‘ಪ್ರಜಾಪ್ರಭುತ್ವದ ಕವಿ!’

12 Oct, 2017
ಪ್ರಜಾವಾಣಿ ವಾರ್ತೆ

ರಾಷ್ಟ್ರಕವಿ ಕುವೆಂಪು ಅವರ ‘ಶ್ರೀ ರಾಮಾಯಣ ದರ್ಶನಂ’ಗೆ ಭಾರತೀಯ ಜ್ಞಾನಪೀಠ ಪ್ರಶಸ್ತಿ– ಕನ್ನಡಕ್ಕೆ ಮೊದಲನೆಯದು– ಲಭಿಸಿ ಸರಿಯಾಗಿ ಐವತ್ತು ವರ್ಷಗಳಾದುವು (ಸುವರ್ಣ ಮಹೋತ್ಸವ ಮತ್ತು ಕರ್ಣಾಟಕ ಏಕೀಕರಣಕ್ಕೆ ವಜ್ರಮಹೋತ್ಸವ). ಜ್ಞಾನಪೀಠ ಪುರಸ್ಕಾರ ಎಂಬುದು ಭಾರತದ ಪಾಲಿಗೆ ನೊಬೆಲ್‌ ಪ್ರಶಸ್ತಿ!

ಭಾರತ ಸ್ವಾತಂತ್ರ್ಯ ಸಂಗ್ರಾಮ ನಡೆಯುತ್ತಿದ್ದಾಗ ಕುವೆಂಪು ಮಹಾಕಾವ್ಯ ರಚನೆಯಲ್ಲಿ ತೊಡಗಿದ್ದರು (1936–45); ನವಮಾಸವಲ್ಲ, ನವವರ್ಷ! ಅದು ಪ್ರಕಟವಾದುದು 1949ರಲ್ಲಿ; ಸ್ವಾತಂತ್ರ್ಯಪ್ರಾಪ್ತಿಯ (1947) ಎರಡೇ ವರ್ಷಗಳ ನಂತರ; ಸಂವಿಧಾನ ರಚನೆಗೆ (1950) ತುಸು ಮುನ್ನವಷ್ಟೆ. ಇದೆಲ್ಲ ಅರ್ಥವತ್ತಾಗಿ ತೋರುವುದಿಲ್ಲವೆ?

ಸರ್ವೋದಯ ‘ಶ್ರೀ ರಾಮಾಯಣ ದರ್ಶನಂ’ ನಲ್ಲಿ– ಇಡೀ ಕುವೆಂಪು ವಾಙ್ಮಯದಲ್ಲಿ– ಅಂತರ್ಗತವಾಗಿರುವ ಯುಗಧರ್ಮ. ನಮ್ಮ ಸಂವಿಧಾನದ ಆಶಯಗಳನ್ನೆಲ್ಲ ಅದು ಗರ್ಭೀಕರಿಸಿಕೊಂಡಿದೆ. ಅಮೆರಿಕನ್‌ ಕವಿ ವಾಲ್ಟ್‌ ವಿಟ್ಮನ್‌ ‘ಪ್ರಜಾಪ್ರಭುತ್ವದ ಕವಿ’ ಎನಿಸಿಕೊಂಡಿದ್ದಾರೆ.

ಕುವೆಂಪು ಅವರಿಗೂ ಆ ಅಭಿಧಾನ ಸಂಪೂರ್ಣ ಒಪ್ಪುತ್ತದೆ; (ಐ.ಸಿ. ಬ್ರಾಡ್ಲೆ, ವರ್ಡ್ಸ್‌ವರ್ತ್‌ನನ್ನು ಕರೆದಂತೆ) ಅವರು ‘ಸಮಷ್ಟಿಯ ಕವಿ’ ಕೂಡ! ಅಂತೂ ಅನನ್ಯರು.
-ಸಿ.ಪಿ.ಕೆ., ಮೈಸೂರು

Read More

Comments
ಮುಖಪುಟ

ಕನಿಷ್ಠ ಮೂಲವೇತನ ₹16,350ಕ್ಕೆ ಹೆಚ್ಚಳ?

ನೌಕರರ ಆರಂಭಿಕ ವೇತನ ಶ್ರೇಣಿ ಅಂದರೆ ‘ಡಿ’ ಗ್ರೂಪ್‌ ನೌಕರರಿಗೆ ಮೂಲವೇತನ ₹9,600 ಇದ್ದು, ತುಟ್ಟಿಭತ್ಯೆ ಈಗ ಶೇ 45.25ರಷ್ಟಿದೆ. ಬೆಂಗಳೂರಿನಲ್ಲಿ ಮನೆಬಾಡಿಗೆ ಭತ್ಯೆ ಮೂಲವೇತನದ ಶೇ 30ರಷ್ಟಿದೆ.

ರಾಹುಲ್‌ ಯುಗಾರಂಭ; ಸೋನಿಯಾ ಭಾವುಕ ವಿದಾಯ

ಸತತ 19 ವರ್ಷಗಳ ಕಾಲ ಪಕ್ಷದ ಅಧ್ಯಕ್ಷೆಯಾಗಿ ಸೇವೆ ಸಲ್ಲಿಸಿದ ಸೋನಿಯಾ ಗಾಂಧಿ, ಸಾವಿರಾರು ಬೆಂಬಲಿಗರು ಮತ್ತು ಕಾರ್ಯಕರ್ತರೆದುರು ತಮ್ಮ ಪುತ್ರ ರಾಹುಲ್‌ಗೆ ಅಧಿಕಾರ ಹಸ್ತಾಂತರಿಸಿದರು.

 

ಮುಖ್ಯಮಂತ್ರಿಗೆ ‘ಚಿನ್ನದ ಕಿರೀಟ’ ಉಡುಗೊರೆ!

ಚಿನ್ನದ ಕಿರೀಟದ ತೂಕ 500 ಗ್ರಾಂ ಎಂದು ಕೆಲವರು, 250 ಗ್ರಾಂ ಎಂದೂ ಇನ್ನು ಕೆಲವರು ತಿಳಿಸಿದರು. ‘ಕಿರೀಟದ ಅಂದಾಜು ಮೌಲ್ಯ ₹5 ಲಕ್ಷ. ಖಡ್ಗದ ಮೌಲ್ಯ ₹30 ಸಾವಿರ ಹಾಗೂ ಹಾರದ ಮೌಲ್ಯ ₹25 ಸಾವಿರ ಇರಬಹುದು’ ಎಂದು ಶಾಸಕರ ಆಪ್ತ ಮೂಲಗಳು ಹೇಳುತ್ತವೆ.

ಎಚ್‌1ಬಿ ವೀಸಾ ನಿಯಮ ಬದಲು ಪತ್ನಿ–ಪತಿಯ ಉದ್ಯೋಗಕ್ಕೆ ಕತ್ತರಿ?

ಒಬಾಮ ಸರ್ಕಾರದ ರೂಪಿಸಿದ್ದ ನಿಯಮಾವಳಿಯಲ್ಲಿ ಬದಲಾವಣೆ ತರುವ ಆಲೋಚನೆ ಇದೆ ಎಂದು ಅಮೆರಿಕದ ಆಂತರಿಕ ಭದ್ರತಾ ಇಲಾಖೆ ಸುತ್ತೋಲೆಯಲ್ಲಿ ತಿಳಿಸಿದೆ.

ಸಂಗತ

ನಿರ್ಭಯಾ ನೆನಪು– ವರ್ಮಾ ವರದಿ

ದೌರ್ಜನ್ಯ ತಡೆಯುವ ನಿಟ್ಟಿನಲ್ಲಿ ನ್ಯಾಯಮೂರ್ತಿ ವರ್ಮಾ ವರದಿ ಒಂದು ಅಪರೂಪದ ದಾಖಲೆ. ಒಂದು ಬೃಹತ್ ಆಂದೋಲನದ ಫಲ. ಮಹಿಳಾ ಚಳವಳಿಗಳು ಇಂತಹ ವರದಿಗಳ ಅನುಷ್ಠಾನಕ್ಕೆ ಆಗ್ರಹಿಸಬೇಕು

ಪೇಜಾವರ ಶ್ರೀಗಳಿಗೆ... ಸ್ಪಷ್ಟನೆಗಾಗಿ ಪತ್ರ

ಸಂವಿಧಾನದ ಯಾವ ವಿಧಿಗಳ ಬಗ್ಗೆ ತಮಗೆ ತಕರಾರಿದೆ? ತಾವು ಬಯಸುವ ಬದಲಾವಣೆ ಏನು?

ಭಾರತ–ಬ್ರಿಟನ್‌ ನಡುವೆ ‘ಸಜೀವ ಸೇತುವೆ’

ದ್ವಿಪಕ್ಷೀಯ ಸಂಬಂಧ ವೃದ್ಧಿ ಕ್ರಮ: ಬೆಂಗಳೂರಿನಲ್ಲಿ ವೀಸಾ ಕೇಂದ್ರ

ಮನೆಪಾಠಕ್ಕೆ ಮದ್ದುಂಟೆ?

ಖಾಸಗಿ ಪಾಠ ವ್ಯವಸ್ಥೆಯು ಸಾಂಸ್ಥಿಕ ರೂಪದ ಶಾಲೆ–ಕಾಲೇಜುಗಳಿಗೆ ಪರ್ಯಾಯವಾಗಿ ಬೆಳೆಯತೊಡಗಿರುವುದು ಸಾಮಾಜಿಕ ದೃಷ್ಟಿಕೋನದಿಂದ ಸಮ್ಮತವೆನಿಸುವುದಿಲ್ಲ

ಮುಕ್ತಛಂದ

‌ಅಂಗೈಯಲ್ಲೇ ಸ್ವರ್ಗ ಕಾಣಬೇಕೆ?

ಯುವ ಮನಸ್ಸುಗಳ ಉತ್ಸಾಹ, ನವೋನ್ಮಾದಗಳನ್ನು ವೃದ್ಧಿಸುತ್ತಿರುವ ಕಾಲಘಟ್ಟದ ಆರಂಭದ ದಿನಗಳಲ್ಲಿ ನಾವಿದ್ದೇವೆ. ಇಂದಿನ ಹದಿಹರೆಯ, ಯುವಜನರ ಭಾವೋದ್ರೇಕದ ವರ್ತನೆಗಳು ನವೀನ ರೀತಿಯದ್ದಾಗಿದ್ದು ‘ಅದರಿಂದ ಕೆಡಕು’ ಎನ್ನುವ ಭಾವನೆ ವ್ಯಾಪಕ. ಮನೆ, ಸಮುದಾಯದ ಅಸಹನೆ ಹೆಚ್ಚುತ್ತಿರುವುದಕ್ಕೆ ತಂತ್ರಜ್ಞಾನ ಒದಗಿಸಿರುವ ಸಲಕರಣೆಗಳ ಪ್ರಭಾವವಿದೆ ಎನ್ನುವುದು ನಿಜವಿರಲೂಬಹುದು.

ಟಿ.ಆರ್‌.ಪಿ. ಎಂಬ ಚಾಲೂ ಚೆಲುವೆ!

ಟಿ.ಆರ್‌.ಪಿ. ಗಳಿಕೆಗಾಗಿಯೇ (ಟೆಲಿವಿಷನ್ ರೇಟಿಂಗ್ ಪಾಯಿಂಟ್) ಇಲ್ಲಿ ಪ್ರತಿಯೊಂದೂ ಮಾರುಕಟ್ಟೆ ಸರಕಾಗುತ್ತದೆ. ನೀವು ಪ್ರತಿಯೊಂದನ್ನೂ ಮಾರಬೇಕು. ಸುದ್ದಿಯನ್ನೂ ಅಷ್ಟೇ, ಧಾರಾವಾಹಿಯನ್ನೂ ಅಷ್ಟೇ. ಈ ಸರಕು ಸಂಸ್ಕೃತಿ ನಮ್ಮ ನೋಟವನ್ನು ಆಳುತ್ತದೆ. ನಮ್ಮ ಮೌಲ್ಯಗಳನ್ನು ಪಲ್ಲಟಗೊಳಿಸುತ್ತದೆ. ನಮ್ಮ ಅತಿ ಖಾಸಗಿ ನಂಟುಗಳನ್ನೂ ಅಲ್ಲಾಡಿಸುತ್ತದೆ.

ಟಿ.ವಿ. ವಾಹಿನಿಗಳ ನೈತಿಕ ಪ್ರಜ್ಞೆ

ಟಿ.ವಿ. ಚಾನೆಲ್‌ಗಳ ನಿರ್ವಾಹಕರೇ ಸ್ವಲ್ಪ ಸಾಮಾಜಿಕ ಕಳಕಳಿಯಲ್ಲದಿದ್ದರೂ ಜವಾಬ್ದಾರಿ ತೋರಿದರೆ ಆದೀತು. ಆದರೆ, ಪರಸ್ಪರ ತುಳಿದೇ ಮೇಲೆ ಬರುವ ಕ್ರೂರ ಸ್ಪರ್ಧೆಯ ಸುಳಿಯಲ್ಲಿ ಸಿಲುಕಿರುವ ಟಿ.ವಿ. ಸಂಸ್ಥೆಗಳಿಗೆ ಈ ನೈತಿಕತೆ ತುಂಬಾ ದುಬಾರಿಯಾಗಿಬಿಡುತ್ತದೆ. ಉದಾಹರಣೆಗೆ ಎಲ್ಲಾ ಟಿ.ವಿ. ಸಂಸ್ಥೆಗಳು ಅನುಸರಿಸಲೇಬೇಕಾದ ಹಲವು ಕಾರ್ಯಕ್ರಮ ಮತ್ತು ಜಾಹೀರಾತು ಸಂಹಿತೆಗಳಲ್ಲಿ ಒಂದು, ಕೇಬಲ್ ಟೆಲಿವಿಷನ್ ರೆಗ್ಯುಲೇಷನ್ ಆಕ್ಟ್ 1995.

ಮಧ್ಯಕಾಲದ ಹೆಣ

ಹೆಣ ಹಿರಿಹಿರಿ ಹಿಗ್ಗುತ್ತಿದೆ
ತಾನು ದೆವ್ವಗಿವ್ವ ಏನೂ ಆಗಿಲ್ಲವೆಂದು
ಆದರೆ ಭಯವೋ ಭಯ
ತನ್ನವೇ ಕೈ-ಕಾಲು ಕಣ್ಣು ತಲೆ ನೋಡಿಕೊಳ್ಳಲು!