ರೇರಾ ಕಾಯ್ದೆಯಿಂದ ಹೂಡಿಕೆ ಹೆಚ್ಚಳ: ದೇಶಪಾಂಡೆ

14 Sep, 2017
ಪ್ರಜಾವಾಣಿ ವಾರ್ತೆ

ಬೆಂಗಳೂರು: ‘ರಿಯಲ್ ಎಸ್ಟೇಟ್‌ ನಿಯಂತ್ರಣ ಮತ್ತು ಅಭಿವೃದ್ಧಿ ಕಾಯ್ದೆಯಿಂದ (ರೇರಾ) ಈ ಉದ್ಯಮದಲ್ಲಿ ಪಾರದರ್ಶಕತೆ ಸಾಧ್ಯವಾಗಿದೆ. ಇದರಿಂದ ಹೂಡಿಕೆದಾರರು ರಾಜ್ಯದತ್ತ ಹೆಚ್ಚು ಆಕರ್ಷಿತರಾಗುತ್ತಿದ್ದಾರೆ’ ಎಂದು ಬೃಹತ್‌ ಕೈಗಾರಿಕಾ ಸಚಿವ ಆರ್‌.ವಿ. ದೇಶಪಾಂಡೆ ತಿಳಿಸಿದರು.

ಎಫ್‌ಐಎಬಿಸಿಐ–ಇಂಡಿಯಾ ನಗರದಲ್ಲಿ ಬುಧವಾರ ಹಮ್ಮಿಕೊಂಡಿದ್ದ ‘ಬೆಂಗಳೂರು– ಜಾಗತಿಕ ಹೂಡಿಕೆಯ ತಾಣ’ ಕುರಿತ ವಿಚಾರಸಂಕಿರಣದಲ್ಲಿ ಅವರು ಮಾತನಾಡಿದರು.

‘ಕೈಗಾರಿಕೋದ್ಯಮಿಗಳನ್ನು ಆಕರ್ಷಿಸಲು ರಾಜ್ಯ ಸರ್ಕಾರ ಹೊಸ ಪ್ರಯೋಗಗಳನ್ನು ಮಾಡುತ್ತಿದೆ. ರಿಯಲ್‌ ಎಸ್ಟೇಟ್‌ ಉದ್ಯಮದಿಂದ ರಾಜ್ಯಕ್ಕೆ ಜಾಗತಿಕ ಹೂಡಿಕೆ ಬರುತ್ತಿದೆ’ ಎಂದು ಹೇಳಿದರು.

‘ರೇರಾ ಕಾಯ್ದೆ ಜಾರಿಯ ನಂತರ ರಿಯಲ್‌ ಎಸ್ಟೇಟ್‌ನಲ್ಲಿ ಜನ ತೊಡಗಿಸಿಕೊಳ್ಳುತ್ತಿದ್ದಾರೆ. 5ರಿಂದ 10 ವರ್ಷಗಳಲ್ಲಿ ಈ ಉದ್ಯಮದ ಚಿತ್ರಣವೇ ಬದಲಾಗಲಿದೆ. ದುಬೈನಲ್ಲಿ ಇರುವಂತಹ ಬೃಹತ್‌ ಕಟ್ಟಡಗಳನ್ನು ನಗರದಲ್ಲಿ ನಿರ್ಮಿಸುವ ಬಗ್ಗೆ ರಿಯಲ್‌ ಎಸ್ಟೇಟ್‌ ಉದ್ಯಮಿಗಳು ಯೋಚಿಸಬೇಕು’ ಎಂದರು.

ವಸತಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ಕಪಿಲ್‌ ಮೋಹನ್‌, ‘ರೇರಾ ಕಾಯ್ದೆ ಜಾರಿಗೆ ಮುನ್ನ ಅನುಮತಿಗೆ ಹೆಚ್ಚು ಸಮಯ ಆಗುತ್ತಿತ್ತು. ಆದರೆ, ಈಗ ಎಲ್ಲವೂ ಬಹಿರಂಗವಾಗಿ ನಡೆಯುವುದರಿಂದ ಎಲ್ಲವೂ ಶೀಘ್ರಗತಿಯಲ್ಲಿ ನಡೆಯುತ್ತಿದೆ. ರೇರಾಗೆ ನೋಂದಣಿ ಮಾಡಿಕೊಂಡಿರುವ ಉದ್ಯಮಿಗಳಿಗೆ ಸುಲಭವಾಗಿ ಸಾಲವೂ ದೊರೆಯುತ್ತಿದೆ’ ಎಂದು ಹೇಳಿದರು.

ನಗರಾಭಿವೃದ್ಧಿ ಸಚಿವ ಆರ್.ರೋಷನ್ ಬೇಗ್‌, ‘ನಗರದಲ್ಲಿ 10 ಸ್ಥಳೀಯಾಡಳಿತ ಸಂಸ್ಥೆಗಳಿವೆ. ಯಾವುದೇ ಹಂತದಲ್ಲೂ ಬಿಲ್ಡರ್‌ಗಳಿಗೆ ಕಿರುಕುಳ ಆಗಬಾರದೆಂದು ಮುಖ್ಯಮಂತ್ರಿ ಅವರು ಎಲ್ಲಾ ಆಯುಕ್ತರಿಗೂ ಸೂಚನೆ ನೀಡಿದ್ದಾರೆ. ಅನುಮತಿ ಶೀಘ್ರವಾಗಿ ಇತ್ಯರ್ಥಗೊಳಿಸಬೇ
ಕೆಂದು ಹೇಳಿದ್ದಾರೆ. ಹಾಗಾಗಿ ಯಾವುದೇ ಹಂತದಲ್ಲೂ ಪ್ರಕ್ರಿಯೆ ತಡವಾಗುವುದಿಲ್ಲ’ ಎಂದರು.

ಪ್ರೆಸ್ಟೀಜ್ ಸಮೂಹದ ವ್ಯವಸ್ಥಾಪಕ ನಿರ್ದೇಶಕ ಇರ್ಫಾನ್ ರಜಾಕ್, ‘ರೇರಾ ಕಾಯ್ದೆಯನ್ನು ಗ್ರಾಹಕರು ಮೆಚ್ಚಿಕೊಂಡಿದ್ದಾರೆ. ಕಟ್ಟಡ ನಿರ್ಮಿಸಿಕೊಟ್ಟ ನಂತರ ಬಿಲ್ಡರ್‌ಗಳು ಕೈಗೆ ಸಿಗುತ್ತಿರಲಿಲ್ಲ. ಆದರೆ, ಈಗ ಸ್ಥಿತಿ ಬದಲಾಗಿದೆ. ವೆಬ್‌ಸೈಟ್‌ನಲ್ಲಿ ಎಲ್ಲವೂ ಗೋಚರಿಸುವುದರಿಂದ ಮೋಸಕ್ಕೆ ಅವಕಾಶ ಇರುವುದಿಲ್ಲ’ ಎಂದು ಮಾಹಿತಿ ನೀಡಿದರು.

ಆಸ್ತಿ ನೋಂದಣಿ ಸಲಹೆಗಾರ ನೈಟ್‌ ಫ್ರಾಂಕ್‌, ‘2014ರ ನಂತರ ಭಾರತದಲ್ಲಿ ರಿಯಲ್‌ ಎಸ್ಟೇಟ್‌ ಮಾರುಕಟ್ಟೆ ಶೇ 137ರಷ್ಟು ಏರಿಕೆ ಕಂಡಿದೆ. ಸ್ಮಾರ್ಟ್‌ ಸಿಟಿ ಯೋಜನೆ, ರೇರಾ, ಜಿಎಸ್‌ಟಿ ಯೋಜನೆಗಳ ಪರಿಚಯದಿಂದ ಹೂಡಿಕೆಗೆ ಹೆಚ್ಚು ಅನುಕೂಲವಾಗಿದೆ’ ಎಂದು ವಿಶ್ಲೇಷಿಸಿದರು.

Read More

Comments
ಮುಖಪುಟ

ಉಕ್ರೇನ್ ರಾಯಭಾರಿ ಕೆಂಪುಕೋಟೆ ಬಳಿ ಫೋಟೊ ಕ್ಲಿಕ್ಕಿಸುತ್ತಿದ್ದಾಗ ಫೋನ್ ಕಿತ್ತು ಪರಾರಿ

ಪೊಲೀಖಾ ಅವರು ಬೆಳಗ್ಗೆ 9.15ರ ಹೊತ್ತಿಗೆ ದೆಹಲಿಯ ಕೆಂಪುಕೋಟೆ ಬಳಿ ಫೋಟೊ ತೆಗೆದುಕೊಳ್ಳುತ್ತಿದ್ದ ವೇಳೆ ಆಗಂತುಕನೊಬ್ಬ ಫೋನ್ ಕಿತ್ತು ಪರಾರಿಯಾಗಿದ್ದಾನೆ.

ಪ್ರಾಚೀನ ಭಾರತದಲ್ಲಿ ದುರ್ಗೆ ರಕ್ಷಣಾ ಸಚಿವೆ, ಲಕ್ಷ್ಮಿ ಹಣಕಾಸು ಮಂತ್ರಿ: ವೆಂಕಯ್ಯನಾಯ್ಡು

ವಿದ್ಯಾರ್ಥಿಗಳು ನಮ್ಮ ಪರಂಪರೆಯ ಬಗ್ಗೆ ಹೆಮ್ಮೆ ಪಡಬೇಕು. ರಾಮರಾಜ್ಯ ಎನ್ನುವುದು ಇಂದಿಗೂ ನಮ್ಮ ಇತಿಹಾಸದ ಶ್ರೇಷ್ಠ ಕಾಲಘಟ್ಟವಾಗಿದೆ. ಅದಕ್ಕೆ ಕಾರಣ ಆ ಆಡಳಿತ ವ್ಯವಸ್ಥೆಯಲ್ಲಿದ್ದ ಆದರ್ಶಗಳು. ಆದರೆ ಇತ್ತೀಚಿನ ದಿನಗಳು ಅದನ್ನು ಕೋಮು ಭಾವ ದೃಷ್ಟಿಯಲ್ಲಿ ನೋಡಲಾಗುತ್ತಿದೆ.

ಆರ್‍ಎಸ್ಎಸ್ ಭಾರತವನ್ನು ಹಿಂದೂ, ಹಿಂದಿ, ಹಿಂದೂಸ್ತಾನವನ್ನಾಗಿಸಲು ಯತ್ನಿಸುತ್ತಿದೆ

ಆರ್‍ಎಸ್ಎಸ್ ರಾಜ್ಯ ಸರ್ಕಾರಗಳನ್ನು ದುರ್ಬಲವಾಗಿಸಲು ಯತ್ನಿಸುತ್ತಿವೆ. ಇದಕ್ಕಾಗಿ ಅವರು ಒಕ್ಕೂಟವಾದವನ್ನು ಒಡೆದು ಹಿಂದಿ, ಹಿಂದೂ, ಹಿಂದೂಸ್ತಾನವನ್ನಾಗಿಸುವ ಉದ್ದೇಶವನ್ನು ಹೇರುತ್ತಿದ್ದಾರೆ. ಬಿಜೆಪಿಯೂ ಇದೇ ರೀತಿ ಮಾಡುತ್ತಿದ್ದು ಅವರ ಈ ಯತ್ನವನ್ನು ವಿಫಲಗೊಳಿಸಬೇಕಿದೆ

‘ಗುಮ್ನಾಮಿ ಬಾಬಾ ಅವರೇ ನೇತಾಜಿ ಎಂದು ಹೆಚ್ಚು ಜನ ನಂಬಿದ್ದರು’

‘ಆಯೋಗದ ಮುಂದೆ ಖುದ್ದಾಗಿ ಇಲ್ಲವೇ ಪತ್ರ ಮುಖೇನ ಮಾಹಿತಿ ನೀಡಿರುವ ಬಹುತೇಕರು ಗುಮ್ನಾಮಿ ಬಾಬಾ ಅವರೇ ನೇತಾಜಿ ಆಗಿದ್ದರು ಎಂದು ಹೇಳಿದ್ದಾರೆ...

ಸಂಗತ

ಆರೋಗ್ಯ ಬೇಕೇ? ಸ್ವಚ್ಛತೆ ಕಾಪಾಡಿ

ಮನುಷ್ಯ ಹಣ ಗಳಿಕೆಗಾಗಿ ಗುಣ ಹಾಗೂ ಆರೋಗ್ಯ ಎರಡನ್ನೂ ಪಣಕ್ಕಿಟ್ಟು ದುಡಿಯುತ್ತಿದ್ದಾನೆ. ಹಾಗೇ ಇವೆರಡನ್ನೂ ಕಳೆದುಕೊಳ್ಳುತ್ತಿದ್ದಾನೆ.

ವಸ್ತುನಿಷ್ಠತೆ ಮೆರೆಯೋಣ

ವ್ಯಕ್ತಿ ನಿಂದೆ ಮಾಡದೆಯೂ ಗಾಂಧಿ ಚಿಂತನೆಗಳ ಪುನರ್ ವ್ಯಾಖ್ಯಾನ ಮಾಡಲು ಸಾಧ್ಯವಿಲ್ಲವೇ? ನಕಾರಾತ್ಮಕ ದೃಷ್ಟಿಯ ಬರವಣಿಗೆಯಿಂದ ಯುವಕರನ್ನು ಹಾದಿ ತಪ್ಪಿಸಿದಂತಾಗುತ್ತದೆ.

ಕರ್ಮಸಿದ್ಧಾಂತ, ಕಾಯಕಸಿದ್ಧಾಂತ ಪೂರ್ಣ ಬೇರೆ

ವೇದವನೋದಿದ ವಿಪ್ರರು ಹೊನಲಲ್ಲಿ ಹೋದ ಕೇಡ ನೋಡಿರೇ!

ಭರ್ಗೋ ದೇವಸ್ಯ ಧೀಮಹಿ ಎಂಬರು

ಒಬ್ಬರಿಗಾಗಿ ವಿಚಾರವಿಲ್ಲ ನೋಡಿರೇ

ಕೂಡಲಸಂಗಮದೇವಾ.

ಇಳೆಯ ನರಳಿಕೆಗೆ ಚಿಕಿತ್ಸೆ

ನಮಗಿರುವುದು ಒಂದೇ ಭೂಮಿ. ಅದನ್ನು ಸೊರಗಿಸಿದರೆ ಬಳಲುವವರು ನಾವೇ ಎನ್ನುವ ಪ್ರಜ್ಞೆ ಮೂಡುವವರೆಗೆ ನರಳಿಕೆ ತಪ್ಪಿದ್ದಲ್ಲ

ಚಂದನವನ

ಹಬ್ಬುವ ಹೆಬ್ಬಯಕೆಯ ಚಿಗುರು ಲತೆ

ಉತ್ತರ ಕನ್ನಡದ ಶಿರಸಿಯಲ್ಲಿ ಹುಟ್ಟಿ ನ್ಯೂಜಿಲೆಂಡ್‌ನಲ್ಲಿ ಬೆಳೆದು ಮತ್ತೀಗ ಚಿತ್ರರಂಗದ ಮೂಲಕ ತವರಿನಲ್ಲಿಯೇ ಬೇರೂರಿ ಬೆಳೆಯುವ ಹಂಬಲದಲ್ಲಿರುವ ಸುಂದರಿ ಲತಾ ಹೆಗಡೆ. ಮಹೇಶ್‌ ಬಾಬು ನಿರ್ದೇಶನದ ‘ಅತಿರಥ’ ಸಿನಿಮಾದ ಮೂಲಕ ಚಂದನವನಕ್ಕೆ ಪದಾರ್ಪಣೆ ಮಾಡಿರುವ ಇವರಿಗೆ ಒಳ್ಳೆಯ ಅವಕಾಶಗಳು ಸಿಕ್ಕರೆ ಇಲ್ಲಿಯೇ ನೆಲೆಯೂರುವ ಬಯಕೆ ಇದೆ.

‘ಹೀರೊಯಿನ್‌’ ಹಾಡು ಪಾಡು

ಹಾಸ್ಯದ ರೂಪದಲ್ಲಿ ಒಂದು ಸಂದೇಶವನ್ನೂ ನೀಡಿದ್ದೇವೆ. ಬದುಕಿನಲ್ಲಿ ಬರುವ ಕಷ್ಟಗಳನ್ನು ಕಾಮಿಡಿಯ ದೃಷ್ಟಿಕೋನದಿಂದಲೇ ನೋಡುವ ಪ್ರಯತ್ನ ಇದು’ ಎಂದು ಬಾಹುಬಲಿ ವಿವರಿಸಿದರು.

ಪೊಲೀಸ್ ದಿರಿಸಿನಲ್ಲಿ ಹುಚ್ಚ ವೆಂಕಟ್

ಈ ಸಿನಿಮಾದಲ್ಲಿ ವೆಂಕಟ್ ಅವರು ಪೊಲೀಸ್ ಅಧಿಕಾರಿಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ‘ಪೊಲೀಸರಿಗೆ ಜನ ಬೆಲೆ ಕೊಡುವುದು ಅವರ ಖಾಕಿ ಬಟ್ಟೆ ನೋಡಿ ಅಲ್ಲ. ಬೆಲೆ ಕೊಡುವುದು ಅವರ ಧರಿಸುವ ಪೊಲೀಸ್ ಕ್ಯಾಪ್ ನೋಡಿ’ ಎನ್ನುತ್ತ ಮಾತಿಗೆ ಇಳಿದರು ವೆಂಕಟ್.

ಮತ್ತೆ ಬರುತ್ತಿದ್ದಾನೆ ‘ಕೌರವ’

ಮುಂದಿನ ತಿಂಗಳ 13ರಂದು ಸಿನಿಮಾ ಬಿಡುಗಡೆ ಮಾಡುವ ಉದ್ದೇಶ ಇದೆ. ನಾನು ಹಣ ಮಾಡುವ ಉದ್ದೇಶದಿಂದ ಈ ರಂಗಕ್ಕೆ ಬಂದವನಲ್ಲ. ಒಳ್ಳೆಯ ಸಿನಿಮಾ ಮಾಡಬೇಕು ಎಂಬುದಷ್ಟೇ ನನ್ನ ಉದ್ದೇಶ’ ಎಂದು ನರೇಶ್ ಹೇಳಿಕೊಂಡರು.