ಉಳಿತಾಯ ಖಾತೆ ಶುಲ್ಕ ಇಳಿಕೆ

13 Mar, 2018
ಪಿಟಿಐ

ಮುಂಬೈ : ಉಳಿತಾಯ ಖಾತೆಗಳಲ್ಲಿ ತಿಂಗಳ ಕನಿಷ್ಠ ಮೊತ್ತ ಕಾಯ್ದುಕೊಳ್ಳದೇ ಇರುವ ಗ್ರಾಹಕರಿಗೆ ವಿಧಿಸುತ್ತಿರುವ ಶುಲ್ಕವನ್ನು ಭಾರತೀಯ ಸ್ಟೇಟ್‌ ಬ್ಯಾಂಕ್‌ (ಎಸ್‌ಬಿಐ) ಶೇ 75 ರವರೆಗೂ ಇಳಿಕೆ ಮಾಡಿದೆ.

ಪರಿಷ್ಕೃತ ಶುಲ್ಕವು ಏಪ್ರಿಲ್‌ 1 ರಿಂದ ಅನ್ವಯಿಸಲಿದೆ. ಮಹಾನಗರ ಮತ್ತು ಪಟ್ಟಣ ಪ್ರದೇಶದ ಗ್ರಾಹಕರಿಗೆ ವಿಧಿಸುತ್ತಿದ್ದ ಶುಲ್ಕವನ್ನು ₹ 50 ರಿಂದ ₹ 15ಕ್ಕೆ ತಗ್ಗಿಸಲಾಗಿದೆ. ಶೇ 18 ರಷ್ಟು ಸೇವಾ ತೆರಿಗೆ ‍ಪ್ರತ್ಯೇಕವಾಗಿ ಅನ್ವಯವಾಗಲಿದೆ. ಬ್ಯಾಂಕ್‌ನ 25 ಕೋಟಿ ಖಾತೆದಾರರು ಇದರ ಲಾಭ ಪಡೆಯಲಿದ್ದಾರೆ.

ಅರೆಪಟ್ಟಣ ಮತ್ತು ಗ್ರಾಮೀಣ ಪ್ರದೇಶದಲ್ಲಿ ₹ 40 ರಷ್ಟು ಶುಲ್ಕ ಇತ್ತು. ಅದನ್ನು ಕ್ರಮವಾಗಿ ₹ 12 ಮತ್ತು ₹ 10ಕ್ಕೆ ಇಳಿಸಲಾಗಿದೆ ಎಂದು ಬ್ಯಾಂಕ್‌ ಪ್ರಕಟಣೆಯಲ್ಲಿ ತಿಳಿಸಿದೆ.

‘ಗ್ರಾಹಕರ ಹಿತರಕ್ಷಣೆಗೆ ಆದ್ಯತೆ ನೀಡುವ ಬಗ್ಗೆ ಬ್ಯಾಂಕ್ ಹೆಚ್ಚು ಗಮನ ನೀಡುತ್ತಾ ಬಂದಿದೆ. ಗ್ರಾಹಕರ ನಿರೀಕ್ಷೆಯನ್ನು ಈಡೇರಿಸುವ ನಿಟ್ಟಿನಲ್ಲಿ ನಾವು ಕೈಗೊಳ್ಳುತ್ತಿರುವ ಕ್ರಮಗಳಲ್ಲಿ ಇದೂ ಸಹ ಒಂದು ಪ್ರಮುಖ ನಿರ್ಧಾರವಾಗಿದೆ’ ಎಂದು ಬ್ಯಾಂಕ್‌ನ ವ್ಯವಸ್ಥಾಪಕ ನಿರ್ದೇಶಕ ಪಿ.ಕೆ. ಗುಪ್ತಾ ಅವರು ತಿಳಿಸಿದ್ದಾರೆ.

‘ನಿಯಮಿತ ಉಳಿತಾಯ ಖಾತೆಯಿಂದ (ರೆಗ್ಯುಲರ್‌ ಸೇವಿಂಗ್ಸ್‌ ಅಕೌಂಟ್‌) ಮೂಲ ಉಳಿತಾಯ ಬ್ಯಾಂಕ್‌ ಠೇವಣಿ ಖಾತೆ (ಬೇಸಿಕ್‌ ಸೇವಿಂಗ್ಸ್‌ ಬ್ಯಾಂಕ್‌ ಡೆಪಾಸಿಟ್‌ ಅಕೌಂಟ್‌–ಬಿಎಸ್‌ಬಿಡಿಎ) ವರ್ಗಾವಣೆ ಆದರೆ ಯಾವುದೇ ಶುಲ್ಕ ಇರುವುದಿಲ್ಲ. ಗ್ರಾಹಕರು ಯಾವಾಗ ಬೇಕಿದ್ದರೂ ಈ ಸೌಲಭ್ಯಕ್ಕೆ ವರ್ಗಾವಣೆ ಆಗಬಹುದು’ ಎಂದು ಅವರು ಹೇಳದ್ದಾರೆ.

‘ಬಿಎಸ್‌ಬಿಡಿಎ’ಗೆ ಇರುವ ಮಿತಿಗಳು: ಈ ಖಾತೆ ಹೊಂದಲು ಆರ್‌ಬಿಐ ಕೆಲವು ಮಿತಿಗಳನ್ನು ವಿಧಿಸಿದೆ.  ಈ ಖಾತೆ ಹೊಂದಿರುವವರು ನಿರ್ದಿಷ್ಟ ಬ್ಯಾಂಕ್‌ನಲ್ಲಿ ಬೇರೆ ಯಾವುದೇ ರೀತಿಯ ಉಳಿತಾಯ ಬ್ಯಾಂಕ್‌ ಠೇವಣಿ ಖಾತೆ ಹೊಂದುವಂತಿಲ್ಲ. ಹಾಗೊಂದು ವೇಳೆ ಖಾತೆ ಹೊಂದಿದ್ದರೆ, ’ಬಿಎಸ್‌ಬಿಡಿಎ’ ತೆರೆದ 30 ದಿನದ ಒಳಗಾಗಿ ಆ ಖಾತೆಯನ್ನು ಸ್ಥಗಿತಗೊಳಿಸಬೇಕು.

ಈ ಮಿತಿಗಳ ಹೊರತಾಗಿ ಈ ಖಾತೆಯು, ಉಳಿತಾಯ ಖಾತೆಯ ಎಲ್ಲ ಸೌಲಭ್ಯಗಳಿಗೂ ಅರ್ಹವಾಗಿರುತ್ತದೆ. ಎಲ್ಲರಿಗೂ ಲಭ್ಯವಿರುವ ಸಾಮಾನ್ಯ ಬ್ಯಾಂಕ್‌ ಸೇವೆಯಂತೆಯೇ ಇದನ್ನು ಪರಿಗಣಿಸಲಾಗುವುದು. ಖಾತೆಯಲ್ಲಿ ಕನಿಷ್ಠ ಮೊತ್ತ ಹೊಂದಿರಲೇ ಬೇಕು ಎನ್ನುವ ಅಗತ್ಯ ಇಲ್ಲ.  ಬ್ಯಾಂಕ್‌ ಶಾಖೆ ಮತ್ತು ಎಟಿಎಂಗಳಲ್ಲಿ ಹಣ ಸ್ವೀಕೃತಿ ಮತ್ತು ಪಾವತಿ, ಕೇಂದ್ರ ಅಥವಾ ರಾಜ್ಯ ಸರ್ಕಾರಿ ಸಂಸ್ಥೆಗಳು ಮತ್ತು ಇಲಾಖೆಗಳ ಹಣವನ್ನು ಎಲೆಕ್ಟ್ರಾನಿಕ್ ಪಾವತಿ ಸೌಲಭ್ಯಗಳ ಮೂಲಕ ಅಥವಾ ಚೆಕ್‌ ರೂಪದಲ್ಲಿ ಪಡೆಯಬಹುದು. 

ಒಂದು ತಿಂಗಳಿನಲ್ಲಿ ನಾಲ್ಕು ಬಾರಿ ಮಾತ್ರವೇ ಹಣ ಪಡೆಯಬಹುದು. ಶುಲ್ಕವಿಲ್ಲದೇ ಎಟಿಎಂ ಕಾರ್ಡ್‌ ಅಥವಾ ಡೆಬಿಟ್‌ ಕಾರ್ಡ್‌ ವಿತರಿಸಲಾಗುವುದು.

₹1,772 ಕೋಟಿ ಸಂಗ್ರಹ
2017–18ನೇ ಆರ್ಥಿಕ ವರ್ಷದ ಏಪ್ರಿಲ್‌–ನವೆಂಬರ್‌ ಅವಧಿಯಲ್ಲಿ ಕನಿಷ್ಠ ಮೊತ್ತ ನಿರ್ವಹಣೆ ಮಾಡದೇ ಇರುವ ಖಾತೆಗಳಿಂದ ಬ್ಯಾಂಕ್‌ ಶುಲ್ಕದ ರೂಪದಲ್ಲಿ ₹ 1,772 ಕೋಟಿ ಸಂಗ್ರಹಿಸಿತ್ತು. 2017ರ ಏಪ್ರಿಲ್‌ 1 ರಿಂದ ಶುಲ್ಕ ವಿಧಿಸಲು ಆರಂಭಿಸಿತ್ತು.

ಏಪ್ರಿಲ್ - ಸೆಪ್ಟೆಂಬರ್ ಅವಧಿಯಲ್ಲಿ ಬ್ಯಾಂಕ್‍ನ ಲಾಭದ ಮೊತ್ತವಾದ ₹3,586 ಕೋಟಿಯ ಅರ್ಧದಷ್ಟು ಮೊತ್ತ ಶುಲ್ಕ ವಸೂಲಿಯಿಂದಲೇ ಬಂದಿದೆ. ಗ್ರಾಹಕರಿಂದ ವ್ಯಾಪಕ ವಿರೋಧ ವ್ಯಕ್ತವಾಗಿದ್ದರಿಂದ ಶುಲ್ಕ ಇಳಿಸುವ ನಿರ್ಧಾರಕ್ಕೆ ಬರಲಾಗಿದೆ.

41.2 ಲಕ್ಷ ಎಸ್‌ಬಿ ಖಾತೆ ಸ್ಥಗಿತ

ಏಪ್ರಿಲ್‌–ಜನವರಿ ಅವಧಿಯಲ್ಲಿ ಕನಿಷ್ಠ ಮೊತ್ತ ಕಾಯ್ದುಕೊಳ್ಳದ 41.2 ಲಕ್ಷ ಉಳಿತಾಯ ಖಾತೆಗಳನ್ನು ಸ್ಥಗಿತಗೊಳಿಸಿರುವುದಾಗಿ ಎಸ್‌ಬಿಐ ತಿಳಿಸಿದೆ.

ಮಾಹಿತಿ ಹಕ್ಕು ಕಾಯ್ದೆಯಡಿ ಮಧ್ಯಪ್ರದೇಶದ ಚಂದ್ರ ಶೇಖರ ಗೌಡ ಎಂಬುವವರು ಕೇಳಿರುವ ಪ್ರಶ್ನೆಗೆ ಬ್ಯಾಂಕ್‌ ಈ ಮಾಹಿತಿ ನೀಡಿದೆ.

**

ಗ್ರಾಹಕರು ನೀಡಿರುವ ಪ್ರತಿಕ್ರಿಯೆ ಪರಿಗಣಿಸಿ ಶುಲ್ಕದಲ್ಲಿ ಇಳಿಕೆ ಮಾಡಲಾಗಿದೆ
– ಪಿ.ಕೆ. ಗುಪ್ತಾ, ಎಸ್‌ಬಿಐ ವ್ಯವಸ್ಥಾಪಕ ನಿರ್ದೇಶಕ

Read More

Comments
ಮುಖಪುಟ

ಕೇಂದ್ರದ ವಿರುದ್ಧ ಅವಿಶ್ವಾಸ ಗೊತ್ತುವಳಿ ಮಂಡನೆಗೆ ಕಾಂಗ್ರೆಸ್ ನೋಟಿಸ್

ನರೇಂದ್ರ ಮೋದಿ ನೇತೃತ್ವದ ಸರ್ಕಾರದ ವಿರುದ್ಧ ಅವಿಶ್ವಾಸ ಗೊತ್ತುವಳಿ ಮಂಡಿಸಲು ಅವಕಾಶ ನೀಡುವಂತೆ ಪ್ರತಿಪಕ್ಷ ಕಾಂಗ್ರೆಸ್ ಸಹ ನೋಟಿಸ್ ನೀಡಿದೆ. ಈ ಕುರಿತು ಮನವಿ ಮಾಡಿ ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಲೋಕಸಭೆಯ ಪ್ರಧಾನ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ.

ಟ್ರಂಪ್‌ ಜತೆ ಪ್ರೀತಿಯಾಗಿತ್ತು: ಮಾಜಿ ರೂಪದರ್ಶಿ ಕರೆನ್‌ ಮ್ಯಾಕ್‌ಡೌಗಲ್‌

’ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರನ್ನು ಪ್ರೀತಿಸುತ್ತಿದ್ದೆ’ ಎಂದು ಮಾಜಿ ಪ್ಲೇಬಾಯ್‌ ರೂಪದರ್ಶಿ ಕರೆನ್‌ ಮ್ಯಾಕ್‌ಡೌಗಲ್‌ ಬಹಿರಂಗಪಡಿಸಿದ್ದಾರೆ.

‘ರಾಜರಥ’ದ ಪ್ರೀತಿಯ ಪಯಣ

ನೆಲ, ಭಾಷೆಯ ಚೌಕಟ್ಟು ಇಟ್ಟುಕೊಂಡು ಅದಕ್ಕೆ ಪ್ರೀತಿಯ ಹೂರಣ ಬೆರೆಸಿದ ಚಿತ್ರಗಳು ಹೊಸತೇನಲ್ಲ. ಒಂದಿಷ್ಟು ಹಾಸ್ಯ ಲೇಪಿಸಿ ಪ್ರೀತಿ ಮತ್ತು ಬದುಕು ಎರಡನ್ನೂ ‘ರಾಜರಥ’ದಲ್ಲಿ ಹಿಡಿಯುವ ಪ್ರಯತ್ನ ಮಾಡಿದ್ದಾರೆ ನಿರ್ದೇಶಕ ಅನೂಪ್‌ ಭಂಡಾರಿ.

‘ಪ್ರಧಾನಿ ಮೋದಿಯವರ ಕಳೆದುಹೋದ ಅಂಕಪಟ್ಟಿ ಸಿಕ್ಕಿತು!’ ರಮ್ಯಾ ಟ್ವೀಟ್

ಪ್ರಧಾನಿ ನರೇಂದ್ರ ಮೋದಿಯವರ ಕಳೆದುಹೋದ ಅಂಕ ಪಟ್ಟಿ ಸಿಕ್ಕಿದೆ ಎಂದು ಕಾಂಗ್ರೆಸ್‌ ಸಾಮಾಜಿಕ ಜಾಲತಾಣ ಮುಖ್ಯಸ್ಥೆ ರಮ್ಯಾ ಟ್ವೀಟ್ ಮಾಡಿದ್ದು, ರಿ‍ಪೋರ್ಟ್ ಕಾರ್ಡ್ ಎಂಬ ಹೆಸರಿನ ಅಂಕಪಟ್ಟಿಯೊಂದನ್ನು ಪ್ರಕಟಿಸಿದ್ದಾರೆ. ಇದರಲ್ಲಿ ಪ್ರಧಾನಿಗೆ ‘ಡಿ’ ಶ್ರೇಣಿ ನೀಡಲಾಗಿದ್ದು, ಪಠ್ಯೇತರ ಚಟುವಟಿಕೆ ವಿಭಾಗದಲ್ಲಿ ‘ಹಿಂಸೆ’ ಮತ್ತು ‘ಕೋಮುವಾದ’ವನ್ನು ಆಯ್ದುಕೊಂಡ ಬಗ್ಗೆ ನಮೂದಿಸಲಾಗಿದೆ. 

ಸಂಗತ

ವಚನ: ಹೊಸಧರ್ಮದ ತಳಹದಿಯಾಗಬಲ್ಲುದೇ?

ವೀರಶೈವದಿಂದ ಪ್ರತ್ಯೇಕಗೊಂಡು ಸ್ವತಂತ್ರ ಲಿಂಗಾಯತ ಧರ್ಮದ ಮಾನ್ಯತೆಗಾಗಿ ಹೋರಾಡುತ್ತಿರುವವರ ಪರವಾಗಿ ಸಂಪುಟ ಸಭೆಯಲ್ಲಿ ನಡೆದ ಚರ್ಚೆಯಲ್ಲಿ ವಚನಗಳೇ ಲಿಂಗಾಯತ ಧರ್ಮ ಪ್ರಮಾಣ ಗ್ರಂಥವೆಂದು ಸಚಿವರೊಬ್ಬರು ಹೇಳಿದ್ದಾರೆ.

ಮೌಲ್ಯ... ಜನತಂತ್ರದ ಅಂತಃಸತ್ವ

ಮತದಾನ ಕೆಳಗಿನಿಂದ ಮೇಲ್ಮುಖವಾಗಿ ಚಲಿಸುವ ಪ್ರಕ್ರಿಯೆ. ಮತದಾರರು ತಮ್ಮ ಮತಗಳನ್ನು ಬೆಂಬಲವಾಗಿ ಅಥವಾ ಪ್ರತಿರೋಧದ ಅಸ್ತ್ರಗಳಾಗಿ ಚಲಾಯಿಸುವ ಸ್ವಾಯತ್ತತೆಯನ್ನು ಪಡೆದಿರುತ್ತಾರೆ. ಈ ಸೈದ್ಧಾಂತಿಕ ನೆಲೆಗಟ್ಟಿನಲ್ಲಿ ಅಂಬೇಡ್ಕರ್‌ ಅವರು ‘ಶಿಕ್ಷಣ, ಸಂಘಟನೆ, ಹೋರಾಟ’ ಎಂಬ ಅನುಭವದ ಅರಿವನ್ನು ಬಹುಜನರಿಗೆ ಕಾಣಿಸಿರುವುದನ್ನು ನಾವು ಮನಗಾಣಬಹುದು.

ಪ್ರಣಾಳಿಕೆಯಲ್ಲಿರಲಿ ಕಾಡಿನ ಹಿತ

ಪರಿಸರ ನಾಶದ ವಿರುದ್ಧ ಈ ಚುನಾವಣಾ ಗಳಿಗೆಯಲ್ಲಾದರೂ ಧ್ವನಿ ಎತ್ತಬೇಕಿದೆ.

ಮೈತ್ರಿ ರಾಜಕೀಯದ ಹೊಸ ಹಾದಿ

ಇದೀಗ ಹಲವು ರಾಜಕೀಯ ಪಕ್ಷಗಳ ‘ಕಾಮನಬಿಲ್ಲು ಒಕ್ಕೂಟ’ ಮಾಡಲೆತ್ನಿಸುತ್ತಿರುವ ಕಾಂಗ್ರೆಸ್, ತನ್ನ ಅಖಿಲ ಭಾರತೀಯ ಪಾರ್ಟಿಯ ಹಮ್ಮು ಬಿಟ್ಟು ಬಾಗಿದರೆ ಮಾತ್ರ ಮುಂಬರುವ ಮಹಾಚುನಾವಣೆಯಲ್ಲಿ ಹೊಸ ಹಾದಿ ಕಂಡೀತು!

ಚಂದನವನ

ನೃತ್ಯ, ನಟನೆ ಮತ್ತು ಮಾನಸಾ

ಕಲಾರಾಧಕರ ಕುಟುಂಬದಿಂದ ಬಂದ ಕೃಷ್ಣಸುಂದರಿ ಓದಿದ್ದು ಪತ್ರಿಕೋದ್ಯಮವಾದರೂ ಬದುಕು ಕಟ್ಟಿಕೊಂಡಿದ್ದು ನಟನಾ ರಂಗದಲ್ಲಿ. ಮನೆಯವರ ಬೆಂಬಲದ ನಡುವೆ ನಟನೆಯಲ್ಲಿಯೇ ಸಾಧನೆಯ ಕನಸು ಕಾಣುತ್ತಿದ್ದಾರೆ...

ಕ್ರೀಡಾಪಟು ಖಳನಟನಾದ ಕಥೆ

ಚೆಲುವರಾಜ್‌ ಅವರದು ಹಾಸನ ಜಿಲ್ಲೆಯ ಚನ್ನರಾಯಪಟ್ಟಣ. ರಾಷ್ಟ್ರಮಟ್ಟದ ವಾಲಿಬಾಲ್‌ ಆಟಗಾರನಾಗಿದ್ದ ಅವರು ನಟನಾ ಕ್ಷೇತ್ರ ಪ್ರವೇಶಿಸಿದ್ದು ಆಕಸ್ಮಿಕ. ಕಿರುತೆರೆಯಲ್ಲಿ ಖಳನಟನ ಪಾತ್ರದಲ್ಲಿ ಮಿಂಚುತ್ತಿದ್ದಾರೆ. ಅವರು ಪೊಲೀಸ್‌ ಅಧಿಕಾರಿಯಾಗಿ ನಟಿಸಿರುವ ‘ಸಮರ್ಥ’ ಚಿತ್ರ ಬಿಡುಗಡೆಗೆ ಸಿದ್ಧವಾಗಿದೆ.

‘ರಾಜರಥ’ದ ಸವಾರಿ

‘ರಾಜರಥ’ ಬಸ್‌ನ ಕಥೆ. ಕನ್ನಡದಲ್ಲಿ ನಟ ಪುನೀತ್‌ ರಾಜ್‌ಕುಮಾರ್‌ ಬಸ್‌ಗೆ ಧ್ವನಿಯಾಗಿದ್ದಾರೆ. ತೆಲುಗಿನಲ್ಲಿ ರಾ.ನಾ. ದಗ್ಗುಬಾಟಿ ಧ್ವನಿ ನೀಡಿದ್ದಾರೆ. ಇದು ಕೌಟುಂಬಿಕ ಚಿತ್ರ. ಕಾಲೇಜು ಹುಡುಗ ಮತ್ತು ಹುಡುಗಿಯ ನಡುವೆ ನಡೆಯುವ ಕಥನ’ ಎಂದು ವಿವರಿಸಿದರು ಅನೂಪ್.

‘ವರ್ತಮಾನ’ಕ್ಕೆ ಭವಿಷ್ಯದಲ್ಲಿ ನಂಬಿಕೆ!

ವರ್ತಮಾನ’ದ ಮಹತ್ವ, ಅದನ್ನು ಬದುಕಬೇಕಾದ ರೀತಿ, ಅದನ್ನು ಅರ್ಥಮಾಡಿಕೊಳ್ಳಬೇಕಾದ ಬಗೆಯನ್ನೇ ಇಟ್ಟುಕೊಂಡು ಸಿನಿಮಾ ಮಾಡಿದ್ದಾರೆ ಉಮೇಶ್ ಅಂಶಿ. ಅದರ ಹೆಸರೂ ‘ವರ್ತಮಾನ’.