ. ಅದನ್ನು ಸೊರಗಿಸಿದರೆ ಬಳಲುವವರು ನಾವೇ ಎನ್ನುವ ಪ್ರಜ್ಞೆ ಮೂಡುವವರೆಗೆ ನರಳಿಕೆ ತಪ್ಪಿದ್ದಲ್ಲ

ಚಂದನವನ

ಹಬ್ಬುವ ಹೆಬ್ಬಯಕೆಯ ಚಿಗುರು ಲತೆ

ಉತ್ತರ ಕನ್ನಡದ ಶಿರಸಿಯಲ್ಲಿ ಹುಟ್ಟಿ ನ್ಯೂಜಿಲೆಂಡ್‌ನಲ್ಲಿ ಬೆಳೆದು ಮತ್ತೀಗ ಚಿತ್ರರಂಗದ ಮೂಲಕ ತವರಿನಲ್ಲಿಯೇ ಬೇರೂರಿ ಬೆಳೆಯುವ ಹಂಬಲದಲ್ಲಿರುವ ಸುಂದರಿ ಲತಾ ಹೆಗಡೆ. ಮಹೇಶ್‌ ಬಾಬು ನಿರ್ದೇಶನದ ‘ಅತಿರಥ’ ಸಿನಿಮಾದ ಮೂಲಕ ಚಂದನವನಕ್ಕೆ ಪದಾರ್ಪಣೆ ಮಾಡಿರುವ ಇವರಿಗೆ ಒಳ್ಳೆಯ ಅವಕಾಶಗಳು ಸಿಕ್ಕರೆ ಇಲ್ಲಿಯೇ ನೆಲೆಯೂರುವ ಬಯಕೆ ಇದೆ.

‘ಹೀರೊಯಿನ್‌’ ಹಾಡು ಪಾಡು

ಹಾಸ್ಯದ ರೂಪದಲ್ಲಿ ಒಂದು ಸಂದೇಶವನ್ನೂ ನೀಡಿದ್ದೇವೆ. ಬದುಕಿನಲ್ಲಿ ಬರುವ ಕಷ್ಟಗಳನ್ನು ಕಾಮಿಡಿಯ ದೃಷ್ಟಿಕೋನದಿಂದಲೇ ನೋಡುವ ಪ್ರಯತ್ನ ಇದು’ ಎಂದು ಬಾಹುಬಲಿ ವಿವರಿಸಿದರು.

ಪೊಲೀಸ್ ದಿರಿಸಿನಲ್ಲಿ ಹುಚ್ಚ ವೆಂಕಟ್

ಈ ಸಿನಿಮಾದಲ್ಲಿ ವೆಂಕಟ್ ಅವರು ಪೊಲೀಸ್ ಅಧಿಕಾರಿಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ‘ಪೊಲೀಸರಿಗೆ ಜನ ಬೆಲೆ ಕೊಡುವುದು ಅವರ ಖಾಕಿ ಬಟ್ಟೆ ನೋಡಿ ಅಲ್ಲ. ಬೆಲೆ ಕೊಡುವುದು ಅವರ ಧರಿಸುವ ಪೊಲೀಸ್ ಕ್ಯಾಪ್ ನೋಡಿ’ ಎನ್ನುತ್ತ ಮಾತಿಗೆ ಇಳಿದರು ವೆಂಕಟ್.

ಮತ್ತೆ ಬರುತ್ತಿದ್ದಾನೆ ‘ಕೌರವ’

ಮುಂದಿನ ತಿಂಗಳ 13ರಂದು ಸಿನಿಮಾ ಬಿಡುಗಡೆ ಮಾಡುವ ಉದ್ದೇಶ ಇದೆ. ನಾನು ಹಣ ಮಾಡುವ ಉದ್ದೇಶದಿಂದ ಈ ರಂಗಕ್ಕೆ ಬಂದವನಲ್ಲ. ಒಳ್ಳೆಯ ಸಿನಿಮಾ ಮಾಡಬೇಕು ಎಂಬುದಷ್ಟೇ ನನ್ನ ಉದ್ದೇಶ’ ಎಂದು ನರೇಶ್ ಹೇಳಿಕೊಂಡರು.