ಮೈದುಂಬಿ ಹರಿಯುತ್ತಿದೆ ಅರ್ಕಾವತಿ ನದಿ

14 Sep, 2017
ಪ್ರಜಾವಾಣಿ ವಾರ್ತೆ

ಬೆಂಗಳೂರು: ಅರ್ಕಾವತಿ ಎನ್ನುವ ನದಿ ಹರಿದ ಕುರುಹೂ ಇಲ್ಲದಂತೆ ದಶಕಗಳಿಂದ ಬತ್ತಿಹೊಗಿದ್ದ ನದಿಯು ನಿರಂತರ ಮಳೆಯಿಂದ ಮತ್ತೆ ಮೈದುಂಬಿ ಹರಿಯುತ್ತಿದೆ.

ಪ್ರಸಕ್ತ ವರ್ಷ ರಾಮನಗರ, ಮಾಗಡಿ ತಾಲ್ಲೂಕಿನಲ್ಲಿ ಉತ್ತಮ ಮಳೆಯಾಗಿರುವುದು ಹಾಗೂ ತಿಪ್ಪಗೊಂಡನಹಳ್ಳಿ ಜಲಾಶಯದಿಂದ (ಟಿ.ಜಿ ಹಳ್ಳಿ) ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದು ಬಂದು ಮಂಚನಬೆಲೆ ಜಲಾಶಯ ಭರ್ತಿಯಾಗಿರುವುದು ನದಿ ಹರಿವಿಗೆ ಕಾರಣ. ಅನೇಕ ವರ್ಷಗಳಿಂದ ನೀರೇ ಕಾಣದಾಗಿದ್ದ ನದಿಪಾತ್ರದ ಶೇ 90ರಷ್ಟು ಕೆರೆಗಳಿಗೆ ಜೀವಕಳೆ ಬಂದಿದೆ.

2005ರಲ್ಲಿ ಉತ್ತಮ ಮಳೆ ಸುರಿದ ಪರಿಣಾಮ ಮಂಚನಬೆಲೆ ಜಲಾಶಯ ಭರ್ತಿಯಾಗಿತ್ತು. ಆಗ ಜಲಾಶಯದಿಂದ ನೀರನ್ನು ಅರ್ಕಾವತಿ ನದಿಗೆ ಹರಿಸಿದ್ದರಿಂದ ಹೊಳೆಯಲ್ಲಿ ನೀರು ಹರಿದಿತ್ತು. ಹತ್ತು ವರ್ಷದ ನಂತರ ಪುನಃ ಆ ಭಾಗ್ಯ ದೊರೆತಿದೆ.

ಒಂದು ಕಾಲಕ್ಕೆ ಬೆಂಗಳೂರು ಮಹಾನಗರದ ಜನತೆಗೆ ನೀರು ಉಣಿಸುತ್ತಿದ್ದ ಅರ್ಕಾವತಿ ಭೂಪಟದಲ್ಲಷ್ಟೇ ಜೀವಂತವಾಗಿತ್ತು. ನದಿ ಜಲಾನಯನ ಪ್ರದೇಶದಲ್ಲಿ ವಾಸಿಸುತ್ತಿರುವ ಜನರು, ‘ಇಲ್ಲಿ ನದಿ ಹರಿಯುತ್ತಿತ್ತು ಎನ್ನುವುದೇ ಮರೆತು ಹೋಗಿತ್ತು. ಹೀಗೆ ಮೈದುಂಬಿ ಹರಿಯುವ ನದಿಯನ್ನು ನೋಡುವುದೇ ಖುಷಿ’ ಎಂದು ಸಂತಸ ವ್ಯಕ್ತಪಡಿಸಿದರು.

ನಂದಿ ಬೆಟ್ಟದಲ್ಲಿ ಹುಟ್ಟುವ ಅರ್ಕಾವತಿಯು ಮಾಗಡಿ ತಾಲ್ಲೂಕಿನ ತಿಪ್ಪಗೊಂಡನಹಳ್ಳಿ ಮಾರ್ಗವಾಗಿ ರಾಮನಗರ, ಕನಕಪುರ ಮೂಲಕ ತಮಿಳುನಾಡಿನ ಗಡಿ ಮೇಕೆದಾಟಿನ ಬಳಿ ಕಾವೇರಿ ನದಿಯಲ್ಲಿ ಸಂಗಮಗೊಳ್ಳುತ್ತದೆ. ಬೆಂಗಳೂರು ನಗರದ ಮೂರನೇ ಒಂದು ಭಾಗವು ಅರ್ಕಾವತಿ ಜಲಾನಯನಕ್ಕೆ ಸೇರುತ್ತದೆ.

ಅರ್ಕಾವತಿ ನದಿಗೆ ಕುಮುದ್ವತಿ, ವೃಷಭಾವತಿ, ಸುವರ್ಣಮುಖಿ, ಕುಟ್ಟೆ ಹೊಳೆ ಉಪನದಿಗಳಿವೆ. ಅರ್ಕಾವತಿ ನದಿಪಾತ್ರ ನಂದಿ ತಪ್ಪಲು ಪ್ರದೇಶದಿಂದ ದೇವನಹಳ್ಳಿ ದೊಡ್ಡಬಳ್ಳಾಪುರ, ಹೆಸರಘಟ್ಟದ ಮಾರ್ಗವಾಗಿ ತಿಪ್ಪಗೊಂಡನಹಳ್ಳಿ ಜಲಾಶಯದವರೆಗೂ 60 ಕಿ.ಮೀ ವ್ಯಾಪ್ತಿಯಲ್ಲಿದೆ.

ನದಿ ಬತ್ತಿಸುವಲ್ಲಿ ನದಿಪಾತ್ರದಲ್ಲಿದ್ದ ದೊಡ್ಡಬಳ್ಳಾಪುರದಂಥ ನಗರಗಳ ಬೆಳವಣಿಗೆ, ಕಲ್ಲು, ಮರಳು ಗಣಿಗಾರಿಕೆ, ವಾಣಿಜ್ಯ ಬೆಳೆಗಳ ವಿಸ್ತರಣೆ, ನದಿಯ ಪಾತ್ರದಲ್ಲಿಯೇ ನೆಲೆ ಕಂಡುಕೊಂಡ ಕೊಳವೆಬಾವಿಗಳ ಕೊಡುಗೆ ದೊಡ್ಡದು.

1962ರಲ್ಲಿ ಪ್ರವಾಹ ಬಂದಿತ್ತು

ಮಂಚನಬೆಲೆಯಲ್ಲಿ ಜಲಾಶಯ ನಿರ್ಮಿಸುವುದಕ್ಕೂ ಮುನ್ನ ಅರ್ಕಾವತಿ ನದಿಯಲ್ಲಿ ನೀರು ಜೋರಾಗಿಯೇ ಹರಿಯುತ್ತಿತ್ತು. ಬರೊಬ್ಬರಿ 53 ವರ್ಷಗಳ ಹಿಂದೆ (1962, ಅಕ್ಟೋಬರ್‌ 2) ಅರ್ಕಾವತಿ ನದಿಯಲ್ಲಿ ಪ್ರವಾಹವೂ ಉಂಟಾಗಿತ್ತು. ಮಂಚನಬೆಲೆಯಿಂದ ರಾಮನಗರದವರೆಗೆ ಸುಮಾರು 2,000 ಎಕರೆ ಜಮೀನು ಜಲಾವೃತವಾಗಿತ್ತು. ಇದೇ ವೇಳೆ ಕಣ್ವ ನದಿಯಲ್ಲೂ ಪ್ರವಾಹ ಉಂಟಾಗಿ ಕೂಟಗಲ್‌ ಗ್ರಾಮದ ಸುತ್ತಮುತ್ತ 1,000 ಎಕರೆ ಬೆಳೆ ನಷ್ಟವಾಗಿತ್ತು ಎಂಬ ವರದಿ ಇದೆ.

ಇದೆಲ್ಲವನ್ನೂ ಗಮನದಲ್ಲಿ ಇಟ್ಟುಕೊಂಡು 1969ರಲ್ಲಿ ಮಂಚನಬೆಲೆ ಜಲಾಶಯ ನಿರ್ಮಿಸಲು ಸರ್ಕಾರ ತೀರ್ಮಾನಿಸಿತು. ಪ್ರಾಥಮಿಕ ಹಂತದ ಕಾಮಗಾರಿಯು 1970ರಲ್ಲಿ ಆರಂಭವಾಯಿತು. ಮುಖ್ಯ ಜಲಾಶಯ ನಿರ್ಮಾಣದ ಕಾಮಗಾರಿ 1976ರಲ್ಲಿ ಪ್ರಾರಂಭವಾಯಿತು. 1989ರವೇಳೆಗೆ ಕಾಮಗಾರಿ ಪೂರ್ಣಗೊಂಡಿತು.

 

ಕುಮುದ್ವತಿ ನದಿ ಪುನಶ್ಚೇತನ

ಆರ್ಟ್‌ ಆಫ್‌ ಲೀವಿಂಗ್‌ ವತಿಯಿಂದ ಕುಮುದ್ವತಿ ನದಿ ಜಲಾನಯನ ಪ್ರದೇಶದಲ್ಲಿ ಅಂತರ್ಜಲವನ್ನು ವೃದ್ಧಿಸುವ ಮೂಲಕ ನದಿ ಪುನಶ್ವೇತನ ಮಾಡಲಾಗುತ್ತಿದೆ. 2013ರಲ್ಲಿ ಪ್ರಾರಂಭವಾದ ಈ ಕಾರ್ಯ ಶೇ 60ರಷ್ಟು ಪೂರ್ಣಗೊಂಡಿದೆ.

ಪುನಶ್ವೇತ ಕಾರ್ಯಕ್ರಮದ ನೇತೃತ್ವ ವಹಿಸಿರುವ ಡಾ. ಎಲೆ ಲಿಂಗರಾಜು, ‘ಶಿವಗಂಗೆ ಬೆಟ್ಟದಲ್ಲಿ ಉಗಮವಾಗುವ ಕುಮುದ್ವತಿ ನದಿ ಭಾಗದಲ್ಲಿ ಕೆಲಸ ನಡೆಯುತ್ತಿದೆ. ಆ ಭಾಗದ ಕೆರೆಗಳ ಪಾತ್ರವನ್ನು ಸ್ವಚ್ಛಗೊಳಿಸುವುದು, ಕೃಷಿಹೊಂಡ ನಿರ್ಮಿಸುವುದು, ಕೃಷಿಯಲ್ಲಿ ಮತ್ತೆ ನೈಸರ್ಗಿಕ ಪದ್ಧತಿಗೆ ವಾಪಸಾಗುವ ಕೆಲವು ಬದಲಾವಣೆಗಳನ್ನು ಮಾಡಿದ್ದೇವೆ’ ಎಂದು ಹೇಳಿದರು.

‘ಅಂತರ್ಜಲ ವೃದ್ಧಿಗಾಗಿ 20 ಅಡಿಯ ಆಳದ 416 ಇಂಗು ಗುಂಡಿಗಳನ್ನು ನಿರ್ಮಿಸಿದ್ದೇವೆ. ಕೊಳೆವೆಬಾವಿಗಳನ್ನು ಪುನಶ್ಚೇತನಕ್ಕೆ 200–250 ಅಡಿ ಆಳದಲ್ಲಿ ಗುಂಡಿಗಳ ನಿರ್ಮಾಣ ಮಾಡಿದ್ದೇವೆ. ಇದರಿಂದ 43 ಕೊಳವೆಬಾವಿಗಳಿಗೆ ನೀರು ಪೂರೈಕೆಯಾಗಿದೆ. ಕೆರೆ ಬತ್ತದಂತೆ ನೋಡಿಕೊಳ್ಳಲು ಕೊಳಗಳನ್ನು ನಿರ್ಮಿಸಿದ್ದೇವೆ. ಅಲ್ಲದೆ, ಆ ಕೊಳಗಳ ಸುತ್ತಲು ವನ ರೂಪಿಸಿದ್ದೇವೆ.’

‘ಕೆರೆಯ ಹೊಳು ತೆಗೆಯುವುದಕ್ಕೆ ಹೆಚ್ಚು ಖರ್ಚಾಗುತ್ತದೆ. ಅಲ್ಲದೆ, ತೆಗೆದೆ ಹೂಳನ್ನು ವಿಲೇವಾರಿ ಮಾಡುವುದು ಸಮಸ್ಯೆ. ಹಾಗಾಗಿ ಅದನ್ನು ಕೈಗೊಳ್ಳುವುದಿಲ್ಲ. ಒಂದೂವರೆ ವರ್ಷದಲ್ಲಿ ಕೆಲಸ ಪೂರ್ಣಗೊಳ್ಳುತ್ತದೆ’ ಎಂದು ಮಾಹಿತಿ ನೀಡಿದರು.

‘ಕಾರ್ಪೊರೇಟ್ ಕಂಪೆನಿಗಳ ಸಾಮಾಜಿಕ ಹೊಣೆಗಾರಿಕೆಯಡಿ ಎಚ್‌ಎಎಲ್‌, ಹಾನ್ಸ್‌ ಪ್ರತಿಷ್ಠಾನ, ಸಿಸ್ಕೊ, ಬಾಷ್‌, ಥಾಮಸ್‌ ರಾಯಿಟರ್ಸ್‌, ಇಂಟೆಲ್‌, ಅಲ್ಟೈರ್‌ ಎಂಜಿನಿಯರಿಂಗ್, ಮಹೀಂದ್ರಾ ಫೈನಾನ್ಸ್‌, ಸಿಂಡಿಕೇಟ್‌ ಬ್ಯಾಂಕ್‌ ಹಾಗೂ ವಿಜಯ ಬ್ಯಾಂಕ್‌ ಈ ಕೆಲಸಕ್ಕೆ ಸಹಾಯ ಮಾಡುತ್ತಿವೆ’ ಎಂದು ತಿಳಿಸಿದರು.

Read More

Comments
ಮುಖಪುಟ

ಉಕ್ರೇನ್ ರಾಯಭಾರಿ ಕೆಂಪುಕೋಟೆ ಬಳಿ ಫೋಟೊ ಕ್ಲಿಕ್ಕಿಸುತ್ತಿದ್ದಾಗ ಫೋನ್ ಕಿತ್ತು ಪರಾರಿ

ಪೊಲೀಖಾ ಅವರು ಬೆಳಗ್ಗೆ 9.15ರ ಹೊತ್ತಿಗೆ ದೆಹಲಿಯ ಕೆಂಪುಕೋಟೆ ಬಳಿ ಫೋಟೊ ತೆಗೆದುಕೊಳ್ಳುತ್ತಿದ್ದ ವೇಳೆ ಆಗಂತುಕನೊಬ್ಬ ಫೋನ್ ಕಿತ್ತು ಪರಾರಿಯಾಗಿದ್ದಾನೆ.

ಪ್ರಾಚೀನ ಭಾರತದಲ್ಲಿ ದುರ್ಗೆ ರಕ್ಷಣಾ ಸಚಿವೆ, ಲಕ್ಷ್ಮಿ ಹಣಕಾಸು ಮಂತ್ರಿ: ವೆಂಕಯ್ಯನಾಯ್ಡು

ವಿದ್ಯಾರ್ಥಿಗಳು ನಮ್ಮ ಪರಂಪರೆಯ ಬಗ್ಗೆ ಹೆಮ್ಮೆ ಪಡಬೇಕು. ರಾಮರಾಜ್ಯ ಎನ್ನುವುದು ಇಂದಿಗೂ ನಮ್ಮ ಇತಿಹಾಸದ ಶ್ರೇಷ್ಠ ಕಾಲಘಟ್ಟವಾಗಿದೆ. ಅದಕ್ಕೆ ಕಾರಣ ಆ ಆಡಳಿತ ವ್ಯವಸ್ಥೆಯಲ್ಲಿದ್ದ ಆದರ್ಶಗಳು. ಆದರೆ ಇತ್ತೀಚಿನ ದಿನಗಳು ಅದನ್ನು ಕೋಮು ಭಾವ ದೃಷ್ಟಿಯಲ್ಲಿ ನೋಡಲಾಗುತ್ತಿದೆ.

ಆರ್‍ಎಸ್ಎಸ್ ಭಾರತವನ್ನು ಹಿಂದೂ, ಹಿಂದಿ, ಹಿಂದೂಸ್ತಾನವನ್ನಾಗಿಸಲು ಯತ್ನಿಸುತ್ತಿದೆ

ಆರ್‍ಎಸ್ಎಸ್ ರಾಜ್ಯ ಸರ್ಕಾರಗಳನ್ನು ದುರ್ಬಲವಾಗಿಸಲು ಯತ್ನಿಸುತ್ತಿವೆ. ಇದಕ್ಕಾಗಿ ಅವರು ಒಕ್ಕೂಟವಾದವನ್ನು ಒಡೆದು ಹಿಂದಿ, ಹಿಂದೂ, ಹಿಂದೂಸ್ತಾನವನ್ನಾಗಿಸುವ ಉದ್ದೇಶವನ್ನು ಹೇರುತ್ತಿದ್ದಾರೆ. ಬಿಜೆಪಿಯೂ ಇದೇ ರೀತಿ ಮಾಡುತ್ತಿದ್ದು ಅವರ ಈ ಯತ್ನವನ್ನು ವಿಫಲಗೊಳಿಸಬೇಕಿದೆ

‘ಗುಮ್ನಾಮಿ ಬಾಬಾ ಅವರೇ ನೇತಾಜಿ ಎಂದು ಹೆಚ್ಚು ಜನ ನಂಬಿದ್ದರು’

‘ಆಯೋಗದ ಮುಂದೆ ಖುದ್ದಾಗಿ ಇಲ್ಲವೇ ಪತ್ರ ಮುಖೇನ ಮಾಹಿತಿ ನೀಡಿರುವ ಬಹುತೇಕರು ಗುಮ್ನಾಮಿ ಬಾಬಾ ಅವರೇ ನೇತಾಜಿ ಆಗಿದ್ದರು ಎಂದು ಹೇಳಿದ್ದಾರೆ...

ಸಂಗತ

ಆರೋಗ್ಯ ಬೇಕೇ? ಸ್ವಚ್ಛತೆ ಕಾಪಾಡಿ

ಮನುಷ್ಯ ಹಣ ಗಳಿಕೆಗಾಗಿ ಗುಣ ಹಾಗೂ ಆರೋಗ್ಯ ಎರಡನ್ನೂ ಪಣಕ್ಕಿಟ್ಟು ದುಡಿಯುತ್ತಿದ್ದಾನೆ. ಹಾಗೇ ಇವೆರಡನ್ನೂ ಕಳೆದುಕೊಳ್ಳುತ್ತಿದ್ದಾನೆ.

ವಸ್ತುನಿಷ್ಠತೆ ಮೆರೆಯೋಣ

ವ್ಯಕ್ತಿ ನಿಂದೆ ಮಾಡದೆಯೂ ಗಾಂಧಿ ಚಿಂತನೆಗಳ ಪುನರ್ ವ್ಯಾಖ್ಯಾನ ಮಾಡಲು ಸಾಧ್ಯವಿಲ್ಲವೇ? ನಕಾರಾತ್ಮಕ ದೃಷ್ಟಿಯ ಬರವಣಿಗೆಯಿಂದ ಯುವಕರನ್ನು ಹಾದಿ ತಪ್ಪಿಸಿದಂತಾಗುತ್ತದೆ.

ಕರ್ಮಸಿದ್ಧಾಂತ, ಕಾಯಕಸಿದ್ಧಾಂತ ಪೂರ್ಣ ಬೇರೆ

ವೇದವನೋದಿದ ವಿಪ್ರರು ಹೊನಲಲ್ಲಿ ಹೋದ ಕೇಡ ನೋಡಿರೇ!

ಭರ್ಗೋ ದೇವಸ್ಯ ಧೀಮಹಿ ಎಂಬರು

ಒಬ್ಬರಿಗಾಗಿ ವಿಚಾರವಿಲ್ಲ ನೋಡಿರೇ

ಕೂಡಲಸಂಗಮದೇವಾ.

ಇಳೆಯ ನರಳಿಕೆಗೆ ಚಿಕಿತ್ಸೆ

ನಮಗಿರುವುದು ಒಂದೇ ಭೂಮಿ. ಅದನ್ನು ಸೊರಗಿಸಿದರೆ ಬಳಲುವವರು ನಾವೇ ಎನ್ನುವ ಪ್ರಜ್ಞೆ ಮೂಡುವವರೆಗೆ ನರಳಿಕೆ ತಪ್ಪಿದ್ದಲ್ಲ

ಚಂದನವನ

ಹಬ್ಬುವ ಹೆಬ್ಬಯಕೆಯ ಚಿಗುರು ಲತೆ

ಉತ್ತರ ಕನ್ನಡದ ಶಿರಸಿಯಲ್ಲಿ ಹುಟ್ಟಿ ನ್ಯೂಜಿಲೆಂಡ್‌ನಲ್ಲಿ ಬೆಳೆದು ಮತ್ತೀಗ ಚಿತ್ರರಂಗದ ಮೂಲಕ ತವರಿನಲ್ಲಿಯೇ ಬೇರೂರಿ ಬೆಳೆಯುವ ಹಂಬಲದಲ್ಲಿರುವ ಸುಂದರಿ ಲತಾ ಹೆಗಡೆ. ಮಹೇಶ್‌ ಬಾಬು ನಿರ್ದೇಶನದ ‘ಅತಿರಥ’ ಸಿನಿಮಾದ ಮೂಲಕ ಚಂದನವನಕ್ಕೆ ಪದಾರ್ಪಣೆ ಮಾಡಿರುವ ಇವರಿಗೆ ಒಳ್ಳೆಯ ಅವಕಾಶಗಳು ಸಿಕ್ಕರೆ ಇಲ್ಲಿಯೇ ನೆಲೆಯೂರುವ ಬಯಕೆ ಇದೆ.

‘ಹೀರೊಯಿನ್‌’ ಹಾಡು ಪಾಡು

ಹಾಸ್ಯದ ರೂಪದಲ್ಲಿ ಒಂದು ಸಂದೇಶವನ್ನೂ ನೀಡಿದ್ದೇವೆ. ಬದುಕಿನಲ್ಲಿ ಬರುವ ಕಷ್ಟಗಳನ್ನು ಕಾಮಿಡಿಯ ದೃಷ್ಟಿಕೋನದಿಂದಲೇ ನೋಡುವ ಪ್ರಯತ್ನ ಇದು’ ಎಂದು ಬಾಹುಬಲಿ ವಿವರಿಸಿದರು.

ಪೊಲೀಸ್ ದಿರಿಸಿನಲ್ಲಿ ಹುಚ್ಚ ವೆಂಕಟ್

ಈ ಸಿನಿಮಾದಲ್ಲಿ ವೆಂಕಟ್ ಅವರು ಪೊಲೀಸ್ ಅಧಿಕಾರಿಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ‘ಪೊಲೀಸರಿಗೆ ಜನ ಬೆಲೆ ಕೊಡುವುದು ಅವರ ಖಾಕಿ ಬಟ್ಟೆ ನೋಡಿ ಅಲ್ಲ. ಬೆಲೆ ಕೊಡುವುದು ಅವರ ಧರಿಸುವ ಪೊಲೀಸ್ ಕ್ಯಾಪ್ ನೋಡಿ’ ಎನ್ನುತ್ತ ಮಾತಿಗೆ ಇಳಿದರು ವೆಂಕಟ್.

ಮತ್ತೆ ಬರುತ್ತಿದ್ದಾನೆ ‘ಕೌರವ’

ಮುಂದಿನ ತಿಂಗಳ 13ರಂದು ಸಿನಿಮಾ ಬಿಡುಗಡೆ ಮಾಡುವ ಉದ್ದೇಶ ಇದೆ. ನಾನು ಹಣ ಮಾಡುವ ಉದ್ದೇಶದಿಂದ ಈ ರಂಗಕ್ಕೆ ಬಂದವನಲ್ಲ. ಒಳ್ಳೆಯ ಸಿನಿಮಾ ಮಾಡಬೇಕು ಎಂಬುದಷ್ಟೇ ನನ್ನ ಉದ್ದೇಶ’ ಎಂದು ನರೇಶ್ ಹೇಳಿಕೊಂಡರು.