ಲಿಂಗಾಯತ ಸ್ವತಂತ್ರ ಧರ್ಮ ಒ‌ಮ್ಮತದ ನಿಲುವಿಗೆ ನಿರ್ಧಾರ

14 Sep, 2017
ಪ್ರಜಾವಾಣಿ ವಾರ್ತೆ

ಬೆಂಗಳೂರು: ಲಿಂಗಾಯತರು ಹಾಗೂ ವೀರಶೈವರು ಬಹಿರಂಗವಾಗಿ ಕಿತ್ತಾಡದೆ, ಒಟ್ಟಿಗೆ ಕುಳಿತು ಲಿಂಗಾಯತ ಸ್ವತಂತ್ರ ಧರ್ಮ ಮಾನ್ಯತೆ ಕುರಿತು ಒಮ್ಮತದ ನಿಲುವಿಗೆ ಬರಲು ಉಭಯ ಬಣಗಳ ಮುಖಂಡರು ತೀರ್ಮಾನಿಸಿದ್ದಾರೆ.

ಈ ಸಂಬಂಧ ವಾಸ್ತವ ಸ್ಥಿತಿಗತಿ ಅಧ್ಯಯನ ಮಾಡಲು ಎಂಟು ಜನರ ತಜ್ಞರ ಸಮಿತಿ ರಚಿಸಲು ಅಖಿಲ ಭಾರತ ವೀರಶೈವ ಮಹಾಸಭಾ ಹಾಗೂ ಲಿಂಗಾಯತ ಧರ್ಮ ಪ್ರತಿಪಾದಕ ಬಣದ ಮುಖಂಡರು ನಿರ್ಧರಿಸಿದ್ದಾರೆ.

ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ ಪಾಟೀಲ ಅವರ ಮನೆಯಲ್ಲಿ ಬುಧವಾರ ಮೂರು ಗಂಟೆಗೂ ಹೆಚ್ಚು ಕಾಲ ಲಿಂಗಾಯತ ಮತ್ತು ವೀರಶೈವ ಮುಖಂಡರ ಮಹತ್ವದ ಸಭೆ ನಡೆದು ಎರಡೂ ಬಣಗಳೂ ಒಂದೆಡೆ ಸೇರಿ ಸೌಹಾರ್ದಯುತವಾಗಿ ಬಿಕ್ಕಟ್ಟು ಪರಿಹರಿಸುವ ನಿರ್ಧಾರ ಕೈಗೊಂಡವು.

‘ವೀರಶೈವ’ ಪ್ರತಿಪಾದಕರ ಕಡೆಯಿಂದ ನಾಲ್ಕು ಜನ ಹಾಗೂ ’ಲಿಂಗಾಯತ’ ಪ್ರತಿಪಾದಕರ ಕಡೆಯಿಂದ ನಾಲ್ಕು ಜನ ತಜ್ಞರು ಸಮಿತಿಯಲ್ಲಿ ಇರು
ತ್ತಾರೆ. ಸಮಿತಿ ಒಂದು ತಿಂಗಳಿನಲ್ಲಿ ತನ್ನ ವರದಿಯನ್ನು ಸಲ್ಲಿಸಲಿದೆ.

ಸಭೆಯಲ್ಲಿದ್ದ ನಿವೃತ್ತ ಐಎಎಸ್‌ ಅಧಿಕಾರಿ ಎಸ್‌.ಎಂ. ಜಾಮದಾರ್ ಅವರು ಲಿಂಗಾಯತ ಧರ್ಮ ಮಾನ್ಯತೆ ಏಕೆ ಮತ್ತು ಹೇಗೆ ಪ್ರಸ್ತುತ ಎಂಬುದರ ಕುರಿತಂತೆ ಸಭೆಗೆ ವಿವರಿಸಿದರು.

ಸುಪ್ರೀಂ ಕೋರ್ಟ್‌ನ ಹಲವು ತೀರ್ಪುಗಳು, ಬ್ರಿಟಿಷ್‌ ಕಾಲದ ದಾಖಲೆಗಳು, 1891ರಿಂದ ನಡೆದಿರುವ ಜನಗಣತಿಯಲ್ಲಿ ಲಿಂಗಾಯತ ಪದ ಉಲ್ಲೇಖವಾಗಿರುವ ಕುರಿತು ಅಂಕಿಅಂಶಗಳ ಸಹಿತ ಸಮಗ್ರವಾಗಿ ವಿವರಿಸಿದರು.

ಮುಂದಿನ ಸಭೆಯನ್ನು ಕಲಬುರ್ಗಿ ರ್‍ಯಾಲಿ ನಂತರ ನಡೆಸಲು ನಿರ್ಧರಿಸಲಾಯಿತು. ಮುಂದಿನ ಸಭೆಯಲ್ಲಿ ತಜ್ಞರ ಸಮಿತಿಯಲ್ಲಿ ಯಾರು ಇರಬೇಕು ಎಂಬ ಬಗ್ಗೆ ತೀರ್ಮಾನಿಸಲಾಗುವುದು.

ತರಾಟೆ: ವೀರಶೈವ ಲಿಂಗಾಯತ ಒಕ್ಕೂಟದ ಮುಖಂಡ ಎಂದು ಹೇಳಿಕೊಂಡು ಆಮಂತ್ರಣ ಇಲ್ಲದಿದ್ದರೂ ಸಭೆಗೆ ಬಂದಿದ್ದ ಬಸವರಾಜ ದಿಂಡೂರ ಮಾತಿಗೆ ವಿನಯ ಕುಲಕರ್ಣಿ ಮತ್ತು ಬಸವರಾಜ ಹೊರಟ್ಟಿ ಆಕ್ಷೇಪ ವ್ಯಕ್ತಪಡಿಸಿದರು. ಇಂತಹ ಸಭೆಯಲ್ಲಿ ಅವಿವೇಕದ ಮಾತಿಗೆ ಅವಕಾಶ ಇಲ್ಲ ಎಂದು ಅವರನ್ನು ಸುಮ್ಮನಿರಿಸಿದರು.

ಪಾಟೀಲರಿಗೆ ಧೈರ್ಯ ತುಂಬಿದರು...: ಸಿದ್ದಗಂಗಾ ಶ್ರೀಗಳ ಹೇಳಿಕೆ ಕುರಿತಂತೆ ಎದ್ದಿರುವ ಆರೋಪಗಳ ಬೆನ್ನಲ್ಲೇ ಬುಧವಾರ ಸಚಿವ ಎಂ.ಬಿ.ಪಾಟೀಲರನ್ನು ಅವರ ನಿಕಟವರ್ತಿಗಳು ಹಾಗೂ ಕೂಡಲಸಂಗಮ ಪಂಚಮಸಾಲಿ ಪೀಠದ ಜಯ ಮೃತ್ಯುಂಜಯ ಸ್ವಾಮೀಜಿ ಬುಧವಾರ ಭೇಟಿ ಮಾಡಿದರು.

ಮಧ್ಯಾಹ್ನ ಬಿಎಲ್‌ಡಿಇ ಕಚೇರಿಯಲ್ಲಿ ಅವರ ಜೊತೆ ಸಚಿವ ವಿನಯ ಕುಲಕರ್ಣಿ, ಶಾಸಕ ಬಿ.ಆರ್.ಪಾಟೀಲ, ವಿಧಾನ ಪರಿಷತ್‌ ಸದಸ್ಯ ಬಸವರಾಜ ಹೊರಟ್ಟಿ ಚರ್ಚಿಸಿದರು.

‘ಈಗ ಎದ್ದಿರುವ ಆರೋಪಗಳಿಂದ ನೀವು ಧೃತಿಗೆಡುವ ಅವಶ್ಯಕತೆ ಇಲ್ಲ. ನೀವು ಸತ್ಯವನ್ನೇ ನುಡಿದಿದ್ದೀರಿ. ನಿಮ್ಮ ಜೊತೆ ನಾವಿದ್ದೇವೆ’ ಎಂದು ಧೈರ್ಯ ತುಂಬಿದರು.

ಇದಕ್ಕೆ ಪ್ರತಿಕ್ರಿಯಿಸಿದ ಪಾಟೀಲರು, ‘ನಿನ್ನೆಯ ಬೆಳವಣಿಗೆಯಿಂದ ನನ್ನ ಮನೆಯಲ್ಲಿ ತಾಯಿ, ಪತ್ನಿ ಹಾಗೂ ಪುತ್ರ ತೀವ್ರ ನೊಂದುಕೊಂಡಿದ್ದಾರೆ. ಹೀಗಾಗಿ ಮನಸ್ಸಿಗೆ ಕೊಂಚ ಬೇಸರವಾಗಿರುವುದು ನಿಜ. ಆದರೆ, ಹೋರಾಟವನ್ನು ಅರ್ಧಕ್ಕೆ ನಿಲ್ಲಿಸುವುದಿಲ್ಲ’ ಎಂದು ಸ್ಪಷ್ಟಪಡಿಸಿದರು.

ಕಲಬುರ್ಗಿ ರ‍್ಯಾಲಿಗೆ ವಿರೋಧ: ‘ಕಲಬುರ್ಗಿಯಲ್ಲಿ ಇದೇ 24ರಂದು ನಡೆಸಲು ಉದ್ದೇಶಿಸಿರುವ ಲಿಂಗಾಯತ ರ‍್ಯಾಲಿ ನಡೆಸಬಾರದು’ ಎಂಬ ಮಹಸಭಾದ ನಿಲುವನ್ನು ಶಾಸಕ ಬಿ.ಆರ್.ಪಾಟೀಲ ವಿರೋಧಿಸಿದರು.

‘ಈಗಾಗಲೇ ರ‍್ಯಾಲಿ ನಡೆಸಲು ನಿಶ್ಚಯಿಸಲಾಗಿದೆ. ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಈಗ ಸ್ಥಗಿತಗೊಳಿಸುವುದು ಸಾಧ್ಯವಿಲ್ಲ. ಆದಾಗ್ಯೂ, ಈ ರ‍್ಯಾಲಿಯಲ್ಲಿ ಯಾರೂ ಪಂಚಪೀಠಗಳ ಬಗ್ಗೆ ಟೀಕೆ ಮಾಡದಂತೆ ನೋಡಿಕೊಳ್ಳಲಾಗು
ವುದು’ ಎಂದು ಭರವಸೆ ನೀಡಿದರು.

ಮೂವರ ಷಡ್ಯಂತ್ರವಿದೆ..

’ಸಿದ್ದಗಂಗಾ ಶ್ರೀಗಳ ಹೇಳಿಕೆಯನ್ನು ತಿರುಚಿದ ಹಿಂದೆ ಮೂವರು ರಾಜಕಾರಣಿಗಳ ಷಡ್ಯಂತ್ರ ಇದ್ದು ಇದರ ಸತ್ಯಾಸತ್ಯತೆಯನ್ನು ಬಹಿರಂಗಗೊಳಿಸುವ ಅವಶ್ಯಕತೆ ಇದೆ’ ಎಂದು ಸ್ವತಂತ್ರ ಲಿಂಗಾಯತ ಧರ್ಮ ಮಾನ್ಯತೆಯ ಪ್ರತಿಪಾದಕರು ಹೇಳಿದ್ದಾರೆ.

ಈ ಕುರಿತಂತೆ ಸಾರ್ವಜನಿಕರಿಗೆ ಸತ್ಯ ಏನೆಂಬುದನ್ನು ತಿಳಿಸಲು ಗುರುವಾರ (ಸೆ.14) ಬೆಳಗ್ಗೆ 11 ಗಂಟೆಗೆ ನಗರದ ಪರಾಗ್‌ ಹೋಟೆಲ್‌ನಲ್ಲಿ ಬಸವರಾಜ ಹೊರಟ್ಟಿ, ವಿನಯ ಕುಲಕರ್ಣಿ ಮಾಧ್ಯಮ ಗೋಷ್ಠಿ ನಡೆಸಲಿದ್ದಾರೆ ಎಂದು ತಿಳಿಸಿದ್ದಾರೆ.

Read More

Comments
ಮುಖಪುಟ

ಉಕ್ರೇನ್ ರಾಯಭಾರಿ ಕೆಂಪುಕೋಟೆ ಬಳಿ ಫೋಟೊ ಕ್ಲಿಕ್ಕಿಸುತ್ತಿದ್ದಾಗ ಫೋನ್ ಕಿತ್ತು ಪರಾರಿ

ಪೊಲೀಖಾ ಅವರು ಬೆಳಗ್ಗೆ 9.15ರ ಹೊತ್ತಿಗೆ ದೆಹಲಿಯ ಕೆಂಪುಕೋಟೆ ಬಳಿ ಫೋಟೊ ತೆಗೆದುಕೊಳ್ಳುತ್ತಿದ್ದ ವೇಳೆ ಆಗಂತುಕನೊಬ್ಬ ಫೋನ್ ಕಿತ್ತು ಪರಾರಿಯಾಗಿದ್ದಾನೆ.

ಪ್ರಾಚೀನ ಭಾರತದಲ್ಲಿ ದುರ್ಗೆ ರಕ್ಷಣಾ ಸಚಿವೆ, ಲಕ್ಷ್ಮಿ ಹಣಕಾಸು ಮಂತ್ರಿ: ವೆಂಕಯ್ಯನಾಯ್ಡು

ವಿದ್ಯಾರ್ಥಿಗಳು ನಮ್ಮ ಪರಂಪರೆಯ ಬಗ್ಗೆ ಹೆಮ್ಮೆ ಪಡಬೇಕು. ರಾಮರಾಜ್ಯ ಎನ್ನುವುದು ಇಂದಿಗೂ ನಮ್ಮ ಇತಿಹಾಸದ ಶ್ರೇಷ್ಠ ಕಾಲಘಟ್ಟವಾಗಿದೆ. ಅದಕ್ಕೆ ಕಾರಣ ಆ ಆಡಳಿತ ವ್ಯವಸ್ಥೆಯಲ್ಲಿದ್ದ ಆದರ್ಶಗಳು. ಆದರೆ ಇತ್ತೀಚಿನ ದಿನಗಳು ಅದನ್ನು ಕೋಮು ಭಾವ ದೃಷ್ಟಿಯಲ್ಲಿ ನೋಡಲಾಗುತ್ತಿದೆ.

ಆರ್‍ಎಸ್ಎಸ್ ಭಾರತವನ್ನು ಹಿಂದೂ, ಹಿಂದಿ, ಹಿಂದೂಸ್ತಾನವನ್ನಾಗಿಸಲು ಯತ್ನಿಸುತ್ತಿದೆ

ಆರ್‍ಎಸ್ಎಸ್ ರಾಜ್ಯ ಸರ್ಕಾರಗಳನ್ನು ದುರ್ಬಲವಾಗಿಸಲು ಯತ್ನಿಸುತ್ತಿವೆ. ಇದಕ್ಕಾಗಿ ಅವರು ಒಕ್ಕೂಟವಾದವನ್ನು ಒಡೆದು ಹಿಂದಿ, ಹಿಂದೂ, ಹಿಂದೂಸ್ತಾನವನ್ನಾಗಿಸುವ ಉದ್ದೇಶವನ್ನು ಹೇರುತ್ತಿದ್ದಾರೆ. ಬಿಜೆಪಿಯೂ ಇದೇ ರೀತಿ ಮಾಡುತ್ತಿದ್ದು ಅವರ ಈ ಯತ್ನವನ್ನು ವಿಫಲಗೊಳಿಸಬೇಕಿದೆ

‘ಗುಮ್ನಾಮಿ ಬಾಬಾ ಅವರೇ ನೇತಾಜಿ ಎಂದು ಹೆಚ್ಚು ಜನ ನಂಬಿದ್ದರು’

‘ಆಯೋಗದ ಮುಂದೆ ಖುದ್ದಾಗಿ ಇಲ್ಲವೇ ಪತ್ರ ಮುಖೇನ ಮಾಹಿತಿ ನೀಡಿರುವ ಬಹುತೇಕರು ಗುಮ್ನಾಮಿ ಬಾಬಾ ಅವರೇ ನೇತಾಜಿ ಆಗಿದ್ದರು ಎಂದು ಹೇಳಿದ್ದಾರೆ...

ಸಂಗತ

ಆರೋಗ್ಯ ಬೇಕೇ? ಸ್ವಚ್ಛತೆ ಕಾಪಾಡಿ

ಮನುಷ್ಯ ಹಣ ಗಳಿಕೆಗಾಗಿ ಗುಣ ಹಾಗೂ ಆರೋಗ್ಯ ಎರಡನ್ನೂ ಪಣಕ್ಕಿಟ್ಟು ದುಡಿಯುತ್ತಿದ್ದಾನೆ. ಹಾಗೇ ಇವೆರಡನ್ನೂ ಕಳೆದುಕೊಳ್ಳುತ್ತಿದ್ದಾನೆ.

ವಸ್ತುನಿಷ್ಠತೆ ಮೆರೆಯೋಣ

ವ್ಯಕ್ತಿ ನಿಂದೆ ಮಾಡದೆಯೂ ಗಾಂಧಿ ಚಿಂತನೆಗಳ ಪುನರ್ ವ್ಯಾಖ್ಯಾನ ಮಾಡಲು ಸಾಧ್ಯವಿಲ್ಲವೇ? ನಕಾರಾತ್ಮಕ ದೃಷ್ಟಿಯ ಬರವಣಿಗೆಯಿಂದ ಯುವಕರನ್ನು ಹಾದಿ ತಪ್ಪಿಸಿದಂತಾಗುತ್ತದೆ.

ಕರ್ಮಸಿದ್ಧಾಂತ, ಕಾಯಕಸಿದ್ಧಾಂತ ಪೂರ್ಣ ಬೇರೆ

ವೇದವನೋದಿದ ವಿಪ್ರರು ಹೊನಲಲ್ಲಿ ಹೋದ ಕೇಡ ನೋಡಿರೇ!

ಭರ್ಗೋ ದೇವಸ್ಯ ಧೀಮಹಿ ಎಂಬರು

ಒಬ್ಬರಿಗಾಗಿ ವಿಚಾರವಿಲ್ಲ ನೋಡಿರೇ

ಕೂಡಲಸಂಗಮದೇವಾ.

ಇಳೆಯ ನರಳಿಕೆಗೆ ಚಿಕಿತ್ಸೆ

ನಮಗಿರುವುದು ಒಂದೇ ಭೂಮಿ. ಅದನ್ನು ಸೊರಗಿಸಿದರೆ ಬಳಲುವವರು ನಾವೇ ಎನ್ನುವ ಪ್ರಜ್ಞೆ ಮೂಡುವವರೆಗೆ ನರಳಿಕೆ ತಪ್ಪಿದ್ದಲ್ಲ

ಚಂದನವನ

ಹಬ್ಬುವ ಹೆಬ್ಬಯಕೆಯ ಚಿಗುರು ಲತೆ

ಉತ್ತರ ಕನ್ನಡದ ಶಿರಸಿಯಲ್ಲಿ ಹುಟ್ಟಿ ನ್ಯೂಜಿಲೆಂಡ್‌ನಲ್ಲಿ ಬೆಳೆದು ಮತ್ತೀಗ ಚಿತ್ರರಂಗದ ಮೂಲಕ ತವರಿನಲ್ಲಿಯೇ ಬೇರೂರಿ ಬೆಳೆಯುವ ಹಂಬಲದಲ್ಲಿರುವ ಸುಂದರಿ ಲತಾ ಹೆಗಡೆ. ಮಹೇಶ್‌ ಬಾಬು ನಿರ್ದೇಶನದ ‘ಅತಿರಥ’ ಸಿನಿಮಾದ ಮೂಲಕ ಚಂದನವನಕ್ಕೆ ಪದಾರ್ಪಣೆ ಮಾಡಿರುವ ಇವರಿಗೆ ಒಳ್ಳೆಯ ಅವಕಾಶಗಳು ಸಿಕ್ಕರೆ ಇಲ್ಲಿಯೇ ನೆಲೆಯೂರುವ ಬಯಕೆ ಇದೆ.

‘ಹೀರೊಯಿನ್‌’ ಹಾಡು ಪಾಡು

ಹಾಸ್ಯದ ರೂಪದಲ್ಲಿ ಒಂದು ಸಂದೇಶವನ್ನೂ ನೀಡಿದ್ದೇವೆ. ಬದುಕಿನಲ್ಲಿ ಬರುವ ಕಷ್ಟಗಳನ್ನು ಕಾಮಿಡಿಯ ದೃಷ್ಟಿಕೋನದಿಂದಲೇ ನೋಡುವ ಪ್ರಯತ್ನ ಇದು’ ಎಂದು ಬಾಹುಬಲಿ ವಿವರಿಸಿದರು.

ಪೊಲೀಸ್ ದಿರಿಸಿನಲ್ಲಿ ಹುಚ್ಚ ವೆಂಕಟ್

ಈ ಸಿನಿಮಾದಲ್ಲಿ ವೆಂಕಟ್ ಅವರು ಪೊಲೀಸ್ ಅಧಿಕಾರಿಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ‘ಪೊಲೀಸರಿಗೆ ಜನ ಬೆಲೆ ಕೊಡುವುದು ಅವರ ಖಾಕಿ ಬಟ್ಟೆ ನೋಡಿ ಅಲ್ಲ. ಬೆಲೆ ಕೊಡುವುದು ಅವರ ಧರಿಸುವ ಪೊಲೀಸ್ ಕ್ಯಾಪ್ ನೋಡಿ’ ಎನ್ನುತ್ತ ಮಾತಿಗೆ ಇಳಿದರು ವೆಂಕಟ್.

ಮತ್ತೆ ಬರುತ್ತಿದ್ದಾನೆ ‘ಕೌರವ’

ಮುಂದಿನ ತಿಂಗಳ 13ರಂದು ಸಿನಿಮಾ ಬಿಡುಗಡೆ ಮಾಡುವ ಉದ್ದೇಶ ಇದೆ. ನಾನು ಹಣ ಮಾಡುವ ಉದ್ದೇಶದಿಂದ ಈ ರಂಗಕ್ಕೆ ಬಂದವನಲ್ಲ. ಒಳ್ಳೆಯ ಸಿನಿಮಾ ಮಾಡಬೇಕು ಎಂಬುದಷ್ಟೇ ನನ್ನ ಉದ್ದೇಶ’ ಎಂದು ನರೇಶ್ ಹೇಳಿಕೊಂಡರು.