ಪ್ಯಾಲೆಸ್ಟೀನ್ ಜೊತೆ ಬಾಂಧವ್ಯ ಸಮತೋಲನದ ನಿಲುವು

13 Feb, 2018

ಕಳೆದ ವಾರ ಪ್ಯಾಲೆಸ್ಟೀನ್‍ಗೆ ಭೇಟಿ ನೀಡುವ ಮೂಲಕ ಪ್ಯಾಲೆಸ್ಟೀನ್ ಜೊತೆಗಿನ ಐತಿಹಾಸಿಕ ಬಾಂಧವ್ಯದ ಎಳೆಗಳನ್ನು ಪ್ರಧಾನಿ ನರೇಂದ್ರ ಮೋದಿ ಅವರು ಪುನರ್‍‍ ಸ್ಥಾಪಿಸಿದ್ದಾರೆ. ಕಳೆದ 30 ವರ್ಷಗಳಲ್ಲಿ ರಾಮಲ್ಲಾಗೆ ಭೇಟಿ ನೀಡಿದ ಮೊದಲ ಭಾರತೀಯ ಪ್ರಧಾನಿಯಾಗಿದ್ದಾರೆ ಮೋದಿ. ಇಸ್ರೇಲ್- ಪ್ಯಾಲೆಸ್ಟೀನ್ ಜೊತೆ ಒಟ್ಟೊಟ್ಟಿಗೇ ಮಾತುಕತೆ ಅಥವಾ ಆ ದೇಶಗಳಿಗೆ ಒಟ್ಟೊಟ್ಟಿಗೇ ಪ್ರವಾಸ ಹೋಗುವಂತಹ ಸಂಪ್ರದಾಯವನ್ನು ಕೈಬಿಟ್ಟು ಎರಡೂ ರಾಷ್ಟ್ರಗಳ ಜೊತೆ ಸಮತೋಲನದ ಬಾಂಧವ್ಯ ಕಾಯ್ದು ಕೊಳ್ಳುವ ಹೊಸ ಪರಂಪರೆಯನ್ನು ಈ ಮೂಲಕ ಮೋದಿಯವರು ಸೃಷ್ಟಿಸಿದ್ದಾರೆ.

ಕಳೆದ ವರ್ಷ ಜುಲೈನಲ್ಲಿ ಇಸ್ರೇಲ್‍‍ಗೆ ಮಾತ್ರ ಭೇಟಿ ನೀಡಿದ್ದರು ಮೋದಿ. ಆದರೆ ಅದಕ್ಕೂ ಮುಂಚೆ ಪ್ಯಾಲೆಸ್ಟೀನ್ ಅಧ್ಯಕ್ಷ ಮೊಹಮ್ಮದ್ ಅಬ್ಬಾಸ್ ಅವರನ್ನು ಭಾರತಕ್ಕೆ ಬರಮಾಡಿಕೊಂಡು ಆತಿಥ್ಯ ನೀಡಿದ್ದರು. ಈಗ, ಇತ್ತೀಚೆಗಷ್ಟೇ ಭಾರತಕ್ಕೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಭೇಟಿ ನೀಡಿದ ನಂತರ ಮೋದಿಯವರು ಪ್ಯಾಲೆಸ್ಟೀನ್‍‍ಗೆ ಭೇಟಿ ನೀಡಿದ್ದಾರೆ. ಹೀಗಾಗಿ ಇಸ್ರೇಲ್ ಹಾಗೂ ಪ್ಯಾಲೆಸ್ಟೀನ್ ಜೊತೆಗಿನ ಬಾಂಧವ್ಯಗಳನ್ನು ಬೇರ್ಪಡಿಸಿ ಉಭಯ ರಾಷ್ಟ್ರಗಳ ಮಧ್ಯೆಯೂ ಆರೋಗ್ಯಕರ ಅಂತರ ಇರಿಸಿಕೊಂಡು ಬಾಂಧವ್ಯ ಕಾಯ್ದುಕೊಳ್ಳುವ ಹೊಸ ನೀತಿಗೆ ಇದು ದ್ಯೋತಕ.

ಇಸ್ರೇಲ್ ಜೊತೆಗಿನ ಭಾರತದ ಬಾಂಧವ್ಯ ಬೆಳೆಯುತ್ತಿರುವಂತೆಯೇ ಪ್ಯಾಲೆಸ್ಟೀನ್‍ಗೆ ಭಾರತದ ಪಾರಂಪರಿಕ ಬೆಂಬಲವೂ ಮುಂದುವರಿದೇ ಇದೆ. ಪ್ಯಾಲೆಸ್ಟೀನ್‍ಗೆ ಆರ್ಥಿಕ ಹಾಗೂ ಅಭಿವೃದ್ಧಿ ನೆರವು ನೀಡುವುದನ್ನು ಭಾರತ ನಿಲ್ಲಿಸಿಲ್ಲ. ಇಸ್ರೇಲ್- ಪ್ಯಾಲೆಸ್ಟೀನ್ ಸಂಘರ್ಷ ಬಗೆಹರಿಸಲು ರಾಜಕೀಯ ಬೆಂಬಲ ನೀಡುವುದನ್ನೂ ಭಾರತ ಮುಂದುವರಿಸಿದೆ. ಇಸ್ರೇಲ್ ರಾಜಧಾನಿಯಾಗಿ ಜೆರುಸಲೇಂಗೆ ಮಾನ್ಯತೆ ನೀಡುವ ಅಮೆರಿಕದ ಕ್ರಮ ಖಂಡಿಸುವ ವಿಶ್ವಸಂಸ್ಥೆ ಸಾಮಾನ್ಯ ಅಧಿವೇಶನ (ಯುಎನ್‌ಜಿಎ) ನಿರ್ಣಯದ ಪರ ಮತ ಹಾಕುವ ಮೂಲಕ ಭಾರತ ಈ ನಿಲುವನ್ನು ಮತ್ತೆ ಪ್ರದರ್ಶಿಸಿದೆ.

ಪ್ಯಾಲೆಸ್ಟೀನ್ ಕೈಬಿಟ್ಟು ಇಸ್ರೇಲ್ ಜೊತೆಗಷ್ಟೇ ಬಾಂಧವ್ಯ ವೃದ್ಧಿಯು ಜಾಗತಿಕ ನೆಲೆಯಲ್ಲಿ ಸರಿಯಾದ ಕ್ರಮವೂ ಅಲ್ಲ ಎಂಬುದು ನಮ್ಮ ಗಮನದಲ್ಲಿರಬೇಕು. ಏಕೆಂದರೆ ಇದು ಪಶ್ಚಿಮ ಏಷ್ಯಾ ಹಾಗೂ ಉತ್ತರ ಆಫ್ರಿಕಾ ರಾಷ್ಟ್ರಗಳ ಜೊತೆಗಿನ ನಮ್ಮ ರಾಜತಾಂತ್ರಿಕತೆಗೆ ಪೆಟ್ಟು ಕೊಡುವಂತಹದ್ದು.

ಜೋರ್ಡನ್‌ನಿಂದ ರಾಮಲ್ಲಾಗೆ ಹೆಲಿಕಾಪ್ಟರ್‌ ನಲ್ಲಿ ತೆರಳಿದ ಮೋದಿಯವರ ಹೆಲಿಕಾಪ್ಟರ್‌ಗೆ ಇಸ್ರೇಲ್ ವಾಯುಪಡೆಯ ಹೆಲಿಕಾಪ್ಟರ್‌ಗಳು ಬೆಂಗಾವಲಾಗಿದ್ದವು ಎಂಬುದು ವಿಚಿತ್ರ. ಕೇಂದ್ರದಲ್ಲಿ ಎನ್‍‍ಡಿಎ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಇಸ್ರೇಲ್ ಜೊತೆಗಿನ ಭಾರತದ ಬಾಂಧವ್ಯ ವೃದ್ಧಿಯಾಗಿದೆ. ಅಮೆರಿಕ, ರಷ್ಯಾ ಹಾಗೂ ಫ್ರಾನ್ಸ್ ನಂತರ ಭಾರತಕ್ಕೆ ಅತಿ ಹೆಚ್ಚು ಶಸ್ತ್ರಾಸ್ತ್ರಗಳನ್ನು ಪೂರೈಕೆ ಮಾಡುವ ನಾಲ್ಕನೇ ರಾಷ್ಟ್ರವಾಗಿದೆ ಇಸ್ರೇಲ್.

ಈ ಕ್ಷೇತ್ರದಲ್ಲಿ ಇಸ್ರೇಲ್ ಜೊತೆಗಿನ ಬಾಂಧವ್ಯ ಮುಂಬರುವ ದಿನಗಳಲ್ಲಿ ಇನ್ನೂ ಗಟ್ಟಿಯಾಗುವ ನಿರೀಕ್ಷೆ ಇದೆ. ಆಸಕ್ತಿಯ ಸಂಗತಿ ಎಂದರೆ ಪ್ಯಾಲೆಸ್ಟೀನ್‌ಗೆ ಮೋದಿಯವರು ಭೇಟಿ ನೀಡಿದ್ದು ಕೆಲವು ಗಂಟೆಗಳಷ್ಟೇ. ಅಂದೇ ರಾತ್ರಿ ಅವರು ಅಬುಧಾಬಿಗೆ ತೆರಳಿದ್ದರು. ಆದರೆ ಕಳೆದ ವರ್ಷ ಮೋದಿ ಇಸ್ರೇಲ್ ಭೇಟಿ ಮೂರು ದಿನಗಳ ಅವಧಿಯದಾಗಿತ್ತು.

ಪ್ಯಾಲೆಸ್ಟೀನ್ ಜೊತೆಗೆ ಇಸ್ರೇಲ್ ಬಾಂಧವ್ಯ ಸಂಘರ್ಷಮಯವಾದದ್ದು ಎಂಬುದು ಗೊತ್ತಿರುವ ಸಂಗತಿ. ಇಂತಹ ಸಂದರ್ಭದಲ್ಲಿ ಇಸ್ರೇಲ್ ಹಾಗೂ ಪ್ಯಾಲೆಸ್ಟೀನ್ ಜೊತೆ ಸ್ವತಂತ್ರವಾಗಿ ಪ್ರತ್ಯೇಕವಾಗಿ ಬಾಂಧವ್ಯ ವೃದ್ಧಿ ಮಾಡಿಕೊಳ್ಳುವ ಭಾರತದ ಯತ್ನ ಇಲ್ಲಿದೆ. ಚೀನಾದ ಒನ್ ಬೆಲ್ಟ್, ಒನ್ ರೋಡ್ ಯೋಜನೆ ಬಗ್ಗೆ ಭಾರತ ಹೊಂದಿರುವ ಆಕ್ಷೇಪಗಳ ಅರಿವಿದ್ದೂ ಇಸ್ರೇಲ್ ಸಹ ಚೀನಾ ಜೊತೆ ಉತ್ತಮ ಬಾಂಧವ್ಯ ಇಟ್ಟುಕೊಂಡಿದೆ ಎಂಬುದನ್ನು ಇಲ್ಲಿ ನಾವು ಗಮನಿಸಬೇಕು. ಹಾಗೆಯೇ ಹಿಂದೂ ಮಹಾಸಾಗರ ವಲಯದಲ್ಲಿ ಹೆಚ್ಚುತ್ತಿರುವ ಚೀನಾ ಪ್ರಭಾವದ ಬಗ್ಗೆ ಭಾರತ ಹೊಂದಿರುವ ಆತಂಕವನ್ನು ಇಸ್ರೇಲ್ ದೊಡ್ಡದಾಗೇನೂ ಪರಿಗಣಿಸಿಲ್ಲ. ಇಂತಹ ಸಂದರ್ಭದಲ್ಲಿ ಪ್ಯಾಲೆಸ್ಟೀನ್ ಹಾಗೂ ಇಸ್ರೇಲ್ ಜೊತೆಗೆ ಈ ಸಮತೋಲನದ ನಡಿಗೆ ಭಾರತಕ್ಕೆ ಅನಿವಾರ್ಯ.

ಇಸ್ರೇಲ್ ಜೊತೆಗೆ ಭಾರತ ಸಮೃದ್ಧ ವ್ಯಾಪಾರ ಹಾಗೂ ದ್ವಿಪಕ್ಷೀಯ ಬಾಂಧವ್ಯ ಹೊಂದಿರುತ್ತದೆ ಎಂಬ ಅರಿವು ಪ್ಯಾಲೆಸ್ಟೀನ್‍ಗಿರುತ್ತದೆ. ಹಾಗೆಯೇ ಪ್ಯಾಲೆಸ್ಟೀನ್ ವಿಚಾರ ಬೆಂಬಲಿಸಿಕೊಂಡು ಬಂದಿರುವ ಭಾರತ ನಿಲುವಿನಲ್ಲಿ ಬದಲಾವಣೆ ಇರುವುದಿಲ್ಲ ಎಂಬ ಬಗ್ಗೆ ಇಸ್ರೇಲ್‌ಗೂ ಅರಿವಿದೆ. ಜಾಗತೀಕರಣದ ಯುಗದಲ್ಲಿ ರಾಷ್ಟ್ರಗಳ ನಡುವಿನ ಬಾಂಧವ್ಯಗಳಲ್ಲೂ ಪಲ್ಲಟಗಳಾಗುತ್ತಿವೆ.

ಸೈದ್ಧಾಂತಿಕ ಪರಿಗಣನೆಗಳೇ ಇಲ್ಲಿ ಮುಖ್ಯವಾಗುವುದಿಲ್ಲ. ವಾಣಿಜ್ಯ ಹಾಗೂ ವ್ಯೂಹಾತ್ಮಕ ಹಿತಾಸಕ್ತಿ ಮೇಲುಗೈ ಸಾಧಿಸುತ್ತವೆ. ಕಾಯಂ ಆದ ಹಿತಾಸಕ್ತಿ ಇಲ್ಲಿ ಮುಖ್ಯ ಎಂಬುದು ವಾಸ್ತವವಾದಿ ದೃಷ್ಟಿಕೋನದ ನೆಲೆಯಲ್ಲಿ ಸರಿಯಾದುದು.

Read More

Comments
ಮುಖಪುಟ

ಸಾರ್ವಜನಿಕವಾಗಿ ಸುಳ್ಳು ಹೇಳಿದ ಶಾ

‘ಕಾಂಗ್ರೆಸ್ ಶಾಸಕ ಎನ್‌.ಎ.ಹ್ಯಾರಿಸ್‌ ಮಗ ಮೊಹಮದ್‌ ನಲಪಾಡ್‌ನಿಂದ ಹಲ್ಲೆಗೊಳಗಾಗಿರುವ ವಿದ್ವತ್‌ ನಮ್ಮ ಕಾರ್ಯಕರ್ತ’ ಎಂದು ಮಂಗಳವಾರ ಮಧ್ಯಾಹ್ನ ಬಿ.ಸಿ.ರೋಡ್‌ನಲ್ಲಿ ಹೇಳಿಕೆ ನೀಡಿದ್ದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ, ಸಂಜೆಯ ವೇಳೆಗೆ ಸುರತ್ಕಲ್‌ನಲ್ಲಿ ಅದನ್ನು ಹಿಂಪಡೆದು ಉದ್ದೇಶಪೂರ್ವಕ ವಾಗಿ ಸುಳ್ಳು ಹೇಳಿರುವುದಾಗಿ ಸ್ಪಷ್ಟನೆ ನೀಡಿದರು.

ಅಧಿಕ ಶುಲ್ಕ ವಸೂಲಿ: ಖಾಸಗಿ ಆಸ್ಪತ್ರೆಗಳ ಹಗಲು ದರೋಡೆ

ಔಷಧ, ವೈದ್ಯಕೀಯ ಸಲಕರಣೆಗಳಿಗಾಗಿ ಅಸಹಾಯಕ ರೋಗಿಗಳಿಂದ ಶೇ 1,192 ರಷ್ಟು ಹೆಚ್ಚಿಗೆ ಹಣವನ್ನು ಖಾಸಗಿ ಆಸ್ಪತ್ರೆಗಳು ಲೂಟಿ ಮಾಡಿವೆ ರಾಷ್ಟ್ರೀಯ ಔಷಧ ಬೆಲೆ ನಿಯಂತ್ರಣ ಪ್ರಾಧಿಕಾರ (ಎನ್‌ಪಿಪಿಎ) ವರದಿ ಹೇಳಿದೆ.

ಮುಖ್ಯ ಕಾರ್ಯದರ್ಶಿ ಮೇಲೆ ಎಎಪಿ ಶಾಸಕರ ಹಲ್ಲೆ?

ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ನಿವಾಸದಲ್ಲಿ ಸೋಮವಾರ ರಾತ್ರಿ ಆಮ್‌ ಆದ್ಮಿ ಪಕ್ಷದ(ಎಎಪಿ) ಇಬ್ಬರು ಶಾಸಕರು ತಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ದೆಹಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಅಂಶು ಪ್ರಕಾಶ್‌ ಆರೋಪಿಸಿದ್ದಾರೆ.

ಪಾಲಿಕೆ ಕಚೇರಿಯಲ್ಲಿ ಕಾಂಗ್ರೆಸ್ ಮುಖಂಡನ ದರ್ಪ

ವಿವಾದಿತ ಜಮೀನಿಗೆ ಖಾತೆ ಮಾಡಿಕೊಡದ ಕಾರಣಕ್ಕೆ ಹೊರಮಾವು ಬಿಬಿಎಂಪಿ ಕಚೇರಿಗೆ ನುಗ್ಗಿ ದಾಂದಲೆ ನಡೆಸಿರುವ ಕಾಂಗ್ರೆಸ್‌ನ ಕೆ.ಆರ್‌.ಪುರ ಬ್ಲಾಕ್‌ ಮಾಜಿ ಅಧ್ಯಕ್ಷ ನಾರಾಯಣಸ್ವಾಮಿ, ದಾಖಲೆಗಳ ಮೇಲೆ ಪೆಟ್ರೋಲ್ ಎರಚಿ ಬೆಂಕಿ ಹಚ್ಚಲು ಯತ್ನಿಸಿದ್ದಾರೆ.

ಸಂಗತ

ಮಾರುತ್ತರ ನೀಡಲು ಸಾಧ್ಯವೇ?

ನುಡಿಯ ಬಗೆಗೆ ಸಚಿವ ಅನಂತಕುಮಾರ ಹೆಗಡೆ ಹೇಳಿಕೆ ನೀಡುವ ಮೊದಲು ತಾವು ಪ್ರತಿನಿಧಿಸುವ ಕ್ಷೇತ್ರವಾದ ಉತ್ತರ ಕನ್ನಡ ಜಿಲ್ಲೆಯಲ್ಲಿ ತಮಗೆ ಮತ ನೀಡಿದ ಜನರು ಬಳಸುತ್ತಿರುವ ವಿವಿಧ ಬಗೆಯ ಉಪಭಾಷೆಗಳ ಬಗೆಗೆ ಮಾಹಿತಿಯನ್ನಾದರೂ ಪಡೆದಿದ್ದರೆ ಚೆನ್ನಾಗಿರುತ್ತಿತ್ತು

ಅಸಾಮಾನ್ಯ ಅಸಭ್ಯರು

ಹಿಂದೊಮ್ಮೆ ರೈತರು ಹಾಗೂ ಶರಣರೂ ಎರಡೂ ಆಗಿದ್ದ ಯಡಿಯೂರಪ್ಪನವರು ನಿಮ್ಮ ಮಾತನ್ನು ಖಂಡಿತವಾಗಿ ಕೇಳಿಸಿಕೊಂಡಾರು. ಒಟ್ಟು ಕತೆಯ ನೀತಿಯೆಂದರೆ ಭಾರತೀಯ ರಾಜಕಾರಣವನ್ನು ಯುಬಿ ಸಿಟಿ ಬಾರುಗಳಿಂದ ಕೆಳಗಿಳಿಸಿ ತರಬೇಕಾದ ಜರೂರು ತುಂಬ ಇದೆ!

ಅರಣ್ಯ ಪರಿಸ್ಥಿತಿ ವರದಿ ಮತ್ತು ನೈಜ ಸ್ಥಿತಿ

ಅರಣ್ಯ ಪ್ರದೇಶ ಹೆಚ್ಚಳದ ಹಿಂದಿನ ಹಾಗೂ ಸಮಾಜೋ-–ಆರ್ಥಿಕ ಆಯಾಮಗಳು ಮತ್ತು ಇಲಾಖೆಯ ಆಡಳಿತಾತ್ಮಕ ಜವಾಬ್ದಾರಿಯನ್ನು ವರದಿ ಚರ್ಚಿಸುವುದಿಲ್ಲ

ಮಾಲ್ಡೀವ್ಸ್‌ನ ರಾಜಕೀಯ ಬಿಕ್ಕಟ್ಟು–ಪರಿಹಾರ

ಭಾರತಕ್ಕೆ ಉಳಿದಿರುವ ದಾರಿಯೆಂದರೆ, ವಿಶ್ವಸಂಸ್ಥೆ ಮತ್ತು ಅಮೆರಿಕದ ಜೊತೆಗೂಡಿ ರಾಜತಾಂತ್ರಿಕ ಮಾರ್ಗದ ಮೂಲಕ ಮಾಲ್ಡೀವ್ಸ್‌ ಬಿಕ್ಕಟ್ಟನ್ನು ಪರಿಹರಿಸಲು ಶ್ರಮಿಸುವುದು.

ವಾಣಿಜ್ಯ

‘ಟಿಟಿಕೆ ಪ್ರೆಸ್ಟೀಜ್’ ಯಶೋಗಾಥೆ

ಟಿಟಿಕೆ ಗ್ರೂ‍ಪ್‌ನ ಅಂಗಸಂಸ್ಥೆಯಾಗಿರುವ ‘ಟಿಟಿಕೆ ಪ್ರೆಸ್ಟೀಜ್‌’, ಬರೀ ಪ್ರೆಷರ್‌ ಕುಕ್ಕರ್‌ ತಯಾರಿಕೆ ಸಂಸ್ಥೆ ಎನ್ನುವ ಗ್ರಾಹಕರ ನಂಬಿಕೆ ಬದಲಿಸಲು ಸಾಕಷ್ಟು ಶ್ರಮಪಟ್ಟಿದೆ. ಪ್ರೆಷರ್‌ ಕುಕ್ಕರ್‌ನಿಂದ ಹಿಡಿದು ವೈವಿಧ್ಯಮಯ ಉತ್ಪನ್ನಗಳ ಮೂಲಕ ಗ್ರಾಹಕರ ಮನ ಗೆದ್ದಿದೆ.

ಗುಂಪು ವಿಮೆ: ಜತೆಗಿರಲಿ ಇನ್ನೊಂದು ವಿಮೆ

ಕಾರ್ಪೊರೇಟ್‌ ಗುಂಪು ಆರೋಗ್ಯ ವಿಮೆ ಖಂಡಿತವಾಗಿಯೂ ಒಳ್ಳೆಯ ಉಪಕ್ರಮ.  ಹೆಚ್ಚುತ್ತಿರುವ ಆರೋಗ್ಯ ವೆಚ್ಚಗಳನ್ನು ನಿಭಾಯಿಸಲು  ಗುಂಪು ವಿಮೆಯ ಫಲಾನುಭವಿಗಳು  ಪ್ರತ್ಯೇಕ ಸ್ವತಂತ್ರ ವಿಮೆ ಮಾಡಿಸುವುದರಿಂದ ದೊರೆಯುವ ಪ್ರಯೋಜನಗಳನ್ನು ಇಲ್ಲಿ ವಿವರಿಸಲಾಗಿದೆ.

‘ಎಸ್‍ಎಂಇ’ಗಳ ಡಿಜಿಟಲೀಕರಣಕ್ಕೆ ಸೂಕ್ತ ಸಮಯ

ತಂತ್ರಜ್ಞಾನ ಸ್ಟಾರ್ಟ್‌ಅಪ್‍ಗಳ ಚಿಗುರೊಡೆಯುವಿಕೆ ಹಾಗೂ ಡಿಜಿಟಲ್ ಪಾವತಿಯ ಅಳವಡಿಕೆ ವಿಷಯದಲ್ಲಿ ದಕ್ಷಿಣ ಭಾರತ  ಮುಂಚೂಣಿಯಲ್ಲಿದೆ. ತಂತ್ರಜ್ಞಾನದ ಬೆಂಬಲದಿಂದ  ಇಲ್ಲಿಯ ಹಲವು ಉದ್ಯಮಗಳು  ತಮ್ಮ ವ್ಯವಹಾರವನ್ನು ವಿಸ್ತರಿಸಿವೆ.

ಹಣಕಾಸು ಯೋಜನೆ ಮೇಲೆ ಬಜೆಟ್‌ ಪರಿಣಾಮ

ಕೇಂದ್ರ ಸರ್ಕಾರದ ಬಜೆಟ್‌ ನಿಮ್ಮ ಹಣಕಾಸಿನ ಯೋಜನೆಗಳನ್ನು ಬದಲಾಯಿಸುತ್ತದೆಯೇ ಎನ್ನುವ ಅನುಮಾನಗಳಿಗೆ ಸಂಬಂಧಿಸಿದಂತೆ ವೈಭವ್‌ ಅಗರ್‌ವಾಲ್‌ ವಿವರಗಳನ್ನು ನೀಡಿದ್ದಾರೆ.

ತಂತ್ರಜ್ಞಾನ

ವಾಟ್ಸ್ ಆ್ಯಪ್‌ನಲ್ಲಿ ಹೀಗೂ ಇವೆ ಸುಲಭ ಉಪಾಯಗಳು

ವಾಟ್ಸ್‌ಆ್ಯಪ್‌ನಲ್ಲಿ ಫೋಟೊ ಕಳಿಸಿದರೆ ರೆಸೊಲ್ಯೂಷನ್ ಹೊರಟು ಹೋಗುತ್ತದೆ ಎಂದು ಹೇಳುವುದನ್ನು ಕೇಳಿದ್ದೇವೆ. ಆದರೆ ರೆಸೊಲ್ಯೂಷನ್ ಕಡಿಮೆಯಾಗದಂತೆ ಫೋಟೊಗಳನ್ನು ವಾಟ್ಸ್ ಆ್ಯಪ್ ನಲ್ಲಿಯೂ ಕಳುಹಿಸಬಹುದು.

ಮಾತೇ ಮಂತ್ರವಾದಾಗ!

ನಿತ್ಯ ಬಳಸುವ ಸಾಧನಗಳು ಮತ್ತು ಉಪಕರಣಗಳ ಜತೆ ಮಾತನಾಡಿಸುವಷ್ಟು ತಂತ್ರಜ್ಞಾನ ಅಭಿವೃದ್ಧಿಯಾಗಿದೆ. ಇಷ್ಟು, ದಿನ ಬಳಸುತ್ತಿದ್ದ ಟೆಕ್ಸ್ಟ್... ಕಮಾಂಡ್‌... ಟಚ್‌ಸ್ಕ್ರೀನ್ ತಂತ್ರಜ್ಞಾನಗಳನ್ನೂ ಮೀರಿ ಈಗ ಮಾತುಗಳೇ ಇನ್‌ಪುಟ್ಸ್‌ ಆಗಿ ಬದಲಾಗಿವೆ.

ಫೇಕ್‍ ನ್ಯೂಸ್ ಬಗ್ಗೆ ಎಚ್ಚರವಿರಲಿ

ಸುಳ್ಳು ಸುದ್ದಿಗಳು ಹೆಚ್ಚಾಗಿ ಆಕರ್ಷಕ ಶೀರ್ಷಿಕೆಗಳನ್ನು ಹೊಂದಿರುತ್ತವೆ. ಈ ಸುದ್ದಿಗಳ ಶೀರ್ಷಿಕೆಗಳು ನೋಡಿದ ಕೂಡಲೇ ಓದುಗರಲ್ಲಿ ಕುತೂಹಲ ಹುಟ್ಟಿಸುವಂತಿದ್ದು, ಒಳಗಿರುವ ಸುದ್ದಿಯಲ್ಲಿ ಶೀರ್ಷಿಕೆಯಲ್ಲಿ ಹೇಳಿದಂತೆ ಇರುವ ವಿಷಯಗಳು ಇರುವುದಿಲ್ಲ.

ಕಣ್ಣೀರಿನಿಂದ ಮಧುಮೇಹ ನಿಯಂತ್ರಣ?

ದೇಹದಲ್ಲಿರುವ ಸಕ್ಕರೆ ಅಂಶವನ್ನು ನಿಯಂತ್ರಣದಲ್ಲಿಡುವುದಕ್ಕಾಗಿ, ಇನ್ಸುಲಿನ್ ಚುಚ್ಚು ಮದ್ದು ಬಳಸುವುದು ಅನಿವಾರ್ಯವಾಗಿರುತ್ತದೆ.