ಕಾಡು ನಾಶ ಬೇಡ

13 Feb, 2018

ಕೊಡಗಿನ ಮೂಲಕ ಹಾದು ಹೋಗುವ ಕೇರಳದ ತಲಶ್ಶೇರಿ ರೈಲು ಮಾರ್ಗವಾಗಲೀ ಅಥವಾ ನಾಗರಹೊಳೆ ಅರಣ್ಯದ ಮೂಲಕ (ಡಿ.ಬಿ.ಕುಪ್ಪೆ ಮೂಲಕ) ಹಾದು

ಹೋಗುವ ನಂಜನಗೂಡು-ಕೇರಳದ ನಿಲಂಬೂರು ರೈಲು ಮಾರ್ಗವಾಗಲೀ ಕರ್ನಾಟಕಕ್ಕೆ ಲಾಭಕ್ಕಿಂತ ನಷ್ಟವೇ ಹೆಚ್ಚು ಎಂಬುದು ಎಲ್ಲರಿಗೂ ತಿಳಿದಿರುವಂಥದೇ ಆಗಿದೆ. ಶಕ್ತಿಗಿಂತ ಮಿಗಿಲಾಗಿ ಯುಕ್ತಿಯಲ್ಲೇ ಕೆಲಸ ನಿರ್ವಹಿಸುವ ಕೇರಳಿಗರಿಗೆ ಕರ್ನಾಟಕದ ಭೂ ಸಂಪತ್ತು, ಅರಣ್ಯ ಸಂಪತ್ತು ವರದಾನವಾಗಲಿದೆ.

ಕರ್ನಾಟಕದ ಪ್ರಾಕೃತಿಕ ಸಂಪತ್ತನ್ನು ಹಾಳುಗೆಡಹುವ ಇಂಥ ರೈಲು ಮಾರ್ಗಗಳು ಯಾವ ಕಾರಣಕ್ಕೂ ಬೇಡವೇ ಬೇಡ. ಕಾವೇರಿಯ ಒಡಲನ್ನು ಬರಿದು ಮಾಡುವ ಜೀವ ವಿರೋಧಿ ಯೋಜನೆಗಳನ್ನು ಕೊಡವರು ಮಾತ್ರ ವಿರೋಧಿಸಿದರೆ ಸಾಲದು, ಕಾವೇರಿ ನೀರನ್ನು ಅವಲಂಬಿಸಿಯೇ ಬದುಕುತ್ತಿರುವ ಎಲ್ಲ ಕನ್ನಡಿಗರೂ ಮತ್ತು ತಮಿಳುನಾಡಿನ ನಮ್ಮ ಒಡನಾಡಿಗಳೂ ಸಾರಾಸಗಟಾಗಿ ವಿರೋಧಿಸಬೇಕು. ಬದುಕುವ ನಮ್ಮ ಹಕ್ಕನ್ನು ಕಾಪಾಡಿಕೊಳ್ಳಬೇಕು.

ಅಭಿವೃದ್ಧಿಯೆಂದರೆ ಪ್ರಕೃತಿಯನ್ನು ನಾಶ ಮಾಡಿ ಬದುಕುವುದಲ್ಲ. ಕೇರಳಕ್ಕೆ ವಿದ್ಯುತ್ ಸರಬರಾಜಿಗಾಗಿ ಈಗಾಗಲೇ ಕೊಡಗಿನ ಒಂದಷ್ಟು ನಿತ್ಯಹಸಿರಿನ ಅರಣ್ಯ ಸಂಪತ್ತು ನಾಶವಾಗಿದೆ. ಮತ್ತಷ್ಟು ನಾಶ ಬೇಡ. ಆದ್ದರಿಂದ ಕರ್ನಾಟಕ ಮತ್ತು ತಮಿಳುನಾಡಿನ ಎಲ್ಲ ಜನಪರ, ಜೀವಪರ ಸಂಘಟನೆಗಳು ಒಂದಾಗಿ ಕೊಡಗು ಮತ್ತು ಆ ಪರಿಸರದ ಅರಣ್ಯವನ್ನು ರಕ್ಷಿಸಲು ಮುಂದಾಗಬೇಕಿದೆ.
–ಎಚ್.ಆರ್ ದೊರೆಸ್ವಾಮಿ, ಮೈಸೂರು

Read More

Comments
ಮುಖಪುಟ

ಸಾರ್ವಜನಿಕವಾಗಿ ಸುಳ್ಳು ಹೇಳಿದ ಶಾ

‘ಕಾಂಗ್ರೆಸ್ ಶಾಸಕ ಎನ್‌.ಎ.ಹ್ಯಾರಿಸ್‌ ಮಗ ಮೊಹಮದ್‌ ನಲಪಾಡ್‌ನಿಂದ ಹಲ್ಲೆಗೊಳಗಾಗಿರುವ ವಿದ್ವತ್‌ ನಮ್ಮ ಕಾರ್ಯಕರ್ತ’ ಎಂದು ಮಂಗಳವಾರ ಮಧ್ಯಾಹ್ನ ಬಿ.ಸಿ.ರೋಡ್‌ನಲ್ಲಿ ಹೇಳಿಕೆ ನೀಡಿದ್ದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ, ಸಂಜೆಯ ವೇಳೆಗೆ ಸುರತ್ಕಲ್‌ನಲ್ಲಿ ಅದನ್ನು ಹಿಂಪಡೆದು ಉದ್ದೇಶಪೂರ್ವಕ ವಾಗಿ ಸುಳ್ಳು ಹೇಳಿರುವುದಾಗಿ ಸ್ಪಷ್ಟನೆ ನೀಡಿದರು.

ಅಧಿಕ ಶುಲ್ಕ ವಸೂಲಿ: ಖಾಸಗಿ ಆಸ್ಪತ್ರೆಗಳ ಹಗಲು ದರೋಡೆ

ಔಷಧ, ವೈದ್ಯಕೀಯ ಸಲಕರಣೆಗಳಿಗಾಗಿ ಅಸಹಾಯಕ ರೋಗಿಗಳಿಂದ ಶೇ 1,192 ರಷ್ಟು ಹೆಚ್ಚಿಗೆ ಹಣವನ್ನು ಖಾಸಗಿ ಆಸ್ಪತ್ರೆಗಳು ಲೂಟಿ ಮಾಡಿವೆ ರಾಷ್ಟ್ರೀಯ ಔಷಧ ಬೆಲೆ ನಿಯಂತ್ರಣ ಪ್ರಾಧಿಕಾರ (ಎನ್‌ಪಿಪಿಎ) ವರದಿ ಹೇಳಿದೆ.

ಮುಖ್ಯ ಕಾರ್ಯದರ್ಶಿ ಮೇಲೆ ಎಎಪಿ ಶಾಸಕರ ಹಲ್ಲೆ?

ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ನಿವಾಸದಲ್ಲಿ ಸೋಮವಾರ ರಾತ್ರಿ ಆಮ್‌ ಆದ್ಮಿ ಪಕ್ಷದ(ಎಎಪಿ) ಇಬ್ಬರು ಶಾಸಕರು ತಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ದೆಹಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಅಂಶು ಪ್ರಕಾಶ್‌ ಆರೋಪಿಸಿದ್ದಾರೆ.

ಪಾಲಿಕೆ ಕಚೇರಿಯಲ್ಲಿ ಕಾಂಗ್ರೆಸ್ ಮುಖಂಡನ ದರ್ಪ

ವಿವಾದಿತ ಜಮೀನಿಗೆ ಖಾತೆ ಮಾಡಿಕೊಡದ ಕಾರಣಕ್ಕೆ ಹೊರಮಾವು ಬಿಬಿಎಂಪಿ ಕಚೇರಿಗೆ ನುಗ್ಗಿ ದಾಂದಲೆ ನಡೆಸಿರುವ ಕಾಂಗ್ರೆಸ್‌ನ ಕೆ.ಆರ್‌.ಪುರ ಬ್ಲಾಕ್‌ ಮಾಜಿ ಅಧ್ಯಕ್ಷ ನಾರಾಯಣಸ್ವಾಮಿ, ದಾಖಲೆಗಳ ಮೇಲೆ ಪೆಟ್ರೋಲ್ ಎರಚಿ ಬೆಂಕಿ ಹಚ್ಚಲು ಯತ್ನಿಸಿದ್ದಾರೆ.

ಸಂಗತ

ಮಾರುತ್ತರ ನೀಡಲು ಸಾಧ್ಯವೇ?

ನುಡಿಯ ಬಗೆಗೆ ಸಚಿವ ಅನಂತಕುಮಾರ ಹೆಗಡೆ ಹೇಳಿಕೆ ನೀಡುವ ಮೊದಲು ತಾವು ಪ್ರತಿನಿಧಿಸುವ ಕ್ಷೇತ್ರವಾದ ಉತ್ತರ ಕನ್ನಡ ಜಿಲ್ಲೆಯಲ್ಲಿ ತಮಗೆ ಮತ ನೀಡಿದ ಜನರು ಬಳಸುತ್ತಿರುವ ವಿವಿಧ ಬಗೆಯ ಉಪಭಾಷೆಗಳ ಬಗೆಗೆ ಮಾಹಿತಿಯನ್ನಾದರೂ ಪಡೆದಿದ್ದರೆ ಚೆನ್ನಾಗಿರುತ್ತಿತ್ತು

ಅಸಾಮಾನ್ಯ ಅಸಭ್ಯರು

ಹಿಂದೊಮ್ಮೆ ರೈತರು ಹಾಗೂ ಶರಣರೂ ಎರಡೂ ಆಗಿದ್ದ ಯಡಿಯೂರಪ್ಪನವರು ನಿಮ್ಮ ಮಾತನ್ನು ಖಂಡಿತವಾಗಿ ಕೇಳಿಸಿಕೊಂಡಾರು. ಒಟ್ಟು ಕತೆಯ ನೀತಿಯೆಂದರೆ ಭಾರತೀಯ ರಾಜಕಾರಣವನ್ನು ಯುಬಿ ಸಿಟಿ ಬಾರುಗಳಿಂದ ಕೆಳಗಿಳಿಸಿ ತರಬೇಕಾದ ಜರೂರು ತುಂಬ ಇದೆ!

ಅರಣ್ಯ ಪರಿಸ್ಥಿತಿ ವರದಿ ಮತ್ತು ನೈಜ ಸ್ಥಿತಿ

ಅರಣ್ಯ ಪ್ರದೇಶ ಹೆಚ್ಚಳದ ಹಿಂದಿನ ಹಾಗೂ ಸಮಾಜೋ-–ಆರ್ಥಿಕ ಆಯಾಮಗಳು ಮತ್ತು ಇಲಾಖೆಯ ಆಡಳಿತಾತ್ಮಕ ಜವಾಬ್ದಾರಿಯನ್ನು ವರದಿ ಚರ್ಚಿಸುವುದಿಲ್ಲ

ಮಾಲ್ಡೀವ್ಸ್‌ನ ರಾಜಕೀಯ ಬಿಕ್ಕಟ್ಟು–ಪರಿಹಾರ

ಭಾರತಕ್ಕೆ ಉಳಿದಿರುವ ದಾರಿಯೆಂದರೆ, ವಿಶ್ವಸಂಸ್ಥೆ ಮತ್ತು ಅಮೆರಿಕದ ಜೊತೆಗೂಡಿ ರಾಜತಾಂತ್ರಿಕ ಮಾರ್ಗದ ಮೂಲಕ ಮಾಲ್ಡೀವ್ಸ್‌ ಬಿಕ್ಕಟ್ಟನ್ನು ಪರಿಹರಿಸಲು ಶ್ರಮಿಸುವುದು.

ವಾಣಿಜ್ಯ

‘ಟಿಟಿಕೆ ಪ್ರೆಸ್ಟೀಜ್’ ಯಶೋಗಾಥೆ

ಟಿಟಿಕೆ ಗ್ರೂ‍ಪ್‌ನ ಅಂಗಸಂಸ್ಥೆಯಾಗಿರುವ ‘ಟಿಟಿಕೆ ಪ್ರೆಸ್ಟೀಜ್‌’, ಬರೀ ಪ್ರೆಷರ್‌ ಕುಕ್ಕರ್‌ ತಯಾರಿಕೆ ಸಂಸ್ಥೆ ಎನ್ನುವ ಗ್ರಾಹಕರ ನಂಬಿಕೆ ಬದಲಿಸಲು ಸಾಕಷ್ಟು ಶ್ರಮಪಟ್ಟಿದೆ. ಪ್ರೆಷರ್‌ ಕುಕ್ಕರ್‌ನಿಂದ ಹಿಡಿದು ವೈವಿಧ್ಯಮಯ ಉತ್ಪನ್ನಗಳ ಮೂಲಕ ಗ್ರಾಹಕರ ಮನ ಗೆದ್ದಿದೆ.

ಗುಂಪು ವಿಮೆ: ಜತೆಗಿರಲಿ ಇನ್ನೊಂದು ವಿಮೆ

ಕಾರ್ಪೊರೇಟ್‌ ಗುಂಪು ಆರೋಗ್ಯ ವಿಮೆ ಖಂಡಿತವಾಗಿಯೂ ಒಳ್ಳೆಯ ಉಪಕ್ರಮ.  ಹೆಚ್ಚುತ್ತಿರುವ ಆರೋಗ್ಯ ವೆಚ್ಚಗಳನ್ನು ನಿಭಾಯಿಸಲು  ಗುಂಪು ವಿಮೆಯ ಫಲಾನುಭವಿಗಳು  ಪ್ರತ್ಯೇಕ ಸ್ವತಂತ್ರ ವಿಮೆ ಮಾಡಿಸುವುದರಿಂದ ದೊರೆಯುವ ಪ್ರಯೋಜನಗಳನ್ನು ಇಲ್ಲಿ ವಿವರಿಸಲಾಗಿದೆ.

‘ಎಸ್‍ಎಂಇ’ಗಳ ಡಿಜಿಟಲೀಕರಣಕ್ಕೆ ಸೂಕ್ತ ಸಮಯ

ತಂತ್ರಜ್ಞಾನ ಸ್ಟಾರ್ಟ್‌ಅಪ್‍ಗಳ ಚಿಗುರೊಡೆಯುವಿಕೆ ಹಾಗೂ ಡಿಜಿಟಲ್ ಪಾವತಿಯ ಅಳವಡಿಕೆ ವಿಷಯದಲ್ಲಿ ದಕ್ಷಿಣ ಭಾರತ  ಮುಂಚೂಣಿಯಲ್ಲಿದೆ. ತಂತ್ರಜ್ಞಾನದ ಬೆಂಬಲದಿಂದ  ಇಲ್ಲಿಯ ಹಲವು ಉದ್ಯಮಗಳು  ತಮ್ಮ ವ್ಯವಹಾರವನ್ನು ವಿಸ್ತರಿಸಿವೆ.

ಹಣಕಾಸು ಯೋಜನೆ ಮೇಲೆ ಬಜೆಟ್‌ ಪರಿಣಾಮ

ಕೇಂದ್ರ ಸರ್ಕಾರದ ಬಜೆಟ್‌ ನಿಮ್ಮ ಹಣಕಾಸಿನ ಯೋಜನೆಗಳನ್ನು ಬದಲಾಯಿಸುತ್ತದೆಯೇ ಎನ್ನುವ ಅನುಮಾನಗಳಿಗೆ ಸಂಬಂಧಿಸಿದಂತೆ ವೈಭವ್‌ ಅಗರ್‌ವಾಲ್‌ ವಿವರಗಳನ್ನು ನೀಡಿದ್ದಾರೆ.

ತಂತ್ರಜ್ಞಾನ

ವಾಟ್ಸ್ ಆ್ಯಪ್‌ನಲ್ಲಿ ಹೀಗೂ ಇವೆ ಸುಲಭ ಉಪಾಯಗಳು

ವಾಟ್ಸ್‌ಆ್ಯಪ್‌ನಲ್ಲಿ ಫೋಟೊ ಕಳಿಸಿದರೆ ರೆಸೊಲ್ಯೂಷನ್ ಹೊರಟು ಹೋಗುತ್ತದೆ ಎಂದು ಹೇಳುವುದನ್ನು ಕೇಳಿದ್ದೇವೆ. ಆದರೆ ರೆಸೊಲ್ಯೂಷನ್ ಕಡಿಮೆಯಾಗದಂತೆ ಫೋಟೊಗಳನ್ನು ವಾಟ್ಸ್ ಆ್ಯಪ್ ನಲ್ಲಿಯೂ ಕಳುಹಿಸಬಹುದು.

ಮಾತೇ ಮಂತ್ರವಾದಾಗ!

ನಿತ್ಯ ಬಳಸುವ ಸಾಧನಗಳು ಮತ್ತು ಉಪಕರಣಗಳ ಜತೆ ಮಾತನಾಡಿಸುವಷ್ಟು ತಂತ್ರಜ್ಞಾನ ಅಭಿವೃದ್ಧಿಯಾಗಿದೆ. ಇಷ್ಟು, ದಿನ ಬಳಸುತ್ತಿದ್ದ ಟೆಕ್ಸ್ಟ್... ಕಮಾಂಡ್‌... ಟಚ್‌ಸ್ಕ್ರೀನ್ ತಂತ್ರಜ್ಞಾನಗಳನ್ನೂ ಮೀರಿ ಈಗ ಮಾತುಗಳೇ ಇನ್‌ಪುಟ್ಸ್‌ ಆಗಿ ಬದಲಾಗಿವೆ.

ಫೇಕ್‍ ನ್ಯೂಸ್ ಬಗ್ಗೆ ಎಚ್ಚರವಿರಲಿ

ಸುಳ್ಳು ಸುದ್ದಿಗಳು ಹೆಚ್ಚಾಗಿ ಆಕರ್ಷಕ ಶೀರ್ಷಿಕೆಗಳನ್ನು ಹೊಂದಿರುತ್ತವೆ. ಈ ಸುದ್ದಿಗಳ ಶೀರ್ಷಿಕೆಗಳು ನೋಡಿದ ಕೂಡಲೇ ಓದುಗರಲ್ಲಿ ಕುತೂಹಲ ಹುಟ್ಟಿಸುವಂತಿದ್ದು, ಒಳಗಿರುವ ಸುದ್ದಿಯಲ್ಲಿ ಶೀರ್ಷಿಕೆಯಲ್ಲಿ ಹೇಳಿದಂತೆ ಇರುವ ವಿಷಯಗಳು ಇರುವುದಿಲ್ಲ.

ಕಣ್ಣೀರಿನಿಂದ ಮಧುಮೇಹ ನಿಯಂತ್ರಣ?

ದೇಹದಲ್ಲಿರುವ ಸಕ್ಕರೆ ಅಂಶವನ್ನು ನಿಯಂತ್ರಣದಲ್ಲಿಡುವುದಕ್ಕಾಗಿ, ಇನ್ಸುಲಿನ್ ಚುಚ್ಚು ಮದ್ದು ಬಳಸುವುದು ಅನಿವಾರ್ಯವಾಗಿರುತ್ತದೆ.