ಎಎಫ್‌ಸಿ: ಫೈನಲ್‌ಗೆ ಬಿಎಫ್‌ಸಿ

14 Sep, 2017
ಏಜೆನ್ಸಿಸ್‌

ಪ್ಯೊಂಗ್‌ಯಾಂಗ್‌ (ಉತ್ತರ ಕೊರಿಯಾ): ಸ್ಥಳೀಯ ತಂಡದ ಸವಾಲನ್ನು ದಿಟ್ಟವಾಗಿ ಎದುರಿಸಿದ ಬೆಂಗಳೂರು ಫುಟ್‌ಬಾಲ್‌ ಕ್ಲಬ್‌ (ಬಿಎಫ್‌ಸಿ) ಎಎಫ್‌ಸಿ ಕಪ್ ಅಂತರ ವಲಯ ಟೂರ್ನಿಯ ಫೈನಲ್ ಕನಸು ನನಸಾಗಿಸಿಕೊಂಡಿತು. ಇಲ್ಲಿನ ಮೇ ಡೇ ಕ್ರೀಡಾಂಗಣದಲ್ಲಿ ಬುಧವಾರ ನಡೆದ ಪಂದ್ಯದಲ್ಲಿ ಈ ತಂಡ ‘4.25 ಎಫ್‌ಸಿ’ ತಂಡದ ವಿರುದ್ಧ ಗೋಲುರಹಿತ ಡ್ರಾ ಮಾಡಿಕೊಂಡಿತು.

ಇಲ್ಲಿ 4–0 ಗೋಲುಗಳಿಂದ ಗೆದ್ದರಷ್ಟೇ ಫೈನಲ್‌ ಪ್ರವೇಶಿಸುವ ಸಾಧ್ಯತೆ ಇದ್ದ ಆತಿಥೇಯರ ಕನಸು ಭಗ್ನಗೊಂಡಿತು.

ಕಳೆದ ಬಾರಿಯ ರನ್ನರ್ ಅಪ್ ತಂಡ ಬಿಎಫ್‌ಸಿಯು ತವರಿನಲ್ಲಿ ಆಡಿದ್ದ ಸೆಮಿಫೈನಲ್‌ ಹಂತದ ಎರಡೂ ಪಂದ್ಯಗಳನ್ನು ಗೆದ್ದಿತ್ತು. ಕಳೆದ ತಿಂಗಳು ಬೆಂಗಳೂರಿನಲ್ಲಿ ನಡೆದಿದ್ದ ಕೊನೆಯ ಪಂದ್ಯದಲ್ಲಿ 3–0 ಗೋಲುಗಳಿಂದ ಜಯ ಸಾಧಿಸಿದ್ದ ತಂಡ ಬುಧವಾರ ಕೂಡ ಸಮರ್ಥ ಆಟ ಆಡಿತು. ಎದುರಾಳಿಗಳಿಗೆ ಗೋಲು ಬಿಟ್ಟುಕೊಡದೇ ಅಜೇಯ ಓಟ ಮುಂದುವರಿಸಿತು.

ಉತ್ತರ ಕೊರಿಯಾ ಸಂಸ್ಥಾಪನಾ ದಿನಾಚರಣೆ ನಡೆಯುತ್ತಿದ್ದ ಕಾರಣ ಬಿಎಫ್‌ಸಿ ಸೋಮವಾರ ಸಂಜೆಯಷ್ಟೇ ಇಲ್ಲಿಗೆ ಬಂದು ತಲುಪಿತ್ತು. ಆದರೂ ಪಂದ್ಯದಲ್ಲಿ ಉತ್ತಮ ಸಾಮರ್ಥ್ಯ ತೋರಿತು. ಕಳೆದ ತಿಂಗಳು ಬಿಎಫ್‌ಸಿ ಸೇರಿದ್ದ ಗೋಲ್ ಕೀಪರ್‌ ಗುರುಪ್ರೀತ್ ಸಿಂಗ್ ಸಂಧು 75ನೇ ನಿಮಿಷದಲ್ಲಿ ಎದುರಾಳಿಗಳ ಪೆನಾಲ್ಟಿ ಕಿಕ್‌ ಅನ್ನು ತಡೆದು ಮಿಂಚಿದರು.

ಕಳೆದ ತಿಂಗಳು ಬೆಂಗಳೂರಿನಲ್ಲಿ ಇದೇ ತಂಡದ ವಿರುದ್ಧ ನಡೆದ ಪಂದ್ಯದಲ್ಲಿ ಆಡಿದ ತಂಡವನ್ನೇ ಮುಖ್ಯ ಕೋಚ್‌ ಆಲ್ಬರ್ಟೊ ರೋಕಾ ಕಣಕ್ಕೆ ಇಳಿಸಿದ್ದರು. ಆದರೂ ತಂಡವು ಮೇ ಡೇ ಕ್ರೀಡಾಂಗಣದಲ್ಲಿ ನಿರೀಕ್ಷೆಗೆ ತಕ್ಕಂತೆ ಮಿಂಚಲಿಲ್ಲ. ಸೇಡು ತೀರಿಸಲು ಕಾಯುತ್ತಿದ್ದ ಆತಿಥೇಯರಿಗೂ ಪರಿಪೂರ್ಣ ಸಾಮರ್ಥ್ಯ ಮೆರೆಯಲು ಸಾಧ್ಯವಾಗಲಿಲ್ಲ. ಎಎಫ್‌ಸಿ ಕಪ್‌ ಟೂರ್ನಿಯಲ್ಲಿ ಅತಿ ಹೆಚ್ಚು ಗೋಲು ಗಳಿಸಿದ ದಾಖಲೆ ಹೊಂದಿರುವ ಕಿಮ್‌ ಯೂ ಸಾಂಗ್‌ ಕೂಡ ಗೋಲು ಗಳಿಸಲು ಸಾಧ್ಯವಾಗದೆ ನಿರಾಸೆಗೆ ಒಳಗಾದರು.

ಎರಡು ಚರಣಗಳನ್ನು ಒಳಗೊಂಡ ಫೈನಲ್‌ನಲ್ಲಿ ಬಿಎಫ್‌ಸಿ ತಂಡ ತಜಕಿಸ್ತಾನದ ಇಸ್ಟಿಕ್‌ಲೋಲ್‌ ಎಫ್‌ಸಿಯನ್ನು ಎದುರಿಸಲಿದೆ. ಈ ಪಂದ್ಯ ಅಕ್ಟೋಬರ್ 18ರಂದು ಬೆಂಗಳೂರಿನ ಶ್ರೀ ಕಂಠೀರವ ಕ್ರೀಡಾಂಗಣದಲ್ಲಿ ನಡೆಯಲಿದೆ. ಇಸ್ಟಿಕ್‌ಲೋಲ್ ತಂಡ ಅಂತರ ವಲಯ ಸೆಮಿಫೈನಲ್‌ ಪಂದ್ಯದಲ್ಲಿ ಫಿಲಿಪೈನ್ಸ್‌ನ ಸಿರೀಸ್‌ ನೆಗ್ರೋಸ್‌ ಎಫ್‌ಸಿಯನ್ನು 5–1 ಗೋಲುಗಳ ಅಂತರದಿಂದ ಮಣಿಸಿತ್ತು. ಮೊದಲ ಚರಣದ ಫೈನಲ್‌ನಲ್ಲಿ ಗೆಲುವು ಸಾಧಿಸುವ ತಂಡ ಸಿರಿಯಾದ ಅಲ್ ವಾಹ್ದಾ ಅಥವಾ ಇರಾಕ್‌ನ ವಾಯುಸೇನಾ ಕ್ಲಬ್ ತಂಡವನ್ನು ಎರಡನೇ ಚರಣದ ಅಂತಿಮ ಪಂದ್ಯದಲ್ಲಿ ಎದುರಿಸಬೇಕು. ಈ ಪಂದ್ಯ ನವೆಂಬರ್‌ ನಾಲ್ಕರಂದು ನಡೆಯಲಿದೆ.

Read More

Comments
ಮುಖಪುಟ

ಉಕ್ರೇನ್ ರಾಯಭಾರಿ ಕೆಂಪುಕೋಟೆ ಬಳಿ ಫೋಟೊ ಕ್ಲಿಕ್ಕಿಸುತ್ತಿದ್ದಾಗ ಫೋನ್ ಕಿತ್ತು ಪರಾರಿ

ಪೊಲೀಖಾ ಅವರು ಬೆಳಗ್ಗೆ 9.15ರ ಹೊತ್ತಿಗೆ ದೆಹಲಿಯ ಕೆಂಪುಕೋಟೆ ಬಳಿ ಫೋಟೊ ತೆಗೆದುಕೊಳ್ಳುತ್ತಿದ್ದ ವೇಳೆ ಆಗಂತುಕನೊಬ್ಬ ಫೋನ್ ಕಿತ್ತು ಪರಾರಿಯಾಗಿದ್ದಾನೆ.

ಪ್ರಾಚೀನ ಭಾರತದಲ್ಲಿ ದುರ್ಗೆ ರಕ್ಷಣಾ ಸಚಿವೆ, ಲಕ್ಷ್ಮಿ ಹಣಕಾಸು ಮಂತ್ರಿ: ವೆಂಕಯ್ಯನಾಯ್ಡು

ವಿದ್ಯಾರ್ಥಿಗಳು ನಮ್ಮ ಪರಂಪರೆಯ ಬಗ್ಗೆ ಹೆಮ್ಮೆ ಪಡಬೇಕು. ರಾಮರಾಜ್ಯ ಎನ್ನುವುದು ಇಂದಿಗೂ ನಮ್ಮ ಇತಿಹಾಸದ ಶ್ರೇಷ್ಠ ಕಾಲಘಟ್ಟವಾಗಿದೆ. ಅದಕ್ಕೆ ಕಾರಣ ಆ ಆಡಳಿತ ವ್ಯವಸ್ಥೆಯಲ್ಲಿದ್ದ ಆದರ್ಶಗಳು. ಆದರೆ ಇತ್ತೀಚಿನ ದಿನಗಳು ಅದನ್ನು ಕೋಮು ಭಾವ ದೃಷ್ಟಿಯಲ್ಲಿ ನೋಡಲಾಗುತ್ತಿದೆ.

ಆರ್‍ಎಸ್ಎಸ್ ಭಾರತವನ್ನು ಹಿಂದೂ, ಹಿಂದಿ, ಹಿಂದೂಸ್ತಾನವನ್ನಾಗಿಸಲು ಯತ್ನಿಸುತ್ತಿದೆ

ಆರ್‍ಎಸ್ಎಸ್ ರಾಜ್ಯ ಸರ್ಕಾರಗಳನ್ನು ದುರ್ಬಲವಾಗಿಸಲು ಯತ್ನಿಸುತ್ತಿವೆ. ಇದಕ್ಕಾಗಿ ಅವರು ಒಕ್ಕೂಟವಾದವನ್ನು ಒಡೆದು ಹಿಂದಿ, ಹಿಂದೂ, ಹಿಂದೂಸ್ತಾನವನ್ನಾಗಿಸುವ ಉದ್ದೇಶವನ್ನು ಹೇರುತ್ತಿದ್ದಾರೆ. ಬಿಜೆಪಿಯೂ ಇದೇ ರೀತಿ ಮಾಡುತ್ತಿದ್ದು ಅವರ ಈ ಯತ್ನವನ್ನು ವಿಫಲಗೊಳಿಸಬೇಕಿದೆ

‘ಗುಮ್ನಾಮಿ ಬಾಬಾ ಅವರೇ ನೇತಾಜಿ ಎಂದು ಹೆಚ್ಚು ಜನ ನಂಬಿದ್ದರು’

‘ಆಯೋಗದ ಮುಂದೆ ಖುದ್ದಾಗಿ ಇಲ್ಲವೇ ಪತ್ರ ಮುಖೇನ ಮಾಹಿತಿ ನೀಡಿರುವ ಬಹುತೇಕರು ಗುಮ್ನಾಮಿ ಬಾಬಾ ಅವರೇ ನೇತಾಜಿ ಆಗಿದ್ದರು ಎಂದು ಹೇಳಿದ್ದಾರೆ...

ಸಂಗತ

ಆರೋಗ್ಯ ಬೇಕೇ? ಸ್ವಚ್ಛತೆ ಕಾಪಾಡಿ

ಮನುಷ್ಯ ಹಣ ಗಳಿಕೆಗಾಗಿ ಗುಣ ಹಾಗೂ ಆರೋಗ್ಯ ಎರಡನ್ನೂ ಪಣಕ್ಕಿಟ್ಟು ದುಡಿಯುತ್ತಿದ್ದಾನೆ. ಹಾಗೇ ಇವೆರಡನ್ನೂ ಕಳೆದುಕೊಳ್ಳುತ್ತಿದ್ದಾನೆ.

ವಸ್ತುನಿಷ್ಠತೆ ಮೆರೆಯೋಣ

ವ್ಯಕ್ತಿ ನಿಂದೆ ಮಾಡದೆಯೂ ಗಾಂಧಿ ಚಿಂತನೆಗಳ ಪುನರ್ ವ್ಯಾಖ್ಯಾನ ಮಾಡಲು ಸಾಧ್ಯವಿಲ್ಲವೇ? ನಕಾರಾತ್ಮಕ ದೃಷ್ಟಿಯ ಬರವಣಿಗೆಯಿಂದ ಯುವಕರನ್ನು ಹಾದಿ ತಪ್ಪಿಸಿದಂತಾಗುತ್ತದೆ.

ಕರ್ಮಸಿದ್ಧಾಂತ, ಕಾಯಕಸಿದ್ಧಾಂತ ಪೂರ್ಣ ಬೇರೆ

ವೇದವನೋದಿದ ವಿಪ್ರರು ಹೊನಲಲ್ಲಿ ಹೋದ ಕೇಡ ನೋಡಿರೇ!

ಭರ್ಗೋ ದೇವಸ್ಯ ಧೀಮಹಿ ಎಂಬರು

ಒಬ್ಬರಿಗಾಗಿ ವಿಚಾರವಿಲ್ಲ ನೋಡಿರೇ

ಕೂಡಲಸಂಗಮದೇವಾ.

ಇಳೆಯ ನರಳಿಕೆಗೆ ಚಿಕಿತ್ಸೆ

ನಮಗಿರುವುದು ಒಂದೇ ಭೂಮಿ. ಅದನ್ನು ಸೊರಗಿಸಿದರೆ ಬಳಲುವವರು ನಾವೇ ಎನ್ನುವ ಪ್ರಜ್ಞೆ ಮೂಡುವವರೆಗೆ ನರಳಿಕೆ ತಪ್ಪಿದ್ದಲ್ಲ

ಚಂದನವನ

ಹಬ್ಬುವ ಹೆಬ್ಬಯಕೆಯ ಚಿಗುರು ಲತೆ

ಉತ್ತರ ಕನ್ನಡದ ಶಿರಸಿಯಲ್ಲಿ ಹುಟ್ಟಿ ನ್ಯೂಜಿಲೆಂಡ್‌ನಲ್ಲಿ ಬೆಳೆದು ಮತ್ತೀಗ ಚಿತ್ರರಂಗದ ಮೂಲಕ ತವರಿನಲ್ಲಿಯೇ ಬೇರೂರಿ ಬೆಳೆಯುವ ಹಂಬಲದಲ್ಲಿರುವ ಸುಂದರಿ ಲತಾ ಹೆಗಡೆ. ಮಹೇಶ್‌ ಬಾಬು ನಿರ್ದೇಶನದ ‘ಅತಿರಥ’ ಸಿನಿಮಾದ ಮೂಲಕ ಚಂದನವನಕ್ಕೆ ಪದಾರ್ಪಣೆ ಮಾಡಿರುವ ಇವರಿಗೆ ಒಳ್ಳೆಯ ಅವಕಾಶಗಳು ಸಿಕ್ಕರೆ ಇಲ್ಲಿಯೇ ನೆಲೆಯೂರುವ ಬಯಕೆ ಇದೆ.

‘ಹೀರೊಯಿನ್‌’ ಹಾಡು ಪಾಡು

ಹಾಸ್ಯದ ರೂಪದಲ್ಲಿ ಒಂದು ಸಂದೇಶವನ್ನೂ ನೀಡಿದ್ದೇವೆ. ಬದುಕಿನಲ್ಲಿ ಬರುವ ಕಷ್ಟಗಳನ್ನು ಕಾಮಿಡಿಯ ದೃಷ್ಟಿಕೋನದಿಂದಲೇ ನೋಡುವ ಪ್ರಯತ್ನ ಇದು’ ಎಂದು ಬಾಹುಬಲಿ ವಿವರಿಸಿದರು.

ಪೊಲೀಸ್ ದಿರಿಸಿನಲ್ಲಿ ಹುಚ್ಚ ವೆಂಕಟ್

ಈ ಸಿನಿಮಾದಲ್ಲಿ ವೆಂಕಟ್ ಅವರು ಪೊಲೀಸ್ ಅಧಿಕಾರಿಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ‘ಪೊಲೀಸರಿಗೆ ಜನ ಬೆಲೆ ಕೊಡುವುದು ಅವರ ಖಾಕಿ ಬಟ್ಟೆ ನೋಡಿ ಅಲ್ಲ. ಬೆಲೆ ಕೊಡುವುದು ಅವರ ಧರಿಸುವ ಪೊಲೀಸ್ ಕ್ಯಾಪ್ ನೋಡಿ’ ಎನ್ನುತ್ತ ಮಾತಿಗೆ ಇಳಿದರು ವೆಂಕಟ್.

ಮತ್ತೆ ಬರುತ್ತಿದ್ದಾನೆ ‘ಕೌರವ’

ಮುಂದಿನ ತಿಂಗಳ 13ರಂದು ಸಿನಿಮಾ ಬಿಡುಗಡೆ ಮಾಡುವ ಉದ್ದೇಶ ಇದೆ. ನಾನು ಹಣ ಮಾಡುವ ಉದ್ದೇಶದಿಂದ ಈ ರಂಗಕ್ಕೆ ಬಂದವನಲ್ಲ. ಒಳ್ಳೆಯ ಸಿನಿಮಾ ಮಾಡಬೇಕು ಎಂಬುದಷ್ಟೇ ನನ್ನ ಉದ್ದೇಶ’ ಎಂದು ನರೇಶ್ ಹೇಳಿಕೊಂಡರು.